Homeಮುಖಪುಟತಮ್ಮ ಫೇಸ್‌ಬುಕ್ ಖಾತೆಯಲ್ಲಿ ಗೌಪ್ಯತೆ ಉಲ್ಲಂಘನೆ; ಮೆಟಾಗೆ ಪತ್ರ ಬರೆದ ಸಂಸದ ಅಭಿಷೇಕ್ ಬ್ಯಾನರ್ಜಿ

ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಗೌಪ್ಯತೆ ಉಲ್ಲಂಘನೆ; ಮೆಟಾಗೆ ಪತ್ರ ಬರೆದ ಸಂಸದ ಅಭಿಷೇಕ್ ಬ್ಯಾನರ್ಜಿ

- Advertisement -
- Advertisement -

ತಮ್ಮ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಗೌಪ್ಯತೆಯ ಉಲ್ಲಂಘನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ, “ತಮ್ಮ ಅಧಿಕೃತ ಫೇಸ್‌ಬುಕ್ ಪುಟಕ್ಕೆ ಅನಧಿಕೃತ ಪ್ರವೇಶ ಮಾಡಿದ್ದು ವೈಯಕ್ತಿಕ ಮಾಹಿತಿಗೆ ಅನಧಿಕೃತ ಬದಲಾವಣೆಗಳನ್ನು ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಫೇಸ್‌ಬುಕ್‌ನ ಮಾತೃ ಕಂಪನಿಯಾದ ಮೆಟಾಗೆ ಬ್ಯಾನರ್ಜಿ ಪರ ಅವರ ವಕೀಲ ಸಂಜಯ್ ಬಸು ಪತ್ರ ಬರೆದು, “ತಮ್ಮ ಖಾತೆಗೆ ಅನಧಿಕೃತ ಪ್ರವೇಶ ಮಾಡಿದ್ದು, ವೈಯಕ್ತಿಕ ಮಾಹಿತಿಯ (ಬಯೋ) ಬದಲಾವಣೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಬ್ಯಾನರ್ಜಿಯವರ ಖಾತೆಗೆ ಸಂಬಂಧಿಸಿದಂತೆ ಈ ಘಟನೆಯನ್ನು “ಗಂಭೀರ ಭದ್ರತಾ ಉಲ್ಲಂಘನೆ” ಎಂದು ಅವರು ವಿವರಿಸಿದ್ದಾರೆ.

ಬ್ಯಾನರ್ಜಿಯವರ ಅಧಿಕೃತ ಫೇಸ್‌ಬುಕ್ ಪುಟವು ಮೂಲತಃ ಈ ಕೆಳಗಿನ ಬಯೋವನ್ನು ಪ್ರದರ್ಶಿಸಿದೆ ಎಂದು ದೂರಿನಲ್ಲಿ ಎತ್ತಿ ತೋರಿಸಲಾಗಿದೆ: “ಅಭಿಷೇಕ್ ಬ್ಯಾನರ್ಜಿಯವರ ಅಧಿಕೃತ ಪುಟ | ಸಂಸತ್ ಸದಸ್ಯ (ಲೋಕಸಭೆ) | ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್”

ಆದರೆ, ಫೆಬ್ರವರಿ 11, 2025 ರಂದು, “ಅಖಿಲ ಭಾರತ ತೃಣಮೂಲ ಕಾಂಗ್ರೆಸ್” ಅನ್ನು ಅವರ ಬಯೋದಿಂದ ತೆಗೆದುಹಾಕಲಾಗಿದೆ” ಎಂದು ಅವರ ಗಮನಕ್ಕೆ ತರಲಾಯಿತು. ಮಾರ್ಪಡಿಸಿದ ಆವೃತ್ತಿಯಲ್ಲಿ, “ಅಭಿಷೇಕ್ ಬ್ಯಾನರ್ಜಿ ಅವರ ಅಧಿಕೃತ ಪುಟ | ಸಂಸತ್ ಸದಸ್ಯ (ಲೋಕಸಭೆ) | ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ” ಎಂದಿದೆ.

ಲೋಕಸಭೆಯ ಸದಸ್ಯರಾಗಿರುವ ಅಭಿಷೇಕ್ ಬ್ಯಾನರ್ಜಿ ಸಾರ್ವಜನಿಕ ಹುದ್ದೆಯನ್ನು ಹೊಂದಿದ್ದಾರೆ. ಅವರ ಫೇಸ್‌ಬುಕ್ ಖಾತೆಯು ಅವರ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ವೇದಿಕೆಯಾಗಿ ಮಾತ್ರವಲ್ಲದೆ ಅವರ ಬೆಂಬಲಿಗರು, ಸಹೋದ್ಯೋಗಿಗಳು ಮತ್ತು ಮತದಾರರೊಂದಿಗೆ ಸಂವಹನ ನಡೆಸಲು ಅಗತ್ಯವಾದ ಮಾರ್ಗವಾಗಿಯೂ ಕಾರ್ಯನಿರ್ವಹಿಸುತ್ತದೆ ಎಂದು ಬಸು ದೂರಿನ ಪತ್ರದಲ್ಲಿ ಬರೆದಿದ್ದಾರೆ.

ಅಭಿಷೇಕ್ ಬ್ಯಾನರ್ಜಿ ಅವರ ಪರಿಶೀಲಿಸಿದ ಫೇಸ್‌ಬುಕ್ ಖಾತೆಗೆ ಅನಧಿಕೃತ ಪ್ರವೇಶದ ಬಗ್ಗೆ ಮೆಟಾಗೆ ಸಲ್ಲಿಸಿದ ದೂರು ಪತ್ರವು ಗಂಭೀರ ಕಳವಳವನ್ನು ವ್ಯಕ್ತಪಡಿಸಿದೆ. ಇದು “ಬ್ಲೂ ಟಿಕ್” ಪರಿಶೀಲನೆಯನ್ನು ಹೊಂದಿದೆ. ಬ್ಯಾನರ್ಜಿ ಅವರ ಪ್ರೊಫೈಲ್ ಅನ್ನು ಅವರಿಗೆ ಯಾವುದೇ ಪೂರ್ವ ಸೂಚನೆಯಿಲ್ಲದೆ ಕಾನೂನುಬಾಹಿರವಾಗಿ ಬದಲಾಯಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮೆಟಾ ಅವರ ಖಾತೆಯನ್ನು ಸುರಕ್ಷಿತಗೊಳಿಸಲು, ವೈಯಕ್ತಿಕ ವಿವರಗಳನ್ನು ಪುನಃಸ್ಥಾಪಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಬ್ಯಾನರ್ಜಿ ಒತ್ತಾಯಿಸಿದ್ದಾರೆ. ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಲು ವಿಫಲವಾದರೆ ಸಾಮಾಜಿಕ ಮಾಧ್ಯಮ ದೈತ್ಯ ವಿರುದ್ಧ ಕಾನೂನು ಕ್ರಮಕ್ಕೆ ಕಾರಣವಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ; ಕೇಂದ್ರದ ಹೊಸ ಕಾರ್ಮಿಕ ನೀತಿಯಿಂದ ಕಾರ್ಮಿಕರ ಕಲ್ಯಾಣಕ್ಕೆ ಅಡ್ಡಿ : ಕೇರಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...