Homeಮುಖಪುಟಪಪುವಾ ನ್ಯೂಗಿನಿಯಾ| ಬುಡಕಟ್ಟು ಗುಂಪುಗಳ ನಡುವೆ ಸಂಘರ್ಷ: 60ಕ್ಕೂ ಅಧಿಕ ಮಂದಿ ಸಾವು

ಪಪುವಾ ನ್ಯೂಗಿನಿಯಾ| ಬುಡಕಟ್ಟು ಗುಂಪುಗಳ ನಡುವೆ ಸಂಘರ್ಷ: 60ಕ್ಕೂ ಅಧಿಕ ಮಂದಿ ಸಾವು

- Advertisement -
- Advertisement -

ಪಪುವಾ ನ್ಯೂಗಿನಿಯಾದ ಬುಡಕಟ್ಟು ಜನಾಂಗದವರ ನಡುವೆ ನಡೆದ ಸಂಘರ್ಷದಲ್ಲಿ 60ಕ್ಕೂ ಅಧಿಕ ಮಂದಿ ಹತ್ಯೆಯಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳನ್ನು ಉಲ್ಲೇಖಿಸಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ರಾಜಧಾನಿ ಪೋರ್ಟ್ ಮೋರೆಸ್ಬಿಯ ವಾಯುವ್ಯಕ್ಕೆ 600 ಕಿ.ಮೀ ದೂರದ ವಾಬಾಗ್ ಪಟ್ಟಣದ ಬಳಿ ಭಾನುವಾರ ಘಟನೆ ನಡೆದಿದೆ. ಇದು ಸಿಕಿನ್ ಮತ್ತು ಕೇಕಿನ್ ಬುಡಕಟ್ಟು ಜನಾಂಗದವರ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದೆ ಎಂದು ತಿಳಿದು ಬಂದಿದೆ.

ಅಧಿಕಾರಿಗಳು ಮತ್ತು ಸೇನಾ ಸಿಬ್ಬಂದಿ 53 ಪುರುಷರ ಮೃತದೇಹಗಳನ್ನು ಪತ್ತೆ ಹಚ್ಚಿದ್ದಾರೆ. ನಿಖರವಾದ ಸಾವಿನ ಸಂಖ್ಯೆ ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಭಾರೀ ಗುಂಡಿನ ದಾಳಿ ನಡೆದ ಮಾಹಿತಿಯಿದೆ ಸ್ಥಳೀಯ ಪೊಲೀಸ್ ಆಯುಕ್ತ ಡೇವಿಡ್ ಮ್ಯಾನಿಂಗ್ ಭಾನುವಾರ ಹೇಳಿದ್ದರು. ಆದರೆ, ಇಂದು ಬೆಳಿಗ್ಗೆ ಸಾವಿನ ಸಂಖ್ಯೆ 60 ದಾಟಿದೆ ಎಂದು ವರದಿಯಾಗಿದೆ.

ಅಕ್ರಮ ಶಸ್ತಾಸ್ತ್ರ ಪೂರೈಕೆ ಸಂಘರ್ಷವನ್ನು ಅತ್ಯಂತ ಭೀಕರವಾಗಿಸಿದೆ. ಸಂಘರ್ಷದಲ್ಲಿ ತೊಡಗಿದ್ದವರು ಪರಸ್ಪರ ಎಕೆ 47ನಂತಹ ಸುಧಾರಿತ ಶಸ್ತ್ರಾಸ್ತ್ರಗಳನ್ನು ಬಳಸಿದ್ದರು ಎಂದು ಮಾಧ್ಯಮಗಳು ತಿಳಿಸಿವೆ.

ಪಪುವಾ ನ್ಯೂಗಿನಿಯಾದಲ್ಲಿ ಬುಡಕಟ್ಟು ಜನಾಂಗಗಳ ನಡುವೆ ಆಗಾಗ ಸಂಘರ್ಷಗಳು ನಡೆಯುತ್ತಿರುತ್ತವೆ. ಅವುಗಳಲ್ಲಿ ಈ ಘಟನೆ ಅತ್ಯಂತ ಭೀಕರವಾಗಿದೆ. ಕಳೆದ ಜುಲೈನಲ್ಲಿ ದೇಶದ ಎಂಗಾ ಪ್ರದೇಶದಲ್ಲಿ ಬುಡಕಟ್ಟು ಸಂಘರ್ಷ ನಿಯಂತ್ರಿಸಲು ಸ್ಥಳೀಯ ಆಡಳಿತ ಮೂರು ತಿಂಗಳು ಲಾಕ್‌ಡೌನ್‌ ರೀತಿ ನಿರ್ಬಂಧ ಜಾರಿಗೊಳಿಸಿತ್ತು.

ಕಳೆದ ವರ್ಷ ಆಗಸ್ಟ್‌ನಲ್ಲಿ ನಡೆದ ಸಂಘರ್ಷದಲ್ಲಿ ಮೂವರು ವ್ಯಕ್ತಿಗಳನ್ನು ಸಾವನ್ನಪ್ಪಿದ ದೃಶ್ಯ ಒಳಗೊಂಡ ಗ್ರಾಫಿಕ್ ತುಣುಕೊಂದನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಲಾಗಿತ್ತು. ಆ ಬಳಿಕ ಹಿಂಸಾಚಾರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿತ್ತು.

ಇದನ್ನೂ ಓದಿ : ಮಣಿಪುರ: ಸರಕಾರಿ ಕಚೇರಿಗಳನ್ನು ಬಲವಂತದಿಂದ ಬಂದ್‌ ಮಾಡಿಸುತ್ತಿರುವ ಕುಕಿ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...