Homeಮುಖಪುಟಮೊಮ್ಮಗನ ಸುಪರ್ದಿ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ತಾಯಿ

ಮೊಮ್ಮಗನ ಸುಪರ್ದಿ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ತಾಯಿ

- Advertisement -
- Advertisement -

ಮಾಜಿ ಸೊಸೆ ನಿಕಿತಾ ಸಿಂಘಾನಿಯಾ ಜೊತೆಯಲ್ಲಿರುವ ಮೊಮ್ಮಗನನ್ನು ತಮ್ಮ ಸುಪರ್ದಿಗೆ ಒಪ್ಪಿಸುವಂತೆ ಕೋರಿ ಡಿಸೆಂಬರ್ 9ರಂದು ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಅವರ ತಾಯಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಡಿಸೆಂಬರ್ 20ರಂದು ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಎನ್.ಕೋಟೀಶ್ವರ್ ಸಿಂಗ್ ಅವರಿದ್ದ ಪೀಠ ಕರ್ನಾಟಕ, ಉತ್ತರ ಪ್ರದೇಶ ಹಾಗೂ ಹರಿಯಾಣ ಸರ್ಕಾರಗಳ ಪ್ರತಿಕ್ರಿಯೆ ಕೇಳಿದ್ದು, ಅಪ್ರಾಪ್ತ ಮಗುವಿನ ಸ್ಥಳ ಖಚಿತಪಡಿಸಿಕೊಳ್ಳುವಂತೆ ಸೂಚಿಸಿದೆ.

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಸುಭಾಷ್‌ ಅವರಿಂದ ದೂರವಾಗಿದ್ದ ನಿಕಿತಾ ಹರಿಯಾಣದ ಗುರುಗ್ರಾಮದಲ್ಲಿ ನೆಲೆಸಿದ್ದರು. ಆಕೆಯ ತಾಯಿ ಮತ್ತು ಸಹೋದರ ಉತ್ತರ ಪ್ರದೇಶದ ನಿವಾಸಿಗಳು. ಹೀಗಾಗಿ, ಮೂರು ರಾಜ್ಯ ಸರ್ಕಾರಗಳನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಮಾಡಲಾಗಿದೆ.

ಮಗು ಇರುವ ಸ್ಥಳವನ್ನು ಮಾಜಿ ಸೊಸೆ ಬಹಿರಂಗಪಡಿಸುತ್ತಿಲ್ಲ ಎಂದು ಆರೋಪಿಸಿ ಅತುಲ್ ಅವರ ತಾಯಿ ನ್ಯಾಯಾಲಯದ ಮೊರೆ ಹೋಗಿದ್ದರು. ಹಿರಿಯ ವಕೀಲ ಗೌರವ್ ಅಗರವಾಲ್ ಹಾಗೂ ವಕೀಲ ಕುಮಾರ್ ದುಶ್ಯಂತ್ ಸಿಂಗ್ ತಾಯಿ ಪರ ವಾದ ಮಂಡಿಸಿದ್ದಾರೆ.

ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ 34 ವರ್ಷದ ಅತುಲ್ ಸುಭಾಷ್ ಡಿ.9ರಂದು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತ್ನಿ ವಿಚ್ಚೇದಿತ ಪತ್ನಿ ನಿಕಿತಾ ಸಿಂಘಾನಿಯಾ ಮತ್ತು ಅವರ ಕುಟುಂಬ ತನಗೆ ಕಿರುಕುಳ ನೀಡಿದೆ ಎಂದು ಸಾಯುವ ಮುನ್ನ ಅತುಲ್ ಡೆತ್‌ ನೋಟ್‌ ಬರೆದಿಟ್ಟಿದ್ದರು. ಅಲ್ಲದೆ, 90 ನಿಮಿಷಗಳ ವಿಡಿಯೋ ಕೂಡ ರೆಕಾರ್ಡ್‌ ಮಾಡಿದ್ದರು.

ಉತ್ತರ ಪ್ರದೇಶದ ಜೌನ್‌ಪುರದ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ, ಜೀವನಾಂಶ ಮತ್ತು ಮಕ್ಕಳ ಪಾಲನೆಗೆ ಸಂಬಂಧಿಸಿದಂತೆ ಕಾನೂನು ಹೋರಾಟ ನಡೆಯುತ್ತಿರುವಾಗಲೇ, ವಿಚ್ಚೇದಿತ ಪತ್ನಿ ನಿಕಿತಾ ಸಿಂಘಾನಿಯಾ ಮತ್ತವರ ಕುಟುಂಬ ತನ್ನ ವಿರುದ್ಧ ಅನೇಕ ವೈವಾಹಿಕ ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುತ್ತಿದೆ ಎಂದು ಅತುಲ್ ಅವರು ಸಾಯುವ ಮುನ್ನ ಮಾಡಿದ ವಿಡಿಯೋದಲ್ಲಿ ಆರೋಪಿಸಿದ್ದರು.

ವಿಡಿಯೋ ವೈರಲ್ ಆದ ಬಳಿಕ ಅತುಲ್ ಅವರ ವಿಚ್ಚೇದಿತ ಪತ್ನಿ ನಿಕಿತಾ ಸಿಂಘಾನಿಯಾ ಮತ್ತು ಆಕೆಯ ಕುಟುಂಬಸ್ಥರನ್ನು ಬಂಧಿಸುವಂತೆ ಜನರು ಒತ್ತಾಯಿಸಿದ್ದರು. ನಂತರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪೊಲೀಸರು ಅತುಲ್ ಸುಭಾಷ್ ಅವರ ವಿಚ್ಛೇದಿತ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಮತ್ತು ಸಹೋದರ ಅನುರಾಗ್ ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : ‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ ವಾಗ್ಯುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...