Homeರೈತ ಹೋರಾಟರೈತ ಹೋರಾಟದ ಹಾಡು ’ಕಿಸಾನ್ ಆಂಥೆಮ್’‌ ವೀಕ್ಷಿಸಿದ 2 ಕೋಟಿ ಜನ: ಗೀತೆ ರಚನೆಕಾರನ ಬಂಧನ!

ರೈತ ಹೋರಾಟದ ಹಾಡು ’ಕಿಸಾನ್ ಆಂಥೆಮ್’‌ ವೀಕ್ಷಿಸಿದ 2 ಕೋಟಿ ಜನ: ಗೀತೆ ರಚನೆಕಾರನ ಬಂಧನ!

ಈ ಹಾಡು ವೈರಲ್ ಆದ ನಂತರ ಶ್ರೀ ಬ್ರಾರ್‌ರನ್ನು ಹಣಿಯುವುದಕ್ಕಾಗಿ ಜನವರಿ 03 ರಂದು ಅವರ ಮೇಲೆ ಹಿಂಸೆಗೆ ಪ್ರಚೋದನೆ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಭರ್ತಿ 50 ದಿನಗಳನ್ನು ಪೂರೈಸಿದೆ. ಅದೇ ರೀತಿಯಾಗಿ ಈ ಹೋರಾಟ ಬೆಂಬಲಿಸಿ ತಯಾರಾದ ಕಿಸಾನ್ ಆಂಥೆಮ್ (ರೈತ ಗೀತೆ) ಅನ್ನು ಬರೋಬ್ಬರಿ 2 ಕೋಟಿ ಜನ ವೀಕ್ಷಿಸುವ ಮೂಲಕ ಬೆಂಬಲ ಸೂಚಿಸಿದ್ದಾರೆ. ದೆಹಲಿ ಹೋರಾಟದ ಅಧಿಕೃತ ಗೀತೆಯಾಗಿ ಹೊರಹೊಮ್ಮಿರುವ ಈ ಕಿಸಾನ್ ಆಂಥೆಮ್ ರಚಿಸಿದ ಪವನ್ ದೀಪ್‌ ಆಲಿಯಾಸ್ ಶ್ರೀ ಬ್ರಾರ್‌ರನ್ನು ಪಟಿಯಾಲ CIA ಪೊಲೀಸರು ಬಂಧಿಸಿದ್ದು ಒಂದು ವಾರಗಳ ನಂತರ ನಿನ್ನೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಶ್ರೀ ಬ್ರಾರ್ ರಚಿಸಿರುವ “ಸ್ವರಾಜ ಪಿಚೆ ಬರಿಗೇಟ್ ಪಾಯೆ ಹೋಯಿ ನೆ” ಹಾಡು ಲಕ್ಷಾಂತರ ಜನರಿಗೆ ಈ ಆಂದೋಲನಕ್ಕೆ ಸೇರಲು ಪ್ರೇರಣೆ ನೀಡಿತು. ಆದರೆ ಇದು ಕೇಂದ್ರ ಮತ್ತು ಗೃಹ ಸಚಿವಾಲಯದ ಕಣ್ಣು ಕೆಂಪಾಗಿಸಿತು. ಇದಕ್ಕಾಗಿಯೇ ಶ್ರೀ ಬ್ರಾರ್ ಅವರು ಒಂದು ತಿಂಗಳ ಹಿಂದೆ ಬರೆದ ಮತ್ತೊಂದು ಹಾಡಿಗೆ ಸಂಬಂಧಿಸಿದಂತೆ ಹಿಂಸೆಗೆ ಪ್ರಚೋದನೆ ನೀಡಿದ್ದಾರೆ ಎಂದು ಅವರನ್ನು ಪಟಿಯಾಲ ಪೊಲೀಸರು ಬಂಧಿಸಿದ್ದಾರೆ ಎಂದು ಯುವ ಅಕಾಲಿ ದಳದ ಅಧ್ಯಕ್ಷ ಪರಂಬನ್ಸ್ ಸಿಂಗ್ ರೊಮಾನಾ ಆರೋಪಿಸಿದ್ದಾರೆ.

ಅವರ ಬಂಧನದ ಹಿಂದೆ ಗೃಹ ಸಚಿವ ಅಮಿತ್ ಶಾರವರ ಹುನ್ನಾರವಿದೆ. ಪಟಿಯಾಲ ಪೊಲೀಸರು ಶ್ರೀ ಬ್ರಾರ್‌ರನ್ನು ಅಕ್ರಮವಾಗಿ ಬಂಧಿಸಿ, ಚಿತ್ರಹಿಂಸೆ ನೀಡುತ್ತಿದೆ ಎಂದು ದೂರಿದ್ದಾರೆ.

ರಾಜಸ್ಥಾನದ ಹನುಮನ್‌ಗರ್‍ ಜಿಲ್ಲೆಯ ಸಿಲ್ವಾಲಾ ಖುರ್ದ್ ಗ್ರಾಮದವರಾದ ಶ್ರೀ ಬ್ರಾರ್ ರವರು ಒಂದು ತಿಂಗಳ ಹಿಂದೆ ಜಾನ್ ಎಂಬ ಗೀತೆಯನ್ನು ಬಿಡುಗಡೆ ಮಾಡಿದ್ದರು. ಆನಂತರ ಕಿಸಾನ್ ಆಂಥೆಮ್ ರಚಿಸಿದ್ದರು. ಇದು ಸಾಕಷ್ಟು ವೈರಲ್ ಆಯಿತು. ದೆಹಲಿಯ ಗಡಿಗಳಲ್ಲಿ ಹೋರಾಡುತ್ತಿರುವ ಪ್ರತಿಯೊಂದು ಟ್ರಾಕ್ಟರ್‌ಗಳಲ್ಲಿಯೂ ಪ್ರತಿದಿನ ಈ ಹಾಡು ಜೋರಾಗಿ ಕೇಳಿಬರುತ್ತದೆ. ಒಂದು ತಿಂಗಳ ಹಿಂದೆ ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಆದ ಈ ಹಾಡನ್ನು ಇದುವರೆಗೂ 2.1 ಕೋಟಿ ಜನ ವೀಕ್ಷಿಸಿದ್ದಾರೆ. ಅಲ್ಲದೆ 8 ಲಕ್ಷಕ್ಕೂ ಅಧಿಕ ಲೈಕ್ಸ್‌ಗಳು ದಾಖಲಾಗಿವೆ.

ವೈರಲ್ ಆದ ಕಿಸಾನ್ ಆಂಥೆಮ್ ನೋಡಿ.

ಈ ಹಾಡು ವೈರಲ್ ಆದ ನಂತರ ಅವರನ್ನು ಹಣಿಯುವುದಕ್ಕಾಗಿ ಜನವರಿ 03 ರಂದು ಅವರ ಮೇಲೆ ಹಿಂಸೆಗೆ ಪ್ರಚೋದನೆ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಪ್ರಚೋದನೆ ಮತ್ತು ಅಸಮಾಧಾನ ಕಾಯ್ದೆ 1922 ರ ಅಡಿಯಲ್ಲಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ಪಟಿಯಾಲದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬುಧವಾರ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಇದು ಸ್ವೀಕರಾರ್ಹವಲ್ಲ ಎಂಬ ಟೀಕೆಗಳು ವ್ಯಕ್ತವಾಗಿದೆ.


ಇದನ್ನೂ ಓದಿ: ನೀವು ಯಾರ ಪರ?: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ರೈತರು!

ನೀವು ಯಾರ ಪರ?: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...