ರಾಜ್ಯವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಂದಿದ್ದು, ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಹಲವಾರು ತಂದೆ ಮಕ್ಕಳು ಸ್ಪರ್ಧೆ ಮಾಡಿದ್ದರು. ಅವರಲ್ಲಿ ಬಹುತೇಕರು ಗೆಲುವು ಕಂಡಿದ್ದಾರೆ.
ಗೆಲುವು ಕಂಡ ತಂದೆ ಮಕ್ಕಳು
ವಿಜಯನಗರ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಎಂ. ಕೃಷ್ಣಪ್ಪ ಗೆಲುವು, ಅವರ ಮಗ ಪ್ರಿಯಾಕೃಷ್ಣ ಗೋವಿಂದರಾಜನಗರದಿಂದ ಗೆಲುವು.
ದೇವನಹಳ್ಳಿ ಕ್ಷೇತ್ರದಿಂದ ಕೆಎಚ್ ಮುನಿಯಪ್ಪ ಗೆಲುವು, ಅವರ ಮಗಳು ರೂಪಕಲಾ ಶಶಿಧರ್ ಕೆಜಿಎಫ್‌ನಿಂದ ಗೆಲುವು ಸಾಧಿಸಿದ್ದಾರೆ.
ಶ್ಯಾಮನೂರು ಶಿವಶಂಕರಪ್ಪನವರು ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರೆ, ಅವರು ಪುತ್ರ ಎಸ್.ಎಸ್ ಮಲ್ಲಿಕಾರ್ಜುನ್ ದಾವಣಗೆರೆ ಉತ್ತರ ಕ್ಷೇತ್ರದಿಂದ ಗೆಲುವು ಕಂಡಿದ್ದಾರೆ.
ಜಿ.ಟಿ ದೇವೇಗೌಡರು ಜೆಡಿಎಸ್ ಪಕ್ಷದಿಂದ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡರೆ, ಅವರು ಪುತ್ರ ಹರೀಶ್ ಗೌಡ ಹುಣಸೂರಿನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.
ಅರಕಲಗೂಡು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಎ.ಮಂಜು ಗೆಲುವು, ಅವರ ಮಗ ಮಂತರ್ ಗೌಡ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಡಿಕೇರಿಯಿಂದ ಗೆಲುವು ಸಾಧಿಸಿದ್ದಾರೆ.
ಸೋಲು
ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣದಿಂದ ಗೆಲುವು ಕಂಡರೂ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ.
ಇದನ್ನೂ ಓದಿ: 2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ


