Homeಮುಖಪುಟಪಂಜಾಬ್ ಲೂಧಿಯಾನ ಮಹಾಪಂಚಾಯತ್‌ನಲ್ಲಿ ಲಕ್ಷಕ್ಕೂ ಅಧಿಕ ರೈತರು ಭಾಗಿ: ಚಳವಳಿ ತೀವ್ರಗೊಳಿಸಲು ನಿರ್ಧಾರ

ಪಂಜಾಬ್ ಲೂಧಿಯಾನ ಮಹಾಪಂಚಾಯತ್‌ನಲ್ಲಿ ಲಕ್ಷಕ್ಕೂ ಅಧಿಕ ರೈತರು ಭಾಗಿ: ಚಳವಳಿ ತೀವ್ರಗೊಳಿಸಲು ನಿರ್ಧಾರ

ಲೂಧಿಯಾನ, ಮೊಗಾ ಮತ್ತು ಬರ್ನಾಲಾ ಪ್ರದೇಶಗಳ ರೈತರು ಮತ್ತು ಕಾರ್ಮಿಕರ ಜೊತೆಗೆ ಸ್ಥಳೀಯರು ಸಹ ಮಹಾಪಂಚಾಯತ್‌ನಲ್ಲಿ ಭಾಗವಹಿಸಿ ರೈತ ಹೋರಾಟಕ್ಕೆ ಬೆಂಬಲ ಘೋಷಿಷಿದ್ದಾರೆ.

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟ ಈಗ ಸುತ್ತಲಿನ ರಾಜ್ಯಗಳಿಗೆ ಹರಡಿದೆ. ಫೆಬ್ರವರಿ ಆರಂಭದಲ್ಲಿ ಯಾವಾಗ ಸರ್ಕಾರ ಗಡಿಗಳಲ್ಲಿ ಮುಳ್ಳುತಂತಿ, ಬ್ಯಾರಿಕೇಡ್ ಹಾಕಿ ರೈತರೊಂದಿಗೆ ಮಾತುಕತೆ ನಿಲ್ಲಿಸಿತೋ ಅಂದಿನಿಂದ ರೈತರು ದೆಹಲಿ ಸುತ್ತದ ರಾಜ್ಯಗಳತ್ತ ಮುಖ ಮಾಡಿದ್ದಾರೆ. ಕಿಸಾನ್ ಮಹಾಪಂಚಾಯತ್ ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಸಭೆಗಳಿಗೆ ಲಕ್ಷಾಂತರ ರೈತರು ಭಾಗವಹಿಸಿ ಹೋರಾಟಕ್ಕೆ ಬೆಂಬಲ ಘೋಷಿಸುತ್ತಿದ್ದಾರೆ. ಈಗಾಗಲೇ ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಹತ್ತಾರು ಮಹಾಪಂಚಾಯತ್‌ಗಳು ನಡೆದಿವೆ. ಇಂದು ರೈತ ಚಳವಳಿ ಉತ್ತುಂಗದಲ್ಲಿರುವ ಪಂಜಾಬ್‌ನಲ್ಲಿ ಮೊದಲ ಕಿಸಾನ್ ಮಹಾಪಂಚಾಯತ್ ನಡೆದಿದ್ದು ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ.

ಪಂಜಾಬ್‌ನ ಲೂಧಿಯಾನ ಜಿಲ್ಲೆಯ ಜಾಗ್ರಾವ್ನ್ ಮಾರುಕಟ್ಟೆಯಲ್ಲಿ ಪಂಜಾಬ್‌ನ 31 ರೈತ ಸಂಘಟನೆಗಳು ಜಂಟಿಯಾಗಿ ಕಿಸಾನ್ ಮಹಾಪಂಚಾಯತ್ ಆಯೋಜಿಸಿದ್ದವು. ಮಾರುಕಟ್ಟೆ ಅಂಗಳದ ತುಂಬೆಲ್ಲಾ ರೈತರು ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ತಾರು ರೈತ ಮುಖಂಡರು ಮಾತನಾಡಿ ಸಂಯುಕ್ತಾ ಕಿಸಾನ್ ಮೋರ್ಚಾದ ಕರೆ ಮೇರೆಗೆ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್‌ನ ಮಂಜೀತ್ ಸಿಂಗ್ ಧಾನರ್, ಬಿಕೆಯು‌ ಉಗ್ರಾಣ್‌ನ ಎಸ್.ಜೋಗಿಂದರ್ ಸಿಂಗ್, ಸುಖದೇವ್ ಸಿಂಗ್ ಕೊಕ್ರಿಕಾಲನ್, ಕುಲ್ವಂತ್ ಸಿಂಗ್ ಸಂಧು ಮುಂತಾದ ರೈತನಾಯಕರು ಮಾತನಾಡಿ ಸಿಂಘು ಗಡಿಯಲ್ಲಿನ ಒಂದು ಭಾಗದ ರೈತರ ಮೇಲೆ ಬಿಜೆಪಿ ಕಾರ್ಯಕರ್ತರ ಕಲ್ಲು ತೂರಾಟವನ್ನು ತೀವ್ರವಾಗಿ ಖಂಡಿಸಿದರು.

ರೈತ ಹೋರಾಟವನ್ನು ಮುನ್ನಡೆಸಲು ಐಕ್ಯತೆಯನ್ನು ಪ್ರದರ್ಶಿಸಿದ ರೈತ ಮುಖಂಡರು ಟಿಕ್ರಿ, ಸಿಂಘು ಮತ್ತು ಇತರ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಸಾಧ್ಯವಾದ ಮಟ್ಟಿಗೆ ಹೋಗಿ ಸೇರಿಕೊಳ್ಳಬೇಕೆಂದು ಕರೆ ನೀಡಿದರು.

ರೈತ ಮುಖಂಡರು ಪಂಜಾಬ್‌ನ ಯಾವುದೇ ರಾಜಕೀಯ ಪಕ್ಷವನ್ನು ಹೊಗಳುವುದನ್ನು ತಪ್ಪಿಸಿದ್ದು, ರೈತರ ಸಮಸ್ಯೆ ಬಗೆಹರಿಯುವುದೇ ತಮ್ಮ ಆದ್ಯತೆ ಎಂದು ಘೋಷಿಸಿದ್ದಾರೆ.

ಲೂಧಿಯಾನ, ಮೊಗಾ ಮತ್ತು ಬರ್ನಾಲಾ ಪ್ರದೇಶಗಳ ರೈತರು ಮತ್ತು ಕಾರ್ಮಿಕರ ಜೊತೆಗೆ ಸ್ಥಳೀಯರು ಸಹ ಮಹಾಪಂಚಾಯತ್‌ನಲ್ಲಿ ಭಾಗವಹಿಸಿ ರೈತ ಹೋರಾಟಕ್ಕೆ ಬೆಂಬಲ ಘೋಷಿಷಿದ್ದಾರೆ.


ಇದನ್ನೂ ಓದಿ: ಟೋಲ್ ಪ್ಲಾಜಾ ಮುತ್ತಿಗೆ, ದೇಶಾದ್ಯಂತ ರೈಲು ತಡೆ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...