Homeಕರ್ನಾಟಕವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ: ಬೆಸ್ಕಾಂ ಅಧಿಕಾರಿಗಳಿಗೆ ಜಾಮೀನು

ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ: ಬೆಸ್ಕಾಂ ಅಧಿಕಾರಿಗಳಿಗೆ ಜಾಮೀನು

- Advertisement -
- Advertisement -

ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ತುಳಿದ ಪರಿಣಾಮ ತಾಯಿ ಮತ್ತು ಮಗು ದಾರುಣವಾಗಿ ಮೃತಪಟ್ಟ ಆಘಾತಕಾರಿ ಘಟನೆ ಭಾನುವಾರ ಬೆಳಿಗ್ಗೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ)ಯ ಐವರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿತ್ತು ಮತ್ತು ನಂತರ ಅವರನ್ನು ಬಂಧಿಸಲಾಗಿತ್ತು. ಸೋಮವಾರ ಅವರನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗೋಪಾಲನ್ ಕಾಲನಿಯ ನಿವಾಸಿಗಳಾದ ಸೌಂದರ್ಯ(23) ಮತ್ತು ಅವರ ಪುತ್ರಿ ಸುವಿಕ್ಸ ಲಿಯ(9 ತಿಂಗಳು) ಮೃತರು. ಪತಿಯ ಜೊತೆ ತಮಿಳುನಾಡಿಗೆ ತೆರಳಿದ್ದ ಸೌಂದರ್ಯ ಮತ್ತು ಅವರ ಪುತ್ರಿ ಲೀಲಾ ಇಂದು ಬೆಳಗ್ಗೆ 6 ಗಂಟೆಗೆ ಬಸ್ಸಿನಲ್ಲಿ ಬೆಂಗಳೂರಿಗೆ ಬಂದಿಳಿದಿದ್ದರು. ಬಳಿಕ ತಾಯಿ-ಮಗಳು ಫುಟ್ ಪಾತ್‌ನಲ್ಲಿ ನಡೆದುಕೊಂಡು ಮನೆಯತ್ತ ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ತುಳಿದ ಪರಿಣಾಮ ಮೃತಪಟ್ಟಿದ್ದಾರೆ.

ಬೆಸ್ಕಾಂ ಕಚೇರಿಯಿಂದ 100 ಮೀಟರ್ ದೂರದಲ್ಲಿರುವ ವೈಟ್‌ಫೀಲ್ಡ್ ಮುಖ್ಯರಸ್ತೆಯ ಹೋಪ್ ಫಾರ್ಮ್ ಜಂಕ್ಷನ್ ಬಳಿ  ಈ ಘಟನೆ ನಡೆದಿದೆ.

ಈ ಘಟನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ನಿರ್ಲಕ್ಷ್ಯ ತೋರಿದ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಆರಂಭದಲ್ಲಿ ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿತ್ತು ಮತ್ತು ನಂತರ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದರು.

ತಾಯಿ, ಮಗುವಿನ ಸಾವಿಗೆ ಕಾರಣರಾದ ಆರೋಪದ ಮೇಲೆ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಶ್ರೀರಾಮ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುಬ್ರಹ್ಮಣ್ಯ, ಸಹಾಯಕ ಎಂಜಿನಿಯರ್ ಚೇತನ್, ಜಂಟಿ ಎಂಜಿನಿಯರ್ ರಾಜಣ್ಣ ಮತ್ತು ಸ್ಟೇಷನ್ ಆಪರೇಟರ್ ಮಂಜುನಾಥ್ ಅವರನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.

ದುರಂತ ಸಂಭವಿಸಿ ಒಂದು ಗಂಟೆ ಕಳೆದರೂ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂಬ ಆರೋಪ ಕೇಳಿಬಂದಿದೆ. ಶನಿವಾರ ರಾತ್ರಿ ಪಾದಚಾರಿ ಮಾರ್ಗದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ ಎಂದು ಆರೋಪಿಸಲಾಗಿದೆ.

ತಮಿಳುನಾಡಿನಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿ ಸೌಂದರ್ಯ ತನ್ನ 9 ತಿಂಗಳ ಮಗಳು ಮತ್ತು ಪತಿ ಸಂತೋಷ್ ಕುಮಾರ್ ಅವರೊಂದಿಗೆ ಬೆಂಗಳೂರಿಗೆ ಮರಳುತ್ತಿದ್ದರು. ಬಸ್ ಇಳಿದು ಮನೆಗೆ ನಡೆದುಕೊಂಡು ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಪಾದಚಾರಿ ಮಾರ್ಗದ ಮೇಲೆ ತುಂಡಾಗಿ ಬಿದ್ದಿದ್ದ 11 ಕೆವಿ ವಿದ್ಯುತ್ ತಂತಿಯನ್ನು ತುಳಿದು ಸೌಂದರ್ಯ ಮತ್ತು ಆಕೆಯ ಮಗು ಸಜೀವ ದಹನವಾಗಿದ್ದಾರೆ. ಜೊತೆಯಲ್ಲಿದ್ದ ಸಂತೋಷ್ ಅವರನ್ನು ರಕ್ಷಿಸಲು ಯತ್ನಿಸಿದಾಗ ಅವರಿಗೆ ವಿದ್ಯುತ್ ಶಾಕ್ ತಗುಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ನಂತರ, ಸಾರ್ವಜನಿಕರು ಅವರಿಗೆ ಸಹಾಯ ಮಾಡುವ ಬದಲು ತಮ್ಮ ಮೊಬೈಲ್‌ನಲ್ಲಿ ದುರಂತವನ್ನು ರೆಕಾರ್ಡ್ ಮಾಡುವುದರಲ್ಲಿ ನಿರತರಾಗಿದ್ದಾರೆ.

ಈ ಸಂಬಂಧ ಕಾಡುಗೋಡಿ ಪೊಲೀಸರು ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಬೆಸ್ಕಾಂ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದು, ಮೃತರ ಕುಟುಂಬಕ್ಕೆ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ.

ಇದನ್ನೂ ಓದಿ: ಬೆಂಗಳೂರು: ರಸ್ತೆ ಬದಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ತಾಯಿ-ಮಗು ದಾರುಣ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...