ಗುಜರಾತ್‌ನ ಐಐಟಿಯಲ್ಲಿ 900 ಕ್ಕೂ ಹೆಚ್ಚು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಲಸಿಕೆ | ನಾನುಗೌರಿ

ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಳೆದ ವಾರ ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಸ್ಕ್ರೋಲ್.ಇನ್ ವರದಿ ಮಾಡಿದೆ. ಪ್ರಸ್ತುತ 45 ವರ್ಷಕ್ಕಿಂತ ಮೇಲಿನವರಿಗೆ ಮಾತ್ರ ಲಸಿಕೆ ನೀಡಬೇಕು ಎಂಬ ಭಾರತ ಸರ್ಕಾರದ ನಿಯಮವನ್ನು ಮೀರಿ ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ದೇಶದಾದ್ಯಂತ ಈಗ 45 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಭಾರತದ ಸುಮಾರು ಅರ್ಧದಷ್ಟು ಕೊರೊನಾ ಪ್ರಕರಣಗಳಿರುವ ಮಹಾರಾಷ್ಟ್ರವು 25 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಲಸಿಕೆ ನೀಡಲು ಅನುಮತಿ ನೀಡುವಂತೆ ಸೋಮವಾರ ಕೇಂದ್ರವನ್ನು ಕೇಳಿತ್ತು. ಆದರೆ ಕೇಂದ್ರ ಸರ್ಕಾರವು ಈ ಮನವಿಯನ್ನು ನಿರಾಕರಿಸಿದೆ.

ಇದನ್ನೂ ಓದಿ: ‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

ಐಐಟಿ ಗಾಂಧಿನಗರದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಮೀರಿ ಕೊರೊನಾ ಲಸಿಕೆ ಹಾಕಲು ಹೇಗೆ ಸಾಧ್ಯವಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಸ್ಕ್ರೋಲ್.ಇನ್ ತನ್ನ ವರದಿಯಲ್ಲಿ ಹೇಳಿದೆ. ಲಸಿಕೆ ಪಡೆದವರಲ್ಲಿ ಹೆಚ್ಚಿನವರಿಗೆ ಇನ್ನೂ 25 ವರ್ಷ ಆಗಿಲ್ಲ ಎನ್ನಲಾಗಿದೆ.

ಮಾರ್ಚ್ 30 ಮತ್ತು ಏಪ್ರಿಲ್ 2 ರ ನಡುವೆ ಕ್ಯಾಂಪಸ್‌ನ ಆರೋಗ್ಯ ಕೇಂದ್ರವೊಂದರಲ್ಲಿ ಈ ವ್ಯಾಕ್ಸಿನೇಷನ್ ಪ್ರಕ್ರಿಯೆ ನಡೆದಿದೆ ಎಂದು ಸ್ಕ್ರೋಲ್.ಇನ್ ಹೇಳಿದ್ದು, ವಿದ್ಯಾರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗಿದೆ ಎಂದು ಅದು ಬರೆದಿದೆ.

ಲಸಿಕೆಯನ್ನು ಬೋಧಕವರ್ಗದ ಸದಸ್ಯರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಕ್ಯಾಂಪಸ್‌ನ ಹೊರಗೆ ವಾಸಿಸುವವರಿಗೆ ಸಹ ನೀಡಲಾಯಿತು ಎಂದು ಐಐಟಿಯ ಅಧೀಕೃತ ವ್ಯಕ್ತಿಯೊಬ್ಬರು ಹೇಳಿದ್ದಾರೆಂದು ವರದಿಯು ಉಲ್ಲೇಖಿಸಿದೆ. ಕನಿಷ್ಠ 940 ವಿದ್ಯಾರ್ಥಿಗಳು, ಸುಮಾರು 250 ಅಧ್ಯಾಪಕ ಸದಸ್ಯರು ಮತ್ತು ಇತರ ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಶಾಹಿನ್‌ಬಾಗ್‌‌ ಅನ್ನು ನಡೆಸಿಕೊಂಡಂತೆ ರೈತ ಹೋರಾಟಗಾರರನ್ನು ನಡೆಸದಿರಿ: ಕೇಂದ್ರಕ್ಕೆ ಟಿಕಾಯತ್‌

“ಪ್ರಕರಣದಲ್ಲಿ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್‌ ಭಾಗಿಯಾಗಿದ್ದು, ನಮಗೆ ಲಸಿಕೆಗಳನ್ನು ವ್ಯವಸ್ಥೆಗೊಳಿಸಿದೆ” ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಐಐಟಿಯ ಪ್ರತ್ರಿಕ್ರಿಯೆ ಸ್ಕ್ರೋಲ್.ಇನ್ ಕೇಳಿದ್ದು, ಯಾವುದೆ ಪ್ರತಿಕ್ರಿಯೆ ದೊರೆತಿಲ್ಲ.

ಪ್ರಕರಣದ ಬಗ್ಗೆ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್‌ ಆಯುಕ್ತ ರತಂಕನ್ವರ್ ಎಚ್ ಗಧ್ವಿಚರಣ್‌ ಪ್ರತಿಕ್ರಿಯಿಸಿದ್ದು, “ಇದನ್ನು ನಾನು ಪರಿಶೀಲಿಸುತ್ತೇನೆ. ಸರ್ಕಾರದ ಸೂಚನೆಗಳ ಪ್ರಕಾರ, 45 ಕ್ಕಿಂತ ಹೆಚ್ಚು ಮತ್ತು ಕೊರೊನಾ ವಿರುದ್ದ ಹೋರಾಟದಲ್ಲಿ ಇರುವ ವಾರಿಯರ್ಸ್‌ಗೆ ಮಾತ್ರ ಲಸಿಕೆ ನೀಡಬೇಕು” ಎಂದು ಹೇಳಿದ್ದಾರೆ.

ಗಾಂಧಿನಗರ ಐಐಟಿಯ ಕನಿಷ್ಠ 25 ವಿದ್ಯಾರ್ಥಿಗಳು ಕಳೆದ ತಿಂಗಳು ಕೊರೊನಾ ಸೋಂಕಿತರಾಗಿದ್ದಾರೆ ಎಂದು ಪಿಟಿಐ ಮಾರ್ಚ್ 27 ರಂದು ವರದಿ ಮಾಡಿತ್ತು.

ಇದನ್ನೂ ಓದಿ: ಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

ಪ್ರಕರಣವು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟು ಹಾಕಿದೆ. ದೇಶದ ಹಲವು ರಾಜ್ಯಗಳು ತಮ್ಮಲ್ಲಿ ಲಸಿಕೆ ದಾಸ್ತಾನು ಮುಗಿಯುತ್ತಿದೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿದರೂ ಅವರಿಗೆ ಲಸಿಕೆ ಲಭ್ಯವಾಗುತ್ತಿಲ್ಲ. ಕೇಂದ್ರದ ಮೋದಿ ಸರ್ಕಾರವು ದೇಶದ ಸಂಪನ್ಮೂಲಗಳಿಂದ ಹಿಡಿದು ಕೊರೊನಾ ಲಸಿಕೆಯವರೆಗೆ ಎಲ್ಲವನ್ನೂ ಗುಜರಾತ್‌‌‌ನ ಶ್ರೀಮಂತರಿಗೆ ಆದ್ಯತೆಯ ಮೇರೆಗೆ ನೀಡುತ್ತಿದೆ ಎಂದು ಹಲವಾರು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.

ಭಾರತದ ಸುಮಾರು ಅರ್ಧದಷ್ಟು ಕೊರೊನಾ ಪ್ರಕರಣಗಳಿರುವ ಮಹಾರಾಷ್ಟ್ರವು 25 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಲಸಿಕೆ ನೀಡಲು ಅನುಮತಿ ನೀಡುವಂತೆ ಸೋಮವಾರ ಕೇಂದ್ರವನ್ನು ಕೇಳಿತ್ತು. ಆದರೆ ಕೇಂದ್ರ ಸರ್ಕಾರವು ಈ ಮನವಿಯನ್ನು ನಿರಾಕರಿಸಿದೆ.

ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here