Homeದಲಿತ್ ಫೈಲ್ಸ್ಮಧ್ಯಪ್ರದೇಶ: ದಲಿತ ಬಾಲಕಿ ಶಾಲೆಗೆ ಹೋಗದಂತೆ ಅಡ್ಡಿ, ಹಲ್ಲೆ; 7 ಜನ ಅರೆಸ್ಟ್‌

ಮಧ್ಯಪ್ರದೇಶ: ದಲಿತ ಬಾಲಕಿ ಶಾಲೆಗೆ ಹೋಗದಂತೆ ಅಡ್ಡಿ, ಹಲ್ಲೆ; 7 ಜನ ಅರೆಸ್ಟ್‌

- Advertisement -
- Advertisement -

“ಇತರ ಹುಡುಗಿಯರು ಸಹ ಓದುತ್ತಿಲ್ಲವಾದ ಕಾರಣ, ನೀನು ಶಾಲೆಗೆ ಹೋಗಬಾರದು” ಎಂದು  ಮಧ್ಯಪ್ರದೇಶದ ಹಳ್ಳಿಯೊಂದರಲ್ಲಿ ಸ್ಥಳೀಯರ ಗುಂಪೊಂದು 16 ವರ್ಷದ ದಲಿತ ಬಾಲಕಿಗೆ ಬೆದರಿಕೆ ಹಾಕಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾವಲಿಯಖೇಡಿ ಗ್ರಾಮದಲ್ಲಿ ಬಾಲಕಿ ಮತ್ತು ಆರೋಪಿಗಳ ಕುಟುಂಬಗಳ ನಡುವೆ ಘರ್ಷಣೆ ನಡೆದು ಕೆಲವರಿಗೆ ಗಾಯಗಳಾಗಿದ್ದು, ಜುಲೈ 23ರ ಶನಿವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಿಗಳು ತನ್ನ ಶಾಲಾ ಬ್ಯಾಗನ್ನು ಕಿತ್ತುಕೊಂಡು ತರಗತಿಗೆ ಹಾಜರಾಗಲು ಆಕ್ಷೇಪ ವ್ಯಕ್ತಪಡಿಸಿದ ವಿಡಿಯೋವನ್ನು ಬಾಲಕಿ ಬಿಡುಗಡೆ ಮಾಡಿದ್ದಾಳೆ. ಆರೋಪಿಗಳ ಅಭಿಪ್ರಾಯವನ್ನು ವಿರೋಧಿಸಿದಾಗ ನನ್ನ ಸಹೋದರನ ಮೇಲೆ ಹಲ್ಲೆ ನಡೆಸಿದರು. ಕುಟುಂಬದ ಇತರ ಸದಸ್ಯರನ್ನೂ ಥಳಿಸಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.

ಪರಿಶಿಷ್ಟ ಜಾತಿ ಸಮುದಾಯದ ಅಪ್ರಾಪ್ತ ಬಾಲಕಿ ಶನಿವಾರ ಮಧ್ಯಾಹ್ನ ಸ್ಥಳೀಯ ಶಾಲೆಗೆ ತೆರಳಿ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಪ್ರಭಾರಿ ಅವಧೇಶ್ ಕುಮಾರ್ ಶೇಷಾ ಹೇಳಿದ್ದಾರೆ.

ಗ್ರಾಮದ ಇತರ ಹುಡುಗಿಯರು ಶಾಲೆಗೆ ಹೋಗದ ಕಾರಣ, ಕೆಲವು ವ್ಯಕ್ತಿಗಳು ದಲಿತ ಬಾಲಕಿಯ ಶಾಲಾ ಬ್ಯಾಗ್ ಕಸಿದುಕೊಂಡು ‘ನೀನು ಶಾಲೆಗೆ ಹೋಗಬೇಡ’ ಎಂದು ಗದರಿಸಿದ್ದಾರೆ. ನಂತರ, ಬಾಲಕಿಯ ಕುಟುಂಬ ಮತ್ತು ಆರೋಪಿಗಳ ಸಂಬಂಧಿಕರ ನಡುವೆ ಘರ್ಷಣೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ದೂರಿನ ಅನ್ವಯ ಕ್ರಮ ಜರುಗಿಸಿರುವ ಪೊಲೀಸರು, ಏಳು ಜನರನ್ನು ಭಾರತೀಯ ದಂಡ ಸಂಹಿತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿದ್ದಾರೆ.

ಕೌಂಟರ್‌ ದೂರು ಕೂಡ ದಾಖಲಾಗಿದ್ದು, ಹುಡುಗಿಯ ಸಹೋದರ ಮತ್ತು ಇತರ ಮೂವರ ವಿರುದ್ಧ ಹಲ್ಲೆ ಆರೋಪ ಮಾಡಲಾಗಿದೆ.

ಘರ್ಷಣೆಯಲ್ಲಿ ಗಾಯಗೊಂಡವರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾದ ಪ್ರಕಾರ, “ಘರ್ಷಣೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಲಾಠಿ ಬೀಸುವ ವ್ಯಕ್ತಿಗಳು ಬಾಲಕಿಯ ಕುಟುಂಬದ ಮೇಲೆ ಹಲ್ಲೆ ನಡೆಸುವುದು, ಅವರ ಮೇಲೆ ದೌರ್ಜನ್ಯ ಎಸಗುವುದು ವಿಡಿಯೋದಲ್ಲಿ ದಾಖಲಾಗಿದೆ.”

ಇದನ್ನೂ ಓದಿರಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

ಬಾಲಕಿ ಮನೆಗೆ ಹಿಂದಿರುಗುತ್ತಿದ್ದಾಗ ನಾಲ್ವರು ಯುವಕರು ಹಲ್ಲೆ ನಡೆಸಿದ್ದಾರೆ. “ನನ್ನ ಸೋದರಸಂಬಂಧಿ ಮಧ್ಯಪ್ರವೇಶಿಸಿದಾಗ, ಆತನನ್ನೂ ಹೊಡೆದರು. ಸುಮಾರು 15-20 ನಿಮಿಷಗಳ ನಂತರ ಯುವಕರ ಕುಟುಂಬಸ್ಥರು ನನ್ನ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ” ಬಾಲಕಿ ದೂರು ನೀಡಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಆದಾಗ್ಯೂ, ಜಿಲ್ಲಾಧಿಕಾರಿಯವರು ದಲಿತ ಕುಟುಂಬದ ಆರೋಪವನ್ನು ಅಲ್ಲಗಳೆದಿದ್ದಾರೆ. “ಹಿಂಸಾಚಾರವು ಜಾತಿ ಕಾರಣಕ್ಕಾಗಿ ನಡೆದಿದೆ ಅಥವಾ ಬಾಲಕಿ ಶಾಲೆಗೆ ಹೋಗುತ್ತಿರುವ ಕಾರಣಕ್ಕೆ ನಡೆದಿದೆ ಎಂಬುದು ಸುಳ್ಳು” ಎಂದಿದ್ದಾರೆ.

“ಹಳೇ ದ್ವೇಷದ ಹಿನ್ನೆಲೆಯಲ್ಲಿ ದಾಳಿ ನಡೆದಿರುವುದು ಸ್ಥಳೀಯ ತಹಸೀಲ್ದಾರ್ ನಡೆಸಿದ ತನಿಖೆಯಲ್ಲಿ ಬೆಳಕಿಗೆ ಬಂದಿದೆ” ಎಂದು ಜಿಲ್ಲಾಧಿಕಾರಿ ದಿನೇಶ್ ಜೈನ್ ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...