Homeಮುಖಪುಟಭಾರತ ಗ್ರಂಥಾಲಯ ಮತ್ತು ಪುಸ್ತಕಗಳಿಗಾಗಿ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಮಾಡುವ ಖರ್ಚು ಎಷ್ಟು ಗೊತ್ತೇ?

ಭಾರತ ಗ್ರಂಥಾಲಯ ಮತ್ತು ಪುಸ್ತಕಗಳಿಗಾಗಿ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಮಾಡುವ ಖರ್ಚು ಎಷ್ಟು ಗೊತ್ತೇ?

ಈ ವಿದ್ಯಾರ್ಥಿಗಳು ಮತ್ತು ಅವರ ತಾಯಂದಿರು ಮೂರು ವಾರದಿಂದ ಹೋರಾಡುತ್ತಿರುವುದಾರೂ ಏಕೆ ಗೊತ್ತಾ?

- Advertisement -
- Advertisement -

ಪಿಥೋರಘಡದಲ್ಲಿ ಶಿಕ್ಷಕರು ಮತ್ತು ಪುಸ್ತಕಗಳಿಗಾಗಿ ನಿರಂತರ ಚಳುವಳಿ

ಉತ್ತರಾಖಂಡದ ಪಿಥೋರಘಡದಲ್ಲಿನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ 3 ವಾರಗಳಿಂದ ಉತ್ತಮ ಗ್ರಂಥಾಲಯಗಳು ಮತ್ತು ಹೆಚ್ಚಿನ ಪುಸ್ತಕಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿದಿನ ಕನಿಷ್ಠ 15-20 ವಿದ್ಯಾರ್ಥಿಗಳು ಭಾನುವಾರದಂದು ಸಹ ಧರಣಿಯಲ್ಲಿ ಕುಳಿತಿದ್ದಾರೆ. ಜೊತೆಗೆ ಪಿಥೋರಘಡದ ಬೀದಿಗಳಲ್ಲಿ ವಿದ್ಯಾರ್ಥಿಗಳು ಪೋಸ್ಟರ್‌ಗಳೊಂದಿಗೆ ಮೌನ ಮೆರವಣಿಗೆ ನಡೆಸುತ್ತಿದ್ದಾರೆ.

ಪಿಥೋರಘಡ ನೇಪಾಳ ಮತ್ತು ಚೀನಾವನ್ನು ಅದರ ಗಡಿಯಾಗಿ ಹೊಂದಿರುವ ಉತ್ತರಖಂಡ ರಾಜ್ಯದ ಪಟ್ಟಣ. 70 ರ ದಶಕದಲ್ಲಿ ಬೆಟ್ಟ ಪ್ರದೇಶಗಳಿಗಳಲ್ಲಿ ವಿಶ್ವವಿದ್ಯಾನಿಲಯಗಳು ಬೇಕೆಂಬ ದೊಡ್ಡ ವಿದ್ಯಾರ್ಥಿ ಚಳುವಳಿ ನಡೆದಿತ್ತು. ಆ ಹೋರಾಟದಲ್ಲಿ ಇಬ್ಬರು ಯುವ ವಿದ್ಯಾರ್ಥಿಗಳು ಪೊಲೀಸ್ ಶೂಟಿಂಗ್‌ನಲ್ಲಿ ಪ್ರಾಣ ಕಳೆದುಕೊಂಡರು. ನಂತರವಷ್ಟೇ ಅಲ್ಲಿ ಕುಮಾನ್ ಮತ್ತು ಗರ್ವಾಲ್ ವಿಶ್ವವಿದ್ಯಾಲಯವನ್ನು 1973 ರಲ್ಲಿ ತೆರೆಯಲಾಯಿತು.

ಈ ಕಾಲೇಜಿನಲ್ಲಿ 7000 ವಿದ್ಯಾರ್ಥಿಗಳಿದ್ದು, ಕಾಲೇಜಿನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಈ ವಿಷಯವನ್ನು ಸಚಿವರಿಗೆ ಮುಟ್ಟಿಸಲು ವಿದ್ಯಾರ್ಥಿಗಳು ಅಕ್ಟೋಬರ್ 2018 ರಲ್ಲಿ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿದರು. ಅಂದಿನಿಂದ ಅವರು ಡಿಸಿ ಕಚೇರಿಗೆ 5 ಬಾರಿ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಅವರ ಮನವಿ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ ಅವರು ಧರಣಿಗಳನ್ನು ಪ್ರಾರಂಭಿಸಿದ್ದಾರೆ. ಈ ವಿದ್ಯಾರ್ಥಿಗಳ ತಾಯಂದಿರು ಸಹ ಮೆರವಣಿಗೆಯಲ್ಲಿ ಸೇರಿಕೊಂಡು ಬೆಂಬಲ ಸೂಚಿಸಿದ್ದಾರೆ.

ಕಾಲೇಜು ಗ್ರಂಥಾಲಯದಲ್ಲಿನ ಪುಸ್ತಕಗಳು ತುಂಬಾ ಹಳೆಯವು, ತೇವ ಮತ್ತು ದೂಳಿಡಿದು ಕೂತಿವೆ ಎಂದು ವಿದ್ಯಾರ್ಥಿಗಳು ಹೇಳುತ್ತಾರೆ. ಕಾಲೇಜಿನಲ್ಲಿ ಕಲಿಸಲಾಗುವ ವಿಷಯಗಳ ಕುರಿತ ಪುಸ್ತಕಗಳು ಗ್ರಂಥಾಲಯದಲ್ಲಿಲ್ಲ. ಅನೇಕ ವಿದ್ಯಾರ್ಥಿಗಳು ಇತರ ನಗರಗಳಿಂದ, ಕೆಲವೊಮ್ಮೆ ದೆಹಲಿಯಿಂದ ಪುಸ್ತಕಗಳನ್ನು ಪಡೆಯಲು 8-10 ಗಂಟೆಗಳ ಬಸ್ ಪ್ರಯಾಣವನ್ನು ಮಾಡಬೇಕಾಗುತ್ತದೆ. ಪ್ರಯೋಗಾಲಯಗಳು ಅತ್ಯಂತ ಕೆಟ್ಟ ಸ್ಥಿತಿಯಲ್ಲಿವೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

1990 ರ ದಶಕದಿಂದಲೂ ಸಣ್ಣ ಪಟ್ಟಣಗಳಲ್ಲಿನ ಕಾಲೇಜುಗಳನ್ನು ಮುಚ್ಚುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಶಿಕ್ಷಕರು ಇಲ್ಲ, ಗ್ರಂಥಾಲಯಗಳಿಲ್ಲ. ಭಾರತದ ವೆಚ್ಚ ವರದಿಯ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ 70,817 ಗ್ರಂಥಾಲಯಗಳು ಮತ್ತು ನಗರ ಪ್ರದೇಶಗಳಲ್ಲಿ 4,580 ಗಳು ಕ್ರಮವಾಗಿ 830 ದಶಲಕ್ಷ ಮತ್ತು 370 ದಶಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿವೆ,. 2011 ರ ಜನಗಣತಿಯ ಪ್ರಕಾರ ಮೊದಲ ಬಾರಿಗೆ ಗ್ರಂಥಾಲಯಗಳನ್ನು ಅಧಿಕೃತವಾಗಿ ಗುರುತಿಸಲಾಗಿದೆ. ಆ ಪ್ರಕಾರ ಸರಿಸುಮಾರು ಪ್ರತಿ 11,500 ಜನರಿಗೆ ಒಂದು ಗ್ರಾಮೀಣ ಗ್ರಂಥಾಲಯ ಮತ್ತು 80,000 ಕ್ಕೂ ಹೆಚ್ಚು ಜನರಿಗೆ ಒಂದು ನಗರ ಗ್ರಂಥಾಲಯ ಮಾತ್ರ ಇವೆ. ಆದಾಗ್ಯೂ, ಈ ಗ್ರಂಥಾಲಯಗಳ ಕಾರ್ಯಕ್ಷಮತೆ ಮತ್ತು ಸೇವಾ ಸಾಮರ್ಥ್ಯಗಳ ಬಗ್ಗೆ ಯಾವುದೇ ನಿಖರವಾದ ಮಾಹಿತಿಯಿಲ್ಲ – ಗ್ರಾಮೀಣ ಗ್ರಂಥಾಲಯಗಳು ಕೆಲವು ಪುಸ್ತಕಗಳನ್ನು ಹೊಂದಿರುವ ಕೋಣೆಯಾಗಿರಬಹುದು, ಆದರೆ ಇತರವು ಖಾಸಗಿ ದಾನಿಗಳು ಅಥವಾ ಎನ್‌ಜಿಒಗಳ ಬೆಂಬಲದ ಮೂಲಕ ನಡೆಯಬಹುದಾಗಿವೆ.

ಅಮೇರಿಕಾದಲ್ಲಿ  ಗ್ರಂಥಾಲಯಕ್ಕಾಗಿ ವರ್ಷಕ್ಕೆ ಒಬ್ಬ ವ್ಯಕ್ತಿಗೆ 36 ಡಾಲರ್ ಖರ್ಚು ಮಾಡುತ್ತದೆ, ಮತ್ತು ಭಾರತದಲ್ಲಿ ಭಾರತದಲ್ಲಿ ಒಬ್ಬ ವ್ಯಕ್ತಿಗೆ 7 ಪೈಸಾ ಖರ್ಚು ಮಾಡುತ್ತದೆ. ಹಾಗಾದರೆ ಭಾರತ ತನ್ನ ಹಣವನ್ನು ಎಲ್ಲಿ ಖರ್ಚು ಮಾಡುತ್ತಿದೆ? ನಮ್ಮ ಯುವಜನರಿಗೆ ಉತ್ತಮ ಪುಸ್ತಕಗಳು ಸಿಗದಿದ್ದರೆ ನಾವು ಹೇಗೆ ಮಹಾಶಕ್ತಿಯಾಗುತ್ತೇವೆ? ನಾವು ಹೇಗೆ ವಿಶ್ವಗುರು ಆಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...