Homeಮುಖಪುಟಕೊಡಗು | ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ಅಂತ್ಯ ಸಂಸ್ಕಾರ

ಕೊಡಗು | ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ಅಂತ್ಯ ಸಂಸ್ಕಾರ

ದೇಶದ ಗಮನ ಸೆಳೆದಿದ್ದ ಅಯ್ಯಂಗೇರಿಯ ಸಫಿಯಾ ಕೊಲೆ ಪ್ರಕರಣ

- Advertisement -
- Advertisement -

ಅಪರೂಪದ ಘಟನೆಯೊಂದರಲ್ಲಿ ಕೊಲೆಯಾದ ಬರೋಬ್ಬರಿ 18 ವರ್ಷಗಳ ಬಳಿಕ ಕೊಡಗಿನ ಅಯ್ಯಂಗೇರಿಯ ಬಾಲಕಿಯ ಅಂತ್ಯ ಸಂಸ್ಕಾರ (ದಫನ ಕಾರ್ಯ) ನಿನ್ನೆ (ನ.11, 2024) ನಡೆದಿದೆ.

ಡಿಸೆಂಬರ್ 2006ರಲ್ಲಿ ಸಫಿಯಾ ಎಂಬ ಅಯ್ಯಂಗೇರಿಯ 13 ವರ್ಷದ ಬಾಲಕಿಯ ಕೊಲೆ ನಡೆದಿತ್ತು. ಜೂನ್ 5, 2008 ರಂದು ಆಕೆಯ ತಲೆಬುರುಡೆ ಮತ್ತು ಕೆಲವು ಮೂಳೆಯ ತುಣುಕುಗಳು ಪತ್ತೆಯಾಗಿತ್ತು. ಅದನ್ನು ಕಾಸರಗೋಡು ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಇರಿಸಲಾಗಿತ್ತು.

ನಿನ್ನೆ (ನ.11) ನ್ಯಾಯಾಲಯದ ನಿರ್ದೇಶನದ ಮೇರೆಗೆ ಸಫಿಯಾಳ ಅಸ್ಥಿ ಪಂಜರವನ್ನು ಆಕೆಯ ಪೋಷಕರಿಗೆ ಹಸ್ತಾಂತರಿಸಲಾಯಿತು. ಬಳಿಕ ಪೋಷಕರು, ಅಯ್ಯಂಗೇರಿ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ದಫನ ಕಾರ್ಯ ನಡೆಸಿದ್ದಾರೆ.

ಪ್ರಕರಣದ ಹಿನ್ನೆಲೆ : ಕೊಡಗಿನ ಅಯ್ಯಂಗೇರಿಯ 13 ವರ್ಷದ ಬಾಲಕಿ ಸಫಿಯಾಳನ್ನು ಕಾರಸಗೋಡಿನ ಮುಲಿಯಾರ್ ಮಸ್ತಿಕುಂದ್‌ನ ಸಿವಿಲ್ ಕಾಂಟ್ರಾಕ್ಟರ್ ಕೆ.ಸಿ ಹಂಝ ಮತ್ತು ಮೈಮೂನ ದಂಪತಿ 2006ರಲ್ಲಿ ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಬಳಿಕ ಉದ್ಯೋಗ ನಿಮಿತ್ತ ಹಂಝ ದಂಪತಿ ಗೋವಾಕ್ಕೆ ಶಿಫ್ಟ್ ಆಗಿದ್ದರು. ಈ ವೇಳೆ ಸಫಿಯಾಳನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದರು.

ಕೆಲ ತಿಂಗಳ ಬಳಿಕ ಸಫಿಯಾಳನ್ನು ಕಾಸರಗೋಡಿಗೆ ಕರೆದುಕೊಂಡು ಬರುತ್ತೇನೆ ಎಂದು ಹಂಝ ಅವರು ಬಾಲಕಿಯ ತಂದೆ ಮೊಯ್ದು ಅವರಿಗೆ ತಿಳಿಸಿದ್ದರು. ಮಗಳನ್ನು ಬರಮಾಡಿಕೊಳ್ಳಲು ಆಕೆಯ ಇಷ್ಟದ ನೆಲ್ಲಿಕಾಯಿಯ ಜೊತೆ ಮೊಯ್ದು ಅವರು ಕಾಸರಗೋಡಿಗೆ ತೆರಳಿದಾಗ, ಸಫಿಯಾ ಕಾಣೆಯಾಗಿದ್ದಾಳೆ ಎಂದು ಹಂಝ ಹೇಳಿದ್ದರು. ಬಳಿಕ ಬಾಲಕಿಯ ತಂದೆ ಮತ್ತು ಹಂಝ ಜೊತೆಯಾಗಿ ಆದೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಪೊಲೀಸರು ಒಂದು ವರ್ಷಗಳ ಕಾಲ ಪ್ರಕರಣ ತನಿಖೆ ನಡೆಸಿದ್ದರು, ಸಫಿಯಾಳಿಗಾಗಿ ಹುಡುಕಾಡಿದ್ದರು. ಆದರೆ, ಆಕೆ ಪತ್ತೆಯಾಗಿರಲಿಲ್ಲ. ಈ ನಡುವೆ ಸಫಿಯಾ ಕ್ರಿಯಾ ಸಮಿತಿಯೊಂದನ್ನು ರಚಿಸಲಾಗಿತ್ತು. ಸಫಿಯಾಳ ತಾಯಿ ತನ್ನ ಮಗಳಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಕಾಸರಗೋಡು ಪಟ್ಟಣದಲ್ಲಿ 90 ದಿನಗಳ ಪ್ರತಿಭಟನೆಯನ್ನು ನಡೆಸಿದ್ದರು. ಒಂದೂವರೆ ವರ್ಷಗಳ ನಂತರ ಕೇರಳ ಕ್ರೈಂ ಬ್ರಾಂಚ್ ಪ್ರಕರಣವನ್ನು ಕೈಗೆತ್ತಿಕೊಂಡು ಸಫಿಯಾಳ ನಾಪತ್ತೆ ನಿಗೂಢವನ್ನು ಭೇದಿಸಿತ್ತು.

ಕ್ರೈ ಬ್ರಾಂಚ್ ತನಿಖೆಯಲ್ಲಿ ಸಫಿಯಾಳನ್ನು ಆಕೆ ಕೆಲಸ ಮಾಡುತ್ತಿದ್ದ ಮನೆಯ ಮಾಲೀಕ ಹಂಝ ಅವರೇ ಕೊಲೆ ಮಾಡಿರುವುದು ಬಯಲಾಗಿತ್ತು. ಹಂಝ ಅವರ ಮನೆಯಲ್ಲಿ ಕೆಲಸ ಮಾಡುವಾಗ ಬಿಸಿ ಗಂಜಿ ಸಫಿಯಾಳ ಮೈಮೇಲೆ ಬಿದ್ದಿತ್ತು. ಇದರಿಂದ ತೀವ್ರ ಸುಟ್ಟ ಗಾಯಗಳಿಗೆ ಒಳಗಾಗಿದ್ದ ಸಫಿಯಾಳನ್ನು, ಹಂಝ ಕ್ರೂರವಾಗಿ ಹತ್ಯೆ ಮಾಡಿ, ದೇಹವನ್ನು ತುಂಡರಿಸಿ ನಂತರ ಗೋವಾದ ಅಣೆಕಟ್ಟೆಯೊಂದರ ಬಳಿ ಹೂತಿದ್ದ.

ಮನೆ ಕೆಲಸ ಮಾಡುವಾಗ ಸಫಿಯಾ ಸುಟ್ಟ ಗಾಯಕ್ಕೆ ಒಳಗಾಗಿದ್ದಳು. ಈ ವೇಳೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು, ಆಕೆಯನ್ನು ಯಾರಾದರು ನೋಡಿದರೆ ಮನೆಯಲ್ಲಿ ಹಿಂಸಿಸಲಾಗಿದೆ ಅಂದುಕೊಳ್ಳುತ್ತಾರೆ. ಬಾಲ ಕಾರ್ಮಿಕ ಕೇಸ್ ಬೀಳುತ್ತದೆ ಎಂದು ಯೋಚಿಸಿದ ಹಂಝ, ಆಕೆಯನ್ನು ಕೊಲೆ ಮಾಡಿದ್ದ.

ಪ್ರಕರಣ ಸಂಬಂಧ 2008ರಲ್ಲಿ ಹಂಝ ಅವರನ್ನು ಬಂಧಿಸಲಾಗಿತ್ತು. ಜುಲೈ, 2015ರಲ್ಲಿ ಕಾಸರಗೋಡು ಸೆಷನ್ ನ್ಯಾಯಾಲಯ ಹಂಝಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಬಳಿಕ 2019ರಲ್ಲಿ ಕೇರಳ ಹೈಕೋರ್ಟ್ ಶಿಕ್ಷೆಯನ್ನು ಜೀವಾವಧಿಗೆ ಇಳಿಸಿತ್ತು.

ಕೊಲೆ ಅಪರಾಧಿ ಹಂಝಗೆ ಶಿಕ್ಷೆಯಾದರೂ, ಸಫಿಯಾಳ ಅಸ್ತಿಪಂಜರ ಕಾಸರಗೋಡು ನ್ಯಾಯಾಲಯದಲ್ಲೇ ಉಳಿದಿತ್ತು. ಅದನ್ನು ಇಸ್ಲಾಂ ಧರ್ಮದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲು ಅವಕಾಶ ಮಾಡಿಕೊಡುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ ಶುಕೂರ್ ಮೂಲಕ ಪೋಷಕರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಗಣಿಸಿದ ನ್ಯಾಯಾಧೀಶ ಸಾನು ಎಸ್ ಪಣಿಕ್ಕರ್ ಅವರು ಅಸ್ತಿ ಪಂಜರ ಹಸ್ತಾಂತರಕ್ಕೆ ಆದೇಶಿಸಿದ್ದರು.

ನ್ಯಾಯಾಲಯದಿಂದ ಪೋಷಕರಿಗೆ ಹಸ್ತಾಂತರಿಸಿದ ಸಫಿಯಾಳ ಅಸ್ತಿ ಪಂಜವರನ್ನು ಕಾಸರಗೋಡಿನ ಮುಹಿಮ್ಮಾತ್‌ನಲ್ಲಿ ಶುದ್ದಿಗೊಳಿಸಿ (ಸ್ನಾನ) ಬಳಿಕ ಅಯ್ಯಂಗೇರಿ ಮಸೀದಿಯಲ್ಲಿ ನಿನ್ನೆ ರಾತ್ರಿ ದಫನ ಮಾಡಲಾಗಿದೆ. ಈ ಮೂಲಕ ದೇಶದ ಗಮನ ಸೆಳೆದಿದ್ದ ಪ್ರಕರಣವೊಂದು ಇತ್ಯರ್ಥಗೊಂಡಂತಾಗಿದೆ.

ಇದನ್ನೂ ಓದಿ : ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...