Homeಮುಖಪುಟವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿತ ಸಾವು: ಮೊದಲ ಸ್ಥಾನದಲ್ಲಿರುವ ಯುಪಿ

ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿತ ಸಾವು: ಮೊದಲ ಸ್ಥಾನದಲ್ಲಿರುವ ಯುಪಿ

- Advertisement -
- Advertisement -

ಭಾರತದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬಲಿಯಾಗುತ್ತಿದ್ದಾರೆ. 2022ರಲ್ಲಿ 6,000ಕ್ಕೂ ಅಧಿಕ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ ಸಾವುಗಳು ದಾಖಲಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿ-ಅಂಶಗಳನ್ನು ಬಹಿರಂಗಪಡಿಸಿದೆ.

ವರದಕ್ಷಿಣೆ ನಿಷೇಧ ಕಾಯಿದೆ 1961ರ ಅಡಿಯಲ್ಲಿ 2022ರಲ್ಲಿ 13,479 ಪ್ರಕರಣಗಳು ದಾಖಲಾಗಿವೆ. ಅದೇ  ಸಮಯದಲ್ಲಿ 6,450 ವರದಕ್ಷಿಣೆ ಸಾವುಗಳು ಕೂಡ ದಾಖಲಾಗಿವೆ. ವರದಕ್ಷಿಣೆ ಸಾವುಗಳು ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದ್ದರೂ ಅಂಕಿಅಂಶಗಳು ಇನ್ನೂ ಆತಂಕಕ್ಕೆ ಕಾರಣವಾಗಿವೆ.

2022ರಲ್ಲಿ ವರದಕ್ಷಿಣೆ ಸಾವಿನ ಸಂಖ್ಯೆಯಲ್ಲಿ 4.5% ಇಳಿಕೆಯಾಗಿದೆ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ 1961 ರ ಅಡಿಯಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆಯಲ್ಲಿ 0.6% ಇಳಿಕೆಯಾಗಿದೆ. 2022ರಲ್ಲಿ ಉತ್ತರಪ್ರದೇಶದಲ್ಲಿ 2,218 ಘಟನೆಗಳೊಂದಿಗೆ ಅತಿ ಹೆಚ್ಚು ವರದಕ್ಷಿಣೆ ಸಾವುಗಳು ಸಂಭವಿಸಿವೆ. ಬಿಹಾರದಲ್ಲಿ 1,057 ಮತ್ತು ಮಧ್ಯಪ್ರದೇಶದಲ್ಲಿ 518 ವರದಕ್ಷಿಣೆಗೆ ಸಂಬಂಧಿಸಿದ ಸಾವುಗಳು ವರದಿಯಾಗಿದೆ.

ವರದಕ್ಷಿಣೆ ನಿಷೇಧ ಕಾಯ್ದೆ 1961ರ ಅಡಿಯಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆಯಲ್ಲಿ ಉತ್ತರಪ್ರದೇಶದಲ್ಲಿ  4,807 ಪ್ರಕರಣಗಳು ದಾಖಲಾಗಿದೆ. ಇದು ದೇಶದಲ್ಲೇ ಅತಿಹೆಚ್ಚು ಪ್ರಕರಣ ದಾಖಲಾಗಿರುವುದಾಗಿದೆ.  ಬಿಹಾರದಲ್ಲಿ 3,580 ಪ್ರಕರಣಗಳು ದಾಖಲಾಗಿದ್ದು ಎರಡನೇ ಸ್ಥಾನದಲ್ಲಿದೆ ಮತ್ತು ಕರ್ನಾಟಕದಲ್ಲಿ 2,224 ಪ್ರಕರಣಗಳು ದಾಖಲಾಗಿದೆ.

ದಕ್ಷಿಣ ರಾಜ್ಯಗಳಲ್ಲಿ ಒಟ್ಟು ವರದಕ್ಷಿಣೆ ಸಾವುಗಳ ಸಂಖ್ಯೆ 442 ರಷ್ಟಿದ್ದು, ಕರ್ನಾಟಕವು 167 ಸಾವಿನೊಂದಿಗೆ ಮುಂಚೂಣಿಯಲ್ಲಿದೆ. ನಂತರ ತೆಲಂಗಾಣದಲ್ಲಿ 137, ತಮಿಳುನಾಡಿನಲ್ಲಿ 29 ಮತ್ತು ಕೇರಳದಲ್ಲಿ 11 ಸಾವುಗಳು ವರದಿಯಾಗಿದೆ . ವರದಕ್ಷಿಣೆ ನಿಷೇಧ ಕಾಯಿದೆ 1961ರ ಅಡಿಯಲ್ಲಿ ದಾಖಲಾದ ದಕ್ಷಿಣ ರಾಜ್ಯಗಳ ಒಟ್ಟು ಪ್ರಕರಣಗಳ ಸಂಖ್ಯೆ 2,776 ಇದೆ. ಇದರಲ್ಲಿ ಕರ್ನಾಟಕವೊಂದರಲ್ಲೇ 2,224 ಪ್ರಕರಣಗಳು ದಾಖಲಾಗಿದೆ. ಆಂಧ್ರಪ್ರದೇಶದಲ್ಲಿ 298 ಪ್ರಕರಣಗಳು, ತಮಿಳುನಾಡಿನಲ್ಲಿ 220 ಪ್ರಕರಣಗಳು, ಕೇರಳದಲ್ಲಿ 28 ಪ್ರಕರಣಗಳು ಮತ್ತು ತೆಲಂಗಾಣದಲ್ಲಿ 6 ಪ್ರಕರಣಗಳು ದಾಖಲಾಗಿದೆ.

ಎನ್‌ಸಿಆರ್‌ಬಿ ಅಂಕಿಅಂಶಗಳ ಪ್ರಕಾರ ದೂರುಗಳು ನಿಜವಾಗಿದ್ದರೂ ಸಾಕಷ್ಟು ಪುರಾವೆಗಳಿಲ್ಲದ ಕಾರಣ 359 ವರದಕ್ಷಿಣೆ ಸಾವು ಪ್ರಕರಣಗಳನ್ನು ಮುಚ್ಚಲಾಗಿದೆ. ಐದು ವರದಕ್ಷಿಣೆ ಸಾವು ಪ್ರಕರಣದ ತನಿಖೆಯನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಲಾಗಿದೆ.

ಎನ್‌ಸಿಆರ್‌ಬಿ ವರದಿಯು ದೂರು ದಾಖಲಾದ ಪ್ರಕರಣವನ್ನು ಉಲ್ಲೇಖಿಸಿ ದತ್ತಾಂಶವನ್ನು ಸಿದ್ದಪಡಿಸಿದೆ. ಆದರೆ ದೂರು ದಾಖಲಾಗದ ವರದಕ್ಷಿಣೆ ಕಿರುಕುಳ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಳವಾಗಿದೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...