Homeಮುಖಪುಟಮಹೇಂದ್ರ ಕುಮಾರ್‌ ನಿಧನಕ್ಕೆ ತೀವ್ರ ಸಂತಾಪ: ಕಂಬನಿ ಮಿಡಿದ ಹಲವರು

ಮಹೇಂದ್ರ ಕುಮಾರ್‌ ನಿಧನಕ್ಕೆ ತೀವ್ರ ಸಂತಾಪ: ಕಂಬನಿ ಮಿಡಿದ ಹಲವರು

- Advertisement -
- Advertisement -

ನಮ್ಮ ಧ್ವನಿ ಬಳಗದ ಮುಖ್ಯಸ್ಥರು ಮತ್ತು ಸಾಮಾಜಿಕ ಚಿಂತಕರಾದ ಮಹೇಂದ್ರ ಕುಮಾರ್‌ರವರ ನಿಧನಕ್ಕೆ ರಾಜ್ಯಾದ್ಯಂತ ಸಾವಿರಾರು ಜನ ತೀವ್ರ ಸಂತಾಪ ಸೂಚಿಸಿದ್ದು, ಕಂಬನಿ ಮಿಡಿದಿದ್ದಾರೆ.

ಮುಖ್ಯಮಂತ್ರಿಗಳಾದ ಬಿ.ಎಸ್‌ ಯಡಿಯೂರಪ್ಪನವರು ಟ್ವೀಟ್‌ ಮಾಡಿ “ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಅವರ ಅಗಲಿಕೆ ನೋವು ತಂದಿದೆ. ಬಜರಂಗದಳದ ಮಾಜಿ ಸಂಚಾಲಕರಾಗಿದ್ದ ಮಹೇಂದ್ರ ಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಹಿತೈಷಿಗಳಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ಸಾಮಾಜಿಕ ಹೋರಾಟಗಾರ‌ ಮಹೇಂದ್ರಕುಮಾರ್ ಅವರ ಅನಿರೀಕ್ಷಿತ ಸಾವಿನಿಂದ ದುಃಖಿತನಾಗಿದ್ದೇನೆ.
ಜಾತ್ಯತೀತ ಶಕ್ತಿಗಳನ್ನು ಸಂಘಟಿಸಲು ಅವಿರತವಾಗಿ ಶ್ರಮಿಸುತ್ತಿದ್ದ ಈ ಯುವನಾಯಕ ಒಂದೆರಡು ಭೇಟಿಗಳಲ್ಲಿಯೇ ನನ್ನಲ್ಲಿ ಭರವಸೆ ಮೂಡಿಸಿದ್ದರು. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಸಾಮಾಜಿಕ ಹೋರಾಟಗಾರ‌ ಮಹೇಂದ್ರಕುಮಾರ್ ಅವರ ಅನಿರೀಕ್ಷಿತ ಸಾವಿನಿಂದ ದು:ಖಿತನಾಗಿದ್ದೇನೆ.ಜಾತ್ಯತೀತ ಶಕ್ತಿಗಳನ್ನು ಸಂಘಟಿಸಲು ಅವಿರತವಾಗಿ…

Posted by Siddaramaiah on Friday, April 24, 2020

ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ ಕುಮಾರಸ್ವಾಮಿಯವರು ಟ್ವೀಟ್‌ ಮಾಡಿ “ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ಹಠಾತ್ ನಿಧನದ ಸುದ್ದಿ ಕೇಳಿ ದಿಗ್ಬ್ರಮೆಯಾಗಿದೆ. ವ್ಯವಸ್ಥೆಯ ತಲ್ಲಣಗಳಿಗೆ ಮಿಡಿಯುತ್ತಿದ್ದ ಜೀವ ಕಮರಿ ಹೋದಂತಾಗಿದೆ.

ಹಿಂದೂಪರ ಸಂಘಟನೆಗಳ ಮೂಲಕ ಗುರುತಿಸಿಕೊಂಡಿದ್ದ ಮಹೇಂದ್ರಕುಮಾರ್ ಇದ್ದಕ್ಕಿದ್ದಂತೆ ಬದಲಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ನನ್ನೊಂದಿಗೆ ಮುಕ್ತವಾಗಿ ಸಮಾಜದ ತಲ್ಲಣಗಳ ಬಗ್ಗೆ ಚರ್ಚಿಸುತ್ತಿದ್ದರು.

ಆನಂತರ ಪಕ್ಷ ರಾಜಕೀಯದಿಂದ ದೂರ ಸರಿದ ಅವರು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪ್ರಗತಿಪರ ಚಿಂತಕ ಗುಣವನ್ನು ಬಿಡಲೇ ಇಲ್ಲ. ಆದರೆ ಸಿದ್ಧಾಂತಗಳು ಬದಲಾಗಿದ್ದನ್ನು ನಾನು ಹತ್ತಿರದಿಂದ ಕಂಡಿದ್ದೆ.

‘ನಮ್ಮ ಧ್ವನಿ’ ಸಂಘಟನೆ ಹುಟ್ಟುಹಾಕಿದ್ದ ಮಹೇಂದ್ರಕುಮಾರ್ ಈ ಮೂಲಕ ರಾಜ್ಯದಾದ್ಯಂತ ಜೀವಪರ ನಿಲುವನ್ನು ಜಾಗೃತಗೊಳಿಸುವ ಕ್ರಿಯೆಯಲ್ಲಿ ಸಕ್ರಿಯರಾಗಿದ್ದರು.

ಅಕಾಲಿಕ ಸಾವನ್ನಪ್ಪಿದ ಮಹೇಂದ್ರ ಕುಮಾರ್ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬ ಸದಸ್ಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ದಕ್ಕಲಿ” ಎಂದು ವಿದಾಯ ಹೇಳಿದ್ದಾರೆ.

ಇದಲ್ಲದೇ ಮಹೇಂದ್ರ ಕುಮಾರ್‌ ನಿಧನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅವರ ನಿಕಟವರ್ತಿಗಳು, ಸ್ನೇಹಿತರು, ಬೆಂಬಲಿಗರು, ಅಭಿಮಾನಿಗಳು ಮಹೇಂದ್ರ ಕುಮಾರ್‌ರವರ ಚಿತ್ರವನ್ನು ತಮ್ಮ ಪ್ರೊಫೈಲ್‌ ಫೋಟೊ ಆಗಿ ಹಾಕಿಕೊಳ್ಳುವ ಮೂಲಕ ಅಗಲಿದ ಚಿಂತಕನಿಗೆ ಗೌರವ ಸಲ್ಲಿಸಿದ್ದಾರೆ.

ಸದ್ಯಕ್ಕೆ ಅವರ ಪಾರ್ಥಿವ ಶರೀರವು ಎಂ.ಎಸ್‌ ರಾಮಯ್ಯ ಆಸ್ಪತ್ರೆಯಲ್ಲಿದ್ದು, 12 ಗಂಟೆಯ ಸುಮಾರಾಗಿ ಅವರ ಸ್ವಗ್ರಾಮವಾದ ಕೊಪ್ಪದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ.


ಇದನ್ನೂ ಓದಿ: ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಇನ್ನಿಲ್ಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...