Homeಕರ್ನಾಟಕ2 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್‌ಗಳು ರದ್ದು: ಸಚಿವ ಉಮೇಶ್ ಕತ್ತಿ

2 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್‌ಗಳು ರದ್ದು: ಸಚಿವ ಉಮೇಶ್ ಕತ್ತಿ

- Advertisement -
- Advertisement -

ಟಿವಿ, ಫ್ರಿಡ್ಜ್‌ ಹೊಂದಿರುವವರಿಗೆ ಪಡಿತರ ಚೀಟಿಯ ಸೌಲಭ್ಯ ಇರುವುದಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಉಮೇಶ್ ಕತ್ತಿ, ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಪಡಿತರ ಚೀಟಿಗಳನ್ನು ಅನರ್ಹಗೊಳಿಸಿರುವುದಾಗಿ ಹೇಳಿಕೆ ನೀಡಿದ್ದಾರೆ.

ಮಂಗಳವಾರ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಪಿ.ಆರ್‌. ರಮೇಶ್‌ ಪ್ರಶ್ನೆಗೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು “ರಾಜ್ಯದಲ್ಲಿ 2,28,188 ಅನರ್ಹ ಬಿಪಿಎಲ್‌ ಪಡಿತರ ಚೀಟಿಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದೆ. ಅರ್ಹತೆ ಇಲ್ಲದೆ ಬಿಪಿಎಲ್‌ ಪಡಿತರ ಚೀಟಿ ಪಡೆದಿದ್ದ ವ್ಯಕ್ತಿಗಳಿಂದ ₹ 3.07 ಕೋಟಿ ದಂಡ ವಸೂಲಿ ಮಾಡಲಾಗಿದೆ” ಎಂದು ತಿಳಿಸಿದರು.

“ರಾಜ್ಯದಲ್ಲಿ 10.90 ಲಕ್ಷ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳು ಮತ್ತು 1.16 ಕೋಟಿ ಬಿಪಿಎಲ್‌ ಪಡಿತರ ಚೀಟಿಗಳಿವೆ. ಅನರ್ಹ ಪಡಿತರ ಚೀಟಿಗಳನ್ನು ಪತ್ತೆಹಚ್ಚಲು ಕೆಲವು ಮಾನದಂಡಗಳನ್ನು ನಿಗದಿಪಡಿಸಲಾಗಿದೆ. ಅದರ ಪ್ರಕಾರ ಪತ್ತೆಕಾರ್ಯ ನಡೆಯುತ್ತಿದೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಡಿಜಿಪಿ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್‌ ಪ್ರಶ್ನೆಗೆ ಉತ್ತರಿಸಿದ ಉಮೇಶ್ ಕತ್ತಿ, “2018–19ರಿಂದ 2020–21ರ ಅವಧಿಯಲ್ಲಿ ಪಡಿತರ ಸಾಮಗ್ರಿಯ ಅಕ್ರಮ ಸಾಗಣೆ ಮತ್ತು ದಾಸ್ತಾನು ಮಾಡಿ ಆರೋಪದಲ್ಲಿ 786 ಪ್ರಕರಣ ದಾಖಲಿಸಲಾಗಿದೆ. 63,637 ಕ್ವಿಂಟಲ್‌ ಅಕ್ಕಿ, 783 ಕ್ವಿಂಟಲ್‌ ಗೋಧಿ ಮತ್ತು 630 ಕ್ವಿಂಟಲ್‌ ರಾಗಿ ವಶಪಡಿಸಿಕೊಳ್ಳಲಾಗಿದೆ” ಎಂದು ವಿವರಣೆ ನೀಡಿದರು.

ಈ ಹಿಂದೆ ಟಿವಿ, ಫ್ರಿಡ್ಜ್, ಬೈಕ್ ಹೊಂದಿರುವವರಿಗೆ ಪಡಿತರ ಸೌಲಭ್ಯ ಇರುವುದಿಲ್ಲ ಎಂದು ಸಚಿವರು ಹೇಳಿದ್ದರು. ಇದಕ್ಕೆ ರಾಜ್ಯದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಈ ಹೇಳಿಕೆಗೆ ಸ್ಪಷ್ಟನೆ ನೀಡಿದ್ದರು.


ಇದನ್ನೂ ಓದಿ: ಇಂದು ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸಲಿರುವ ಮಮತಾ ಬ್ಯಾನರ್ಜಿ; ಅವರು ಹೇಳಿದ್ದೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...