Homeಮುಖಪುಟಮಧ್ಯಪ್ರದೇಶದಲ್ಲಿ ರೈತರನ್ನು ಬೆಂಬಲಿಸಿ ಕಾಂಗ್ರೆಸ್ ರ್‍ಯಾಲಿ- ಆಶ್ರುವಾಯು, ಜಲಫಿರಂಗಿ ಬಳಸಿದ ಸರ್ಕಾರ

ಮಧ್ಯಪ್ರದೇಶದಲ್ಲಿ ರೈತರನ್ನು ಬೆಂಬಲಿಸಿ ಕಾಂಗ್ರೆಸ್ ರ್‍ಯಾಲಿ- ಆಶ್ರುವಾಯು, ಜಲಫಿರಂಗಿ ಬಳಸಿದ ಸರ್ಕಾರ

- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ರೈತರನ್ನು ಬೆಂಬಲಿಸಿ ಮಧ್ಯಪ್ರದೇಶದ ಭೂಪಾಲ್‌ನಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಎರಡು ವಾರಗಳ ಪ್ರತಿಭಟನಾ ಕಾರ್ಯಕ್ರಮ ಇಂದು ರಣರಂಗವಾಗಿದೆ. ರಾಜಭವನದತ್ತ ತೆರಳಿದ್ದ ರ್‍ಯಾಲಿಯನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ನೀರಿನ ಫಿರಂಗಿಗಳನ್ನು ಬಳಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ನೇತೃತ್ವದಲ್ಲಿ ರ್‍ಯಾಲಿ ನಡೆದಿದ್ದು, ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರು ಅಂತಿಮವಾಗಿ ಲಾಠಿ ಚಾರ್ಜ್ ಮಾಡಿದರು. ಘರ್ಷಣೆಯಲ್ಲಿ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಲವು ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮಧ್ಯಾಹ್ನ ನೂರಾರು ಕಾಂಗ್ರೆಸ್ ಕಾರ್ಯಕರ್ತರು ನಗರದ ಜವಾಹರ್ ಚೌಕ್ ಪ್ರದೇಶದಲ್ಲಿ ಒಟ್ಟುಗೂಡಿದ್ದರು. ಅಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲು ಅಲ್ಲಿ ಯೋಜಿಸಲಾಯಿತು. ಪೊಲೀಸರು ಇದಕ್ಕೆ ಒಪ್ಪದೆ ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಬಂಧಿಸಿದರು. ರ್‍ಯಾಲಿಯು ರಾಜ ಭವನವನ್ನು ಸಮೀಪಿಸುತ್ತಿದ್ದಂತೆ ಅವರನ್ನು ನಿಯಂತ್ರಿಸಲು ಸಾಧ್ಯವಾಗದೆ, ನೀರಿನ ಫಿರಂಗಿ ಹಾಗೂ ಆಶ್ರುವಾಯುಗಳನ್ನು ಪೊಲೀಸರು ಬಳಸಿದ್ದಾರೆ.

ಇದನ್ನೂ ಓದಿ: ನೂರರ ನೋಟ: ಕರ ನಿರಾಕರಣೆಯನ್ನು ನೆನಪಿಸಿದ ದೆಹಲಿ ರೈತ ಹೋರಾಟ

 

ಕೃಷಿ ಕಾನೂನಿನ ವಿರುದ್ದ ದೆಹಲಿಯ ಗಡಿಗಳಲ್ಲಿ ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಕೇಂದ್ರ ಸರ್ಕಾರ ಇದುವರೆಗೂ ಹನ್ನೊಂದು ಸುತ್ತಿನ ಮಾತುಕತೆ ನಡೆಸಿದೆ. ಆದರೆ ಪ್ರತಿಭಟನಾಕಾರರ ಬೇಡಿಕೆಗಳಿಗೆ ಸರ್ಕಾರ ಇದುವರೆಗೂ ಯಾವುದೆ ಸಕಾರಾತ್ಮಕ ಉತ್ತರ ನೀಡಿಲ್ಲ. ರೈತರು ಕೂಡಾ ಸ್ಪಷ್ಟವಾಗಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಹೇಳಿದ್ದು ಅವು ಈಡೇರುವವರೆಗೆ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಶೇಷ ವರದಿ: ಪ್ರತಿರೋಧಕ್ಕೆ ಹೊಸ ಅರ್ಥ ಮತ್ತು ಹುರುಪು ಕೊಟ್ಟ ದೆಹಲಿ ರೈತ ಹೋರಾಟ..!

ನಾನು ಗೌರಿ ಡೆಸ್ಕ್
+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬೆಂಗಳೂರು: ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಪರೇಡ್‌ ಮೈದಾನ ಸಜ್ಜು, ಸಾರ್ವಜನಿಕರಿಗಿಲ್ಲ ಪ್ರವೇಶ

0
ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಬೆಂಗಳೂರಿನ  ಮಹಾತ್ಮ ಗಾಂಧಿ ರಸ್ತೆಯ ಮಾಣಿಕ್ ಷಾ ಪರೇಡ್‌ ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗೆ ಸಾರ್ವಜನಿಕರಿಗೆ ಅವಕಾಶ ನೀಡಿಲ್ಲ. ಆಹ್ವಾನ ಪತ್ರಗಳು ಮತ್ತು ಪಾಸ್ ಹೊಂದಿರುವವರಿಗೆ ಮಾತ್ರ ಪರೇಡ್‌ನಲ್ಲಿ...
Wordpress Social Share Plugin powered by Ultimatelysocial
Shares