Homeಕರ್ನಾಟಕಬೆಂಗಳೂರು: ರಸ್ತೆ ಬದಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ತಾಯಿ-ಮಗು ದಾರುಣ ಸಾವು

ಬೆಂಗಳೂರು: ರಸ್ತೆ ಬದಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ತಾಯಿ-ಮಗು ದಾರುಣ ಸಾವು

- Advertisement -
- Advertisement -

ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ತುಳಿದ ಪರಿಣಾಮ ತಾಯಿ ಮತ್ತು ಮಗು ದಾರುಣವಾಗಿ ಮೃತಪಟ್ಟ  ಆಘಾತಕಾರಿ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಇಂದು ಮುಂಜಾನೆ ನಡೆದಿದೆ.

ಗೋಪಾಲನ್ ಕಾಲನಿಯ ನಿವಾಸಿಗಳಾದ ಸೌಂದರ್ಯ(23) ಮತ್ತು ಅವರ ಪುತ್ರಿ ಸುವಿಕ್ಸ ಲಿಯ(9 ತಿಂಗಳು) ಮೃತರು. ಪತಿಯ ಜೊತೆ ತಮಿಳುನಾಡಿಗೆ ತೆರಳಿದ್ದ ಸೌಂದರ್ಯ ಮತ್ತು ಅವರ ಪುತ್ರಿ ಲೀಲಾ ಇಂದು ಬೆಳಗ್ಗೆ 6 ಗಂಟೆಗೆ ಬಸ್ಸಿನಲ್ಲಿ ಬೆಂಗಳೂರಿಗೆ ಬಂದಿಳಿದಿದ್ದರು. ಬಳಿಕ ತಾಯಿ-ಮಗಳು ಫುಟ್ ಪಾತ್‌ನಲ್ಲಿ ನಡೆದುಕೊಂಡು ಮನೆಯತ್ತ ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ತುಳಿದ ಪರಿಣಾಮ ಮೃತಪಟ್ಟಿದ್ದಾರೆ.

ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ತುಂಡಾಗಿ ರಸ್ತೆಗೆ ಬಿದ್ದಿದ್ದರೂ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿರಲಿಲ್ಲ. ಘಟನೆಯಲ್ಲಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಕಾಡುಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 304ಎ ಯಡಿ ಪ್ರಕರಣ ದಾಖಲಾಗಿದೆ. ಎಇ ಚೇತನ್‌, ಜೆಇ ರಾಜಣ್ಣ, ಬೆಸ್ಕಾಂ ಸ್ಟೇಷನ್ ಆಪರೇಟರ್ ಮಂಜು ಸೇರಿ ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರಿನ ನಿವಾಸಿ ಸೌಂದರ್ಯರನ್ನು ಚೆನ್ನೈಗೆ ಮದುವೆ ಮಾಡಿಕೊಡಲಾಗಿತ್ತು. ದೀಪಾವಳಿ ಹಬ್ಬ ಆಚರಿಸಲು ಪತಿ, ಪತ್ನಿ, ಮಗು ಊರಿಗೆ ಹೋಗಿದ್ದರು. ಇಂದು ಮುಂಜಾನೆ ಊರಿನಿಂದ ಹಸುಗೂಸು ಜೊತೆ ದಂಪತಿ ಬೆಂಗಳೂರಿಗೆ ಬಂದಿದ್ದು ಈ ವೇಳೆ ದುರ್ಘಟನೆ ನಡೆದಿದೆ.

ಇದನ್ನು ಓದಿ: ಕೇರಳ: ಜನಪ್ರಿಯ ನಟ ವಿನೋದ್ ಥಾಮಸ್ ಶವವಾಗಿ ಪತ್ತೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...