Homeಮುಖಪುಟಪ್ರೀತಿಸುತ್ತಿದ್ದ ಯುವತಿ ಮತ್ತು ಆಕೆಯ ತಾಯಿಯನ್ನು ಹತ್ಯೆ ಮಾಡಿದ ಯುವಕ

ಪ್ರೀತಿಸುತ್ತಿದ್ದ ಯುವತಿ ಮತ್ತು ಆಕೆಯ ತಾಯಿಯನ್ನು ಹತ್ಯೆ ಮಾಡಿದ ಯುವಕ

- Advertisement -
- Advertisement -

ಉತ್ತರ ಪ್ರದೇಶದ ಆಗ್ರಾದ ಜರಾರ್ ಪಟ್ಟಣದಲ್ಲಿ ಹುಚ್ಚು ಪ್ರೇಮಿಯೊಬ್ಬ ತಾನು ಪ್ರೀತಿಸುತ್ತಿದ್ದ ಯುವತಿ ಮತ್ತು ಆಕೆಯ ತಾಯಿಯನ್ನು ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಯನ್ನು ಬಂಧಿಸಲು ಪೊಲೀಸರು 5 ತಂಡಗಳನ್ನು ರಚಿಸಿದ್ದಾರೆ.

ಮೃತರನ್ನು ಶಾರದಾ ದೇವಿ (50) ಮತ್ತು ಕಾಮಿನಿ (19) ಎಂದು ಗುರುತಿಸಲಾಗಿದೆ. ಜರಾರ್ ಪಟ್ಟಣದ ನಿವಾಸಿ ಶಾರದಾ ತನ್ನ ಮಗಳೊಂದಿಗೆ ಭಾನುವಾರ ರಾತ್ರಿ ತಮ್ಮ ಮನೆಯಲ್ಲಿ ಮಲಗಿದ್ದರು. ತಡರಾತ್ರಿ ತಮ್ಮದೆ ಗ್ರಾಮದ ನಿವಾಸಿ ಗೋವಿಂದ್ ಎಂಬುವವರು ಮನೆಗೆ ಬಂದು, ಮಲಗಿದ್ದ ಶಾರದಾ ದೇವಿ ಮತ್ತು ಕಾಮಿನಿ ಮೇಲೆ ಚಾಕುವಿನಿಂದ ಮುಖ ಮತ್ತು ಕುತ್ತಿಗೆಗೆ ದಾಳಿ ಮಾಡಿದ್ದಾನೆ.

ಇಬ್ಬರು ಮಲಗಿದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಮಯದಲ್ಲಿ, ಇಬ್ಬರ ಕೂಗು ಕೇಳಿ ಓಡಿ ಬಂದ ಹಿರಿಯ ಮಗ ರಾಹುಲ್ ಮತ್ತು ಅವರ ಪತ್ನಿ ಮೇಲೂ ಆರೋಪಿ ಗೋವಿಂದ್ ದಾಳಿ ಮಾಡಿ, ಪರಾರಿಯಾಗಿದ್ದಾನೆ. ಯುವತಿಯ ಅತ್ತಿಗೆಗೂ ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ  ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ

ಮನೆಯಲ್ಲಿ ಕೂಗು ಕೇಳಿ, ಇತರ ಗ್ರಾಮಸ್ಥರು ಸೇರುತ್ತಿರುವುದನ್ನು ನೋಡಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ತಾಯಿ ಮತ್ತು ಮಗಳ ಜೋಡಿ ಕೊಲೆ ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಗ್ರಾಮಸ್ಥರ ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ತಲುಪಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೊಲೆ ಮಾಡಿ ಪರಾರಿಯಾಗಿರುವ ಆರೋಪಿ ಗೋವಿಂದ್, ಸಂತ್ರಸ್ತ ಕುಟುಂಬದ ನೆರೆ ಮನೆಯವನಾಗಿದ್ದಾನೆ. ಆತ 19 ವರ್ಷದ ಕಾಮಿನಿಯನ್ನು ಪ್ರೀತಿಸುತ್ತಿದ್ದು, ಆಕೆಯನ್ನು ಮದುವೆಯಾಗಲು ಬಯಸಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

UP Teen Killed By Man Who Wanted To Marry Her, Mother Also Murdered: Cops
PC:NDTV

ಜೋಡಿ ಕೊಲೆಯ ಮಾಹಿತಿ ಬಂದ ಕೂಡಲೇ ಸ್ಥಳದಲ್ಲೇ ಎಡಿಜಿ /ಐಜಿ ಆಗ್ರಾ ರೇಂಜ್ ಎ. ಸತೀಶ್ ಗಣೇಶ್, ಎಸ್‌ಎಸ್‌ಪಿ ಆಗ್ರಾ ಬಬ್ಲು ಕುಮಾರ್, ಎಸ್‌ಪಿ ಪೂರ್ವ ಅಶೋಕ್ ವೆಂಕಟ್ ಸೇರಿದಂತೆ ಪೊಲೀಸ್ ಪಡೆ ಸ್ಥಳಕ್ಕೆ ಆಗಮಿಸಿತು. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲು ಪ್ರಾರಂಭಿಸಿದ್ದಾರೆ.

ಅದೇ ಸಮಯದಲ್ಲಿ, ವಿಧಿವಿಜ್ಞಾನ ಮತ್ತು ಶ್ವಾನ ದಳದ ತಂಡವು ಸ್ಥಳಕ್ಕೆ ತಲುಪಿ ಸಾಕ್ಷ್ಯಗಳನ್ನು ಸಂಗ್ರಹಿಸಿತು. ಪೊಲೀಸರು ಇಬ್ಬರ ಶವಗಳನ್ನು ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿ ಗೋವಿಂದ್‌ನನ್ನು ಬಂಧಿಸಲು 5 ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಆರೋಪಿ ಗೋವಿಂದ್ ಯುವತಿ ಕಾಮಿನಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ. ಇಬ್ಬರ ಗೆಳತನದಿಂದ ಎರಡು ಕುಟುಂಬಗಳ ನಡುವೆ ಜಗಳ ನಡೆಯುತ್ತಿತ್ತು. ಆರೋಪಿ ಪ್ರೀತಿಸುತ್ತಿದ್ದ ಕಾಮಿನಿ ಎರಡು ವಾರಗಳ ಹಿಂದೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಈ ವಿಷಯದಿಂದ ಕೋಪಗೊಂಡಿದ್ದ ಆರೋಪಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.


ಇದನ್ನೂ ಓದಿ: ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...