HomeಮುಖಪುಟEIA-2020 ಮಸೂದೆ ಹಿಂಪಡೆಯುವಂತೆ ಪತ್ರ ಬರೆದ 500ಕ್ಕೂ ಹೆಚ್ಚು ತಜ್ಞರು

EIA-2020 ಮಸೂದೆ ಹಿಂಪಡೆಯುವಂತೆ ಪತ್ರ ಬರೆದ 500ಕ್ಕೂ ಹೆಚ್ಚು ತಜ್ಞರು

ಪರಿಸರ ಸಚಿವಾಲಯವು ಮಾರ್ಚ್ ನಲ್ಲಿ ಈ ಅಧಿಸೂಚನೆ ಹೊರಡಿಸಿದಾಗಿನಿಂದ, ಇದುವರೆಗೆ ಸುಮಾರು 17 ಲಕ್ಷ ಈ-ಮೇಲ್ ಗಳ ಮೂಲಕ ಸಲಹೆಗಳನ್ನು ಸ್ವೀಕರಿಸಿದೆ. ಇದರಲ್ಲಿ ಹಲವಾರು ಆಕ್ಷೇಪಣೆಗಳಿವೆ ಎನ್ನಲಾಗಿದೆ.

- Advertisement -
- Advertisement -

ಪರಿಸರ ಪರಿಣಾಮ ಮೌಲ್ಯಮಾಪನ (EIA)-2020 ಕರಡು ಅಧಿಸೂಚನೆಯನ್ನು ಹಿಂಪಡೆದುಕೊಂಡು, ಪ್ರಸ್ತುತ ಅಸ್ತಿತ್ವದಲ್ಲಿರುವ EIA-2006ನ್ನು ಇನ್ನೂ ಬಲಪಡಿಸಬೇಕು ಎಂದು ದೇಶದಾದ್ಯಂತ 500ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ವಿಜ್ಞಾನಿಗಳು ಮತ್ತು ಸಂಶೋಧಕರು ಪರಿಸರ ಸಚಿವಾಲಯಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.

“ವಿವಿಧ 130 ಸಂಸ್ಥೆಗಳ ತಜ್ಞರು ಸಹಿ ಮಾಡಿರುವ ಪತ್ರದಲ್ಲಿ, EIA ಅಧಿಸೂಚನೆಗೆ ಸಂಬಂಧಿಸಿದಂತೆ ತಮ್ಮ ಕಳವಳಗಳನ್ನು ಪಟ್ಟಿ ಮಾಡಿ, ಇದು ಬಿಡುಗಡೆಯಾದಾಗಿನಿಂದಲೂ ವಿವಾದದಿಂದ ಕೂಡಿದೆ, ಇದು ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಹಾಗಾಗಿ ಇದನ್ನು ಹಿಂತೆಗೆದುಕೊಳ್ಳುವಂತೆ ಸಚಿವಾಲಯವನ್ನು ಒತ್ತಾಯಿಸಿದ್ದಾರೆ” ಎಂದು ನ್ಯೂಸ್ ಕ್ಲಿಕ್ ವರದಿ ಮಾಡಿದೆ.

ಭಾರತೀಯ ವಿಜ್ಞಾನ ಸಂಸ್ಥೆ (IISc), ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (IISER), ಭಾರತೀಯ ತಂತ್ರಜ್ಞಾನ ಸಂಸ್ಥೆ (IITs), ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ (NCBS) ಮತ್ತು ವನ್ಯಜೀವಿ ಸಂಸ್ಥೆ ಆಫ್ ಇಂಡಿಯಾ (WII) ಮುಂತಾದ ಸಂಸ್ಥೆಗಳ ತಜ್ಞರು ಸೇರಿ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ವಿವಾದಾತ್ಮಕ ಅಧಿಸೂಚನೆಯು, “ವಾಣಿಜ್ಯ ವ್ಯವಹಾರವನ್ನು ಸುಲಭಗೊಳಿಸಿ ಉತ್ತೇಜಿಸುವ ಸಲುವಾಗಿ ಪರಿಸರ ಸುರಕ್ಷತೆಯನ್ನು ಕಡೆಗಣಿಸಿದೆ” ಎಂದು ಆರೋಪಿಸಿ ದೇಶದಾದ್ಯಂತ ಅನೇಕ ವಿದ್ಯಾರ್ಥಿಗಳು, ನಾಗರಿಕರು, ಕಾರ್ಯಕರ್ತರು, ಪರಿಸರವಾದಿಗಳಿಂದ ತೀವ್ರವಾಗಿ ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

“ವಿವಿಧ ಸಂಸ್ಥೆಗಳ ಪಿಎಚ್‌ಡಿ ವಿದ್ಯಾರ್ಥಿಗಳು ಪ್ರಾರಂಭಿಸಿದ cross-institutional ಸಹಯೋಗಕ್ಕೆ, 105 ಜನ ಅಧ್ಯಾಪಕರು, ಮಾಜಿ ಅಧ್ಯಾಪಕರು ಮತ್ತು ಹಿರಿಯ ವಿಜ್ಞಾನಿಗಳು, 400 ಕ್ಕೂ ಹೆಚ್ಚು ಪಿಎಚ್‌ಡಿ ವಿದ್ಯಾರ್ಥಿಗಳು, ಪೋಸ್ಟ್ ಡಾಕ್ಟರೇಟ್ ವಿದ್ಯಾರ್ಥಿಗಳು, ಸ್ವತಂತ್ರ ಸಂಶೋಧನಾ ವಿದ್ವಾಂಸರು ಸೇರಿದಂತೆ ಅನೇಕ ತಜ್ಞರು ಪತ್ರಕ್ಕೆ ಸಹಿ ಹಾಕಿದ್ದಾರೆ” ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

“ಹೆಚ್ಚು ಪರಿಸರ ಮಾಲಿನ್ಯಕಾರಕ ಕೈಗಾರಿಕೆಗಳು ಮತ್ತು ಯೋಜನೆಗಳ ಮರು ವರ್ಗೀಕರಣ, ಸರಿಯಾಗಿ ಯೋಜಿಸದ ದೊಡ್ಡ-ಪ್ರಮಾಣದ ಅಭಿವೃದ್ಧಿ ಯೋಜನೆಗಳು, ಜೀವವೈವಿಧ್ಯತೆ, ಪರಿಸರ ವ್ಯವಸ್ಥೆಗಳು ಮತ್ತು ಜನರ ಮೇಲೆ ಹೆಚ್ಚಿನ ಋಣಾತ್ಮಕ ಪರಿಣಾಮ ಬೀರುತ್ತವೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಈ ಅಧಿಸೂಚನೆಯು ಪರಿಸರದ ಮೇಲೆ ತೀವ್ರ ಪರಿಣಾಮ ಬೀರುವಂತಹ ಯೋಜನೆಗಳಿಗೆ ಮುಕ್ತವಾಗುವುದರೊಂದಿಗೆ, ನಿಜವಾಗಿಯೂ ಅಗತ್ಯವಿರುವ ಜನರಿಗೆ ಪ್ರಯೋಜನವನ್ನು ಕಡಿಮೆ ಮಾಡುತ್ತದೆ” ಎಂದು ಪತ್ರಕ್ಕೆ ಸಹಿ ಹಾಕಿದವರಲ್ಲಿ ಒಬ್ಬರಾದ ಬೆಂಗಳೂರಿನ IISc ಸಹಾಯಕ ಪ್ರಾಧ್ಯಾಪಕ ಕಾರ್ತಿಕ್ ಶಂಕರ್ ಹೇಳಿದ್ದಾರೆ.

IIT-ಬಾಂಬೆಯ ಪಿಎಚ್‌ಡಿ ವಿದ್ಯಾರ್ಥಿಯಾದ ಅಯಾಜ್ ಅಹ್ಮದ್, “EIA ಪ್ರಕ್ರಿಯೆಯು ಮಾಲಿನ್ಯಕಾರಕ ಕೈಗಾರಿಕೆಗಳು ಮತ್ತು ಇತರ ಅಭಿವೃದ್ಧಿ ಯೋಜನೆಗಳನ್ನು ನಿಯಂತ್ರಿಸಿ, ಪರಿಸರದ ಮೇಲೆ ಅವುಗಳ ಪ್ರಭಾವವನ್ನು ತಗ್ಗಿಸುತ್ತದೆ ಎಂದು ಭಾವಿಸಿದರೆ, ಇದು ಪರಿಸರ ಸುರಕ್ಷತೆಯನ್ನು ಸುಲಭೀಕರಿಸುವ ವಿಷಯವನ್ನು ಪ್ರಸ್ತಾಪಿಸಿದೆ. ನಮಗೆ ಬಲವಾದ ಪರಿಸರ ನಿಯಮಗಳು ಬೇಕಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಏನಿದು EIA-2020;

ಪರಿಸರ ಪರಿಣಾಮ ಮೌಲ್ಯಮಾಪನ (EIA)-2020 ಕರಡು ಅಧಿಸೂಚನೆಯ ಹೊಸ ಮಾರ್ಪಾಡುಗಳು, ಪ್ರಸ್ತುತ ಅಸ್ತಿತ್ವದಲ್ಲಿರುವ EIA-2006ನ್ನು ಕೂಲಂಕಷವಾಗಿ ಪರಿಶೀಲಿಸಲು ಪ್ರಯತ್ನಿಸುತ್ತದೆ.

ಕೈಗಾರಿಕೆಗಳು ತಮ್ಮ ಉದ್ದೇಶಿತ ಚಟುವಟಿಕೆಯ ಪರಿಸರ ಮತ್ತು ಪರಿಸರೀಯ ಪರಿಣಾಮವನ್ನು ಮತ್ತು ಕಾರ್ಯವಿಧಾನವನ್ನು ನಿರ್ಣಯಿಸಲು ಹೊಸ ಕಾರ್ಯವಿಧಾನವನ್ನು ಸೂಚಿಸುತ್ತವೆ. ಇವುಗಳನ್ನು ತಜ್ಞರ ಸಮಿತಿಗಳು ಮೌಲ್ಯಮಾಪನ ಮಾಡುತ್ತವೆ ಎಂದು ಪರಿಸರ ಸಚಿವಾಲಯ ತಿಳಿಸಿದೆ.

ಪರಿಸರ ಸಚಿವಾಲಯವು ಕರಡು ಮಸೂದೆಯನ್ನು ಮಾರ್ಚ್ 12 ರಂದು ಚರ್ಚೆಗೆ ಮತ್ತು ಪ್ರತಿಕ್ರಿಯೆಗಾಗಿ 60 ದಿನಗಳ ಅವಧಿಗೆ ಸಾರ್ವಜನಿಕ ವಲಯಕ್ಕೆ ಬಿಟ್ಟಿತ್ತು. ಜೂನ್ 30 ರಂದು ದೆಹಲಿ ಹೈಕೋರ್ಟ್ ಕರಡು ಬಗ್ಗೆ ಸಾರ್ವಜನಿಕ ಪ್ರತಿಕ್ರಿಯೆ ನೀಡಲು ಗಡುವನ್ನು ಆಗಸ್ಟ್ 11 ರವರೆಗೆ ವಿಸ್ತರಿಸಿತ್ತು. ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯು ಸಾರ್ವಜನಿಕರ ಪ್ರತಿಕ್ರಿಯೆಗಾಗಿ ಸಮಯವನ್ನು ವಿಸ್ತರಿಸಿದೆ ಎಂದು ಪ್ರಸ್ತಾಪಿಸಲಾಗಿದೆ.

ಪರಿಸರ ಸಚಿವಾಲಯವು ಮಾರ್ಚ್ ನಲ್ಲಿ ಈ ಅಧಿಸೂಚನೆ ಹೊರಡಿಸಿದಾಗಿನಿಂದ, ಇದುವರೆಗೆ ಸುಮಾರು 17 ಲಕ್ಷ ಈ-ಮೇಲ್ ಗಳ ಮೂಲಕ ಸಲಹೆಗಳನ್ನು ಸ್ವೀಕರಿಸಿದೆ. ಇದರಲ್ಲಿ ಹಲವಾರು ಆಕ್ಷೇಪಣೆಗಳಿವೆ ಎನ್ನಲಾಗಿದೆ.


ಇದನ್ನೂ ಓದಿ: EIA-2020 ಕುರಿತ ಕಾಂಗ್ರೆಸ್ ಸಲಹೆಗಳು ಆಧಾರರಹಿತ: ಪ್ರಕಾಶ್ ಜಾವಡೇಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...