Homeಕರ್ನಾಟಕಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ

ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ

- Advertisement -
- Advertisement -

ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಅವರು ರಾಜೀನಾಮೆಯನ್ನು ನೀಡಿದ್ದು, ಬಿಜೆಪಿ ಕಚೇರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಿ.ಎನ್.ಬಚ್ಚೇಗೌಡ ರಾಜೀನಾಮೆ ಸಲ್ಲಿಸಿದ್ದು, ಅವರು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಗೆ ರಾಜೀನಾಮೆ ಪತ್ರ ತಲುಪಿಸಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ಬರೆದಿರುವ ಸಂಸದ ಬಿ.ಎನ್.ಬಚ್ಚೇಗೌಡ, ಸ್ವ ಇಚ್ಛೆಯಿಂದ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜೀನಾಮೆ ಅಂಗೀಕರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. 2008ರಲ್ಲಿ ಬಿಜೆಪಿ ಸೇರ್ಪಡೆ ಬಳಿಕ  ಶಾಸಕ, ಸಚಿವ, ಸಂಸದರಾಗಿ ಸಾರ್ವಜನಿಕ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದ ಸಮರ್ಪಿಸುವುದಾಗಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಚ್ಚೇಗೌಡರ ಗೆಲುವಿನ ಮೂಲಕವೇ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. ಬಚ್ಚೇಗೌಡರ ಪುತ್ರ ಶರತ್‌ ಬಚ್ಚೇಗೌಡ ಕಾಂಗ್ರೆಸ್‌ ಸೇರ್ಪಡೆಯಾಗಿದ್ದು ಹೊಸಕೋಟೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಬಾರಿ ಗೆಲುವು ಕಂಡಿದ್ದ ಬಚ್ಚೇಗೌಡ ಅವರು ಜಗದೀಶ್‌ ಶೆಟ್ಟರ್‌ ಸರಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದರು.

ಕಾಂಗ್ರೆಸ್‌ಗೆ ಸೇರುವುದಿಲ್ಲ: ಸದಾನಂದ ಗೌಡ 

ಲೋಕಸಭೆ ಚುನಾವಣೆ ಸ್ಪರ್ಧೆಗೆ ಬಿಜೆಪಿಯಿಂದ ಟಿಕೆಟ್‌ ಕೈತಪ್ಪಿರುವ ಬೆನ್ನಲ್ಲಿ ಡಿವಿ ಸದಾನಂದ ಗೌಡ ಬಿಜೆಪಿ ಸೇರ್ಪಡೆ ಬಗ್ಗೆ ಸುದ್ದಿಯಾಗಿತ್ತು, ಈ ಬಗ್ಗೆ ಮಾತುಕತೆ ಕೂಡ ನಡೆದಿತ್ತು ಎನ್ನಲಾಗಿದೆ. ಆದರೆ ಇದೀಗ ಸದಾನಂದ ಗೌಡ ಉಲ್ಟಾ ಹೊಡದಿದ್ದು, ನನಗೆ ಕಾಂಗ್ರೆಸ್‌ ನಿಂದ ಆಹ್ವಾನ ಬಂದಿರುವುದು ಸತ್ಯ. ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಗೆ ಸೇರುವುದಿಲ್ಲ ಎಂದು ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ಮಾದ್ಯಮದ ಜೊತೆ ಮಾತನಾಡಿದ ಸದಾನಂದ ಗೌಡ, ರಾಜ್ಯ ಬಿಜೆಪಿಯೂ ತಮ್ಮ ಕುಟುಂಬ ಮತ್ತು ಚೇಲಾಗಳಿಗೆ ಸೀಮಿತವಾಗಿದ್ದು, ಇದು ಬದಲಾಗಬೇಕಾಗಿದೆ. ಮುಂದಿನ ನಡೆ ಏನು ಎಂದು ಹಲವರು ನನಗೆ ಕೇಳಿದ್ದಾರೆ. ನನಗೆ ಬಿಜೆಪಿ ಟಿಕೆಟ್ ತಪ್ಪಿದ್ದಕ್ಕೆ ನೋವಾಗಿದೆ. ಆದರೆ ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ತೊರೆಯುವುದಿಲ್ಲ. ಮುಂದೆ ನನ್ನ ಮುಖ್ಯ ಉದ್ದೇಶ ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯನ್ನು ಶುದ್ಧೀಕರಣ ಮಾಡುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಗುಜರಾತ್‌: ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ ಪ್ರಕರಣ; ಪೋಸ್ಟ್‌ ಅಳಿಸುವಂತೆ ಎಕ್ಸ್‌ಗೆ ಸೂಚನೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...