Homeಮುಖಪುಟಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

- Advertisement -
- Advertisement -

ಯುದ್ಧ ಭೂಮಿಯಲ್ಲಿ ಪ್ಯಾಲೆಸ್ತೀನ್ ನಿರಾಶ್ರಿತರಿಗೆ ಸೇವೆ ಸಲ್ಲಿಸುತ್ತಿರುವ UN ಸಂಸ್ಥೆ ಸಂದಿಗ್ಧತೆಯನ್ನು ಎದುರಿಸುತ್ತಿದೆ. 150 UNRWA ಕೇಂದ್ರಗಳ ಮೇಲೆ ದಾಳಿಯನ್ನು ನಡೆಸಲಾಗಿದೆ. 390ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 1,300 ಮಂದಿ ಗಾಯಗೊಂಡಿದ್ದಾರೆ ಎಂದು  UNRWA ಮುಖ್ಯಸ್ಥ ಫಿಲಿಪ್ ಲಝಾರಿನಿ ಹೇಳಿದ್ದಾರೆ. ಈ ಮಧ್ಯೆ ಇಸ್ರೇಲ್‌ ಗಾಝಾದ ನಿರ್ಮೂಲನೆಗೆ ಕರೆ ನೀಡಿದ್ದು, ಹಣಕಾಸಿನ ಸ್ಥಗಿತವು UN ಸಂಸ್ಥೆಯನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಇಸ್ರೇಲ್‌ ಯುದ್ಧ ಘೋಷಿಸಿದ ಅ.7ರ ಬಳಿಕ ಗಾಝಾದಲ್ಲಿ ಕೇವಲ ನಾಲ್ಕು ತಿಂಗಳಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಮಕ್ಕಳು, ಮಹಿಳೆಯರು, ಪತ್ರಕರ್ತರು, ವೈದ್ಯಕೀಯ ಸಿಬ್ಬಂದಿ ಮತ್ತು ಯುಎನ್ ಸಿಬ್ಬಂದಿ ಕೊಲ್ಲಲ್ಪಟ್ಟಿದ್ದಾರೆ ಎಂದು ಯುಎನ್‌ ಏಜೆನ್ಸಿಯ ಫಿಲಿಪ್ ಲಝಾರಿನಿ ಹೇಳಿದ್ದಾರೆ.

UN ಜನರಲ್ ಅಸೆಂಬ್ಲಿಯ ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ ಅವರಿಗೆ ಬರೆದ ಪತ್ರದಲ್ಲಿ ಫಿಲಿಪ್ ಲಝಾರಿನಿ ಈ ಬಗ್ಗೆ ಮಹತ್ವದ ಅಂಶಗಳನ್ನು ಉಲ್ಲೇಖಿಸಿದ್ದಾರೆ. ಈ ಕುರಿತು ಪತ್ರವನ್ನು ಲಝಾರಿನಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಭೀಕರ ಅಕ್ಟೋಬರ್ 7ರ ಭಯೋತ್ಪಾದಕ ದಾಳಿಯಲ್ಲಿ 12 UNRWA ಸಿಬ್ಬಂದಿ ವಿರುದ್ಧ ಜನವರಿಯಲ್ಲಿ ಇಸ್ರೇಲ್  ಮಾಡಿದ ಆರೋಪಗಳನ್ನು ತಳ್ಳಿಹಾಕಿದ UNRWA ಮುಖ್ಯಸ್ಥರು ಇಲ್ಲಿಯವರೆಗೆ ಈ ಬಗ್ಗೆ ಯಾವುದೇ ಪುರಾವೆಗಳನ್ನು ಇಸ್ರೇಲ್ UNRWAಯೊಂದಿಗೆ ಹಂಚಿಕೊಂಡಿಲ್ಲ ಎಂದು ಹೇಳಿದೆ. ಈ ಆರೋಪಗಳ ಬಳಿಕ 16  ರಾಷ್ಟ್ರಗಳು ಒಟ್ಟು 450 ಮಿಲಿಯನ್ ನೆರವನ್ನು ಸ್ಥಗಿತಗೊಳಿಸಿದೆ, ಹೆಚ್ಚಿನ ಹಣಕಾಸಿನ ಸಹಾಯವಿಲ್ಲದೆ ಮಧ್ಯಪ್ರಾಚ್ಯದಾದ್ಯಂತ UNRWA ಕಾರ್ಯಾಚರಣೆಗಳು ಮಾರ್ಚ್‌ನಿಂದ ತೀವ್ರವಾಗಿ ಸಮಸ್ಯೆಗೆ ಕಾರಣವಾಗಿದೆ. ಇತ್ತೀಚಿನ ವಾರಗಳಲ್ಲಿ ಯುಎನ್‌ಆರ್‌ಡಬ್ಲ್ಯೂಎ ಕಾರ್ಯಾಚರಣೆಯನ್ನು ಅಡ್ಡಿಪಡಿಸಲು ಮತ್ತು ಏಜೆನ್ಸಿಯನ್ನು ಕಿತ್ತುಹಾಕಲು ಕರೆ ನೀಡಲು ಕೆಲವು ಇಸ್ರೇಲ್‌ ಅಧಿಕಾರಿಗಳು ಸಂಘಟಿತ ಪ್ರಯತ್ನವನ್ನು ಮಾಡಿದ್ದಾರೆ ಎಂದು ಲಾಝರಿನಿ ಒತ್ತಿಹೇಳಿದ್ದಾರೆ. ನಾವು ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಮಾನವ ಹಕ್ಕುಗಳ ಗಂಭೀರ ಪರಿಣಾಮಗಳೊಂದಿಗೆ ದುರಂತದ ಅಂಚಿನಲ್ಲಿದ್ದೇವೆ ಎಂದು ನಾನು ಭಯಪಡುತ್ತೇನೆ ಎಂದು ಅವರು ಹೇಳಿದ್ದಾರೆ.

ಪ್ಯಾಲೆಸ್ತೀನ್‌ ಮತ್ತು ಇಸ್ರೇಲ್‌ನ ಭದ್ರತೆಗೆ ಯುಎನ್‌ಆರ್‌ಡಬ್ಲ್ಯುಎ ಅತ್ಯಗತ್ಯ  ಎಂದು ಲಜ್ಜರಿನಿ ಗಮನ ಸೆಳೆದಿದ್ದು,ಯುದ್ಧ ಪೀಡಿತ ಪ್ರದೇಶದಲ್ಲಿ ಪ್ರಾಣವನ್ನು ರಕ್ಷಿಸುವ ಮಾನವೀಯ ಸೇವೆಗಳನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ ಇಸ್ರೇಲ್‌ ಮೇಲೆ ಹಮಾಸ್ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ 12 UNRWA ಸಿಬ್ಬಂದಿಗಳು ಭಾಗಿಯಾಗಿದ್ದಾರೆ ಎಂಬ ಇಸ್ರೇಲ್‌ ಆರೋಪಗಳ ಹಿನ್ನೆಲೆ ಯುಎನ್ ಸೆಕ್ರೆಟರಿ ಜನರಲ್ ಫೆಬ್ರವರಿ ಆರಂಭದಲ್ಲಿ ಈ ಬಗ್ಗೆ ಪರಿಶೀಲನೆಗೆ ಸ್ವತಂತ್ರ ಸಮಿತಿಯನ್ನು ರಚಿಸಿದ್ದಾರೆ.

ಮಾಜಿ ಫ್ರೆಂಚ್ ಸಚಿವ ಕ್ಯಾಥರೀನ್ ಕೊಲೊನ್ನಾ ನೇತೃತ್ವದ ಸಮಿತಿ ಪ್ಯಾಲೆಸ್ತೀನ್‌ ಅಧಿಕಾರಿಗಳನ್ನು ಭೇಟಿ ಮಾಡುವ ಗುರಿಯನ್ನು ಹೊಂದಿದೆ.  ಸಾಕ್ಷ್ಯಾಧಾರಿತ ವರದಿಯನ್ನು ನೀಡುವುದು ನನ್ನ ಗುರಿಯಾಗಿದೆ ಎಂದು ಕೊಲೊನ್ನಾ ಈಗಾಗಲೇ ಮಾದ್ಯಮಗಳಿಗೆ ತಿಳಿಸಿದ್ದಾರೆ. ಫೆಬ್ರವರಿ 13ರಂದು ಸಮಿತಿಯು ಪರಿಶೀಲನೆ ಪ್ರಾರಂಭಿಸಿದ್ದು, ಏಪ್ರಿಲ್ 20 ರಂದು ವರದಿಯನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಯುಎನ್ ನ್ಯೂಸ್ ಪ್ರಕಾರ, 1949ರಿಂದ ಕಾರ್ಯನಿರ್ವಹಿಸುತ್ತಿರುವ UNRWA ವೆಸ್ಟ್ ಬ್ಯಾಂಕ್, ಲೆಬನಾನ್, ಜೋರ್ಡಾನ್, ಸಿರಿಯಾ ಮತ್ತು ಗಾಝಾದಲ್ಲಿ ಸುಮಾರು ಆರು ಮಿಲಿಯನ್ ಪ್ಯಾಲೆಸ್ತೀನ್‌ ನಿರಾಶ್ರಿತರಿಗೆ ಸೇವೆ ಸಲ್ಲಿಸುತ್ತದೆ. ಗಾಝಾದ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 7ರಂದು ಯುದ್ಧ ಪ್ರಾರಂಭವಾದಾಗಿನಿಂದ 29,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರನ್ನು ಇಸ್ರೇಲ್‌ ಹತ್ಯೆ ಮಾಡಿದೆ. ಅದರಲ್ಲಿ  ಹೆಚ್ಚಾಗಿ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ.

ಇದನ್ನು ಓದಿ: ದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...