Homeಕರ್ನಾಟಕಫ್ರೀಡಂ ಪಾರ್ಕ್ ನಲ್ಲಿ 25 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ನಿಗದಿತ ವೇತನ, ಪ್ರೋತ್ಸಾಹ...

ಫ್ರೀಡಂ ಪಾರ್ಕ್ ನಲ್ಲಿ 25 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ನಿಗದಿತ ವೇತನ, ಪ್ರೋತ್ಸಾಹ ಧನಕ್ಕೆ ಆಗ್ರಹ

- Advertisement -
- Advertisement -

ಬೆಂಗಳೂರು: ನಿಗದಿತ ವೇತನ, ಸರ್ಕಾರದಿಂದ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಮಂಗಳವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ 25 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ‌.

ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ರಾಜ್ಯದಲ್ಲಿರುವ 42,000 ಜನ ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹಲವು ವರ್ಷಗಳಿಂದ ಈಡೇರಿಲ್ಲ. ಆದ್ದರಿಂದ ಕೆಲಸ ಸ್ಥಗಿತಗೊಳಿಸಿ ಧರಣಿಗೆ ನಿರ್ಧರಿಸಿದ್ದೇವೆ ಎಂದು ಪ್ರತಿಭಟನಾ ನಿರತರು ತಿಳಿಸಿದರು.

8 ವರ್ಷಗಳಿಂದಲೂ ಆಶಾ ಕಾರ್ಯಕರ್ತೆಯರು ಮಾಡುತ್ತಿರುವ ಕೆಲಸಗಳು ಆಶಾ ನಿಧಿ ಪೋರ್ಟಲ್‌ನಲ್ಲಿ ದಾಖಲಾಗುತ್ತಿಲ್ಲ. ರಾಜ್ಯಾದ್ಯಂತ ಬಾಕಿ ಇರುವ 3 ತಿಂಗಳ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು ಹಾಗೂ ಆಶಾ ಕಾರ್ಯಕರ್ತೆಯರಿಗೆ ವಹಿಸಿರುವ ಮೊಬೈಲ್ ಆಧಾರಿತ ಕೆಲಸಗಳನ್ನ ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳಬಾರದು. ಇಲ್ಲದಿದ್ದರೆ ಮೊಬೈಲ್‌ ಆಧಾರಿತ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ, ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್, ಎಐಯುಟಿಯುಸಿ ರಾಜ್ಯ ಅಧ್ಯಕ್ಷ ಕೆ.ಸೋಮಶೇಖರ್, ರಾಜ್ಯ ಉಪಾಧ್ಯಕ್ಷ ಉಮಾದೇವ, ಟಿ.ಎಸ್.ರಮಾ ಮುಂತಾದವರು ಹಾಜರಿದ್ದರು.

ಆಶಾ ಕಾರ್ಯಕರ್ತ ಬೇಡಿಕೆಗಳೇನು?

– ನಗರ ಪ್ರದೇಶದ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ವೆಚ್ಚಗಳಿಗೆ ಅನುಗುಣವಾಗಿ ಗೌರವಧನವನ್ನು ಮಾಸಿಕ ರೂ.20 ಸಾವಿರಕ್ಕೆ ಹೆಚ್ಚಿಸಬೇಕು.

– 8 ವರ್ಷಗಳಿಂದ ಆಶಾನಿಧಿ ಪೋರ್ಟಲ್‌ನಲ್ಲಿ ಆಶಾ ಕಾರ್ಯಕರ್ತೆಯರು ಮಾಡಿದ ಕೆಲಸಗಳು ದಾಖಲಾಗದೇ, ಪ್ರೋತ್ಸಾಹಧನವೂ ಬಂದಿಲ್ಲ. ರಾಜ್ಯದಾದ್ಯಂತ ಬಾಕಿ ಇರುವ 3 ತಿಂಗಳ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು.

– ಮೊಬೈಲ್ ಆಧಾರಿತ ಕೆಲಸಗಳನ್ನು ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳಬಾರದು. ಇಲ್ಲದಿದ್ದರೆ ಮೊಬೈಲ್‌ ಆಧಾರಿತ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿಪಡಿಸಬೇಕು.

– ಪಶ್ಚಿಮ ಬಂಗಾಳದ ಮಾದರಿಯಲ್ಲಿ ಸೇವಾ ನಿವೃತ್ತಿ ಪಡೆಯುವ ಆಶಾ ಕಾರ್ಯಕರ್ತೆಯರಿಗೆ ವರ್ಷಕ್ಕೆ ರೂ.5 ಲಕ್ಷ ನೀಡಬೇಕು.

– ಪ್ರತಿವರ್ಷ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ಸೌಲಭ್ಯ ಕಲ್ಪಿಸಬೇಕು. ನಮ್ಮನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಗ್ರಾಚ್ಯುಟಿ, ಭವಿಷ್ಯನಿಧಿ, ಕಾರ್ಮಿಕರ ರಾಜ್ಯ ವಿಮೆ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಆರೋಗ್ಯ ಇಲಾಖೆ ಹೇಳುವುದೇನು?

– ರಾಜ್ಯ ಸರ್ಕಾರದ ವತಿಯಿಂದ ಮಾಸಿಕ ಗೌರವಧನ ರೂ.5000/- ಗಳನ್ನು ನೀಡಲಾಗುತ್ತಿದೆ.

-ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಎಂಟು ಆವರ್ತಕ ಮತ್ತು ನಿಯಮಿತ ಚಟುವಟಿಕೆಗಳಿಗೆ ಮಾಸಿಕ ಪ್ರೋತ್ಸಾಹಧನ ರೂ.2000/-ಗಳನ್ನು ನೀಡಲಾಗುತ್ತಿದೆ.

– ಆಯುಷ್ಮಾನ್ ಆರೋಗ್ಯ ಮಂದಿರದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಕಾರ್ಯಕರ್ತೆಯರಿಗೆ ಮಾಸಿಕ ರೂ.1000/-ಗಳ ಟೀಮ್ ಬೇಸ್ಟ್ ಇನ್ಸೆಂಟಿವ್ ಕೊಡಲಾಗುತ್ತಿದೆ.

– 34 ಆರೋಗ್ಯ ಚಟುವಟಿಕೆಗಳ ಕಾರ್ಯಕ್ರಮ ಅನುಷ್ಠಾನದ ಆಧಾರದ ಪ್ರೋತ್ಸಾಹಧನ ನೀಡಲಾಗುತ್ತಿದೆ. ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ (PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಯೋಜನೆ (PMSBY) ಯಡಿಯಲ್ಲಿ ತಲಾ ಎರಡು ಲಕ್ಷಗಳ ರೂ. ವಿಮಾ ಸೌಲಭ್ಯ ಮುಖಾಂತರ ಸಾಮಾಜಿಕ ಸುರಕ್ಷೆ ಒದಗಿಸಲಾಗಿದೆ.

– ಆಶಾ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಯೋಜನೆಯ ವೈದ್ಯಕೀಯ ವಿಮಾ ಸೌಲಭ್ಯವನ್ನು ಕೂಡ ಕಲ್ಪಿಸಲಾಗಿದೆ.

– ಆಶಾ ಕಾರ್ಯಕರ್ತೆಯರು ಇಲಾಖೆಯ ಇತರ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರೊಂದಿಗೆ ಆರೋಗ್ಯ ಸೇವೆಗೆ ಸಂಬಂಧಿಸಿದ ಮಾಹಿತಿ ವಿನಿಮಯಕ್ಕಾಗಿ ಸಿಯುಜಿ ಸಿಮ್‌ಗಳ ಸೌಲಭ್ಯವನ್ನು ಕಲ್ಪಿಸುವ ಅವಕಾಶ ಇದೆ.

– ಆಶಾ ಕಾರ್ಯಕರ್ತೆಯರು ಆರೋಗ್ಯ ಚಟುವಟಿಕೆಗಳನ್ನು ಸ್ಮಾರ್ಟ್‌ ಫೋನ್ ಬಳಸಿ ದಾಖಲಿಸಲು ಮಾಸಿಕ ರೂ.280/- ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ವಾರ್ಷಿಕ ಎರಡು ಜೊತೆ ಸಮವಸ್ತ್ರಗಳನ್ನು ನೀಡಲಾಗುತ್ತಿದೆ.

– ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ತ್ರೈಮಾಸಿಕ ಆಶಾ ಕಾರ್ಯಕರ್ತೆಯರ ಕುಂದುಕೊರತೆ ನಿವಾರಣಾ ಸಭೆ ನಡೆಸಿ ಪರಿಹಾರ ಕ್ರಮ ಕೈಗೊಳ್ಳಲಾಗುತ್ತಿದೆ.

– ರಾಜ್ಯ ಮಟ್ಟದಲ್ಲಿ ಆಶಾ ಸಂಘಟನೆಯ ಮುಖಂಡರ ಜೊತೆ ನಿರಂತರವಾಗಿ ಸಭೆಗಳನ್ನು ಸಹ ಸಂಧರ್ಭಕ್ಕೆ ಅನುಸಾರವಾಗಿ ನಡೆಸಿ ನೈಜ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿರುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಚಿಕ್ಕಮಗಳೂರು : ಮುಖ್ಯವಾಹಿನಿಗೆ ಇಂದು ಆರು ನಕ್ಸಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...