Homeಮುಖಪುಟಆರ್‌ಎಸ್‌ಎಸ್‌ ನಾಯಕರ ಪುಸ್ತಕಗಳ ಮೂಲಕ ವಿದ್ಯಾರ್ಥಿಗಳಿಗೆ ಭಾರತೀಯ ಜ್ಞಾನ ಬೋಧಿಸುವಂತೆ ಕಾಲೇಜುಗಳಿಗೆ ಸೂಚಿಸಿದ ಮಧ್ಯಪ್ರದೇಶ ಸರ್ಕಾರ...

ಆರ್‌ಎಸ್‌ಎಸ್‌ ನಾಯಕರ ಪುಸ್ತಕಗಳ ಮೂಲಕ ವಿದ್ಯಾರ್ಥಿಗಳಿಗೆ ಭಾರತೀಯ ಜ್ಞಾನ ಬೋಧಿಸುವಂತೆ ಕಾಲೇಜುಗಳಿಗೆ ಸೂಚಿಸಿದ ಮಧ್ಯಪ್ರದೇಶ ಸರ್ಕಾರ : ವರದಿ

- Advertisement -
- Advertisement -

ರಾಷ್ಟ್ರೀಯ ಶಿಕ್ಷಣ ನೀತಿ-2020ಕ್ಕೆ ಅನುಗುಣವಾಗಿ ‘ಭಾರತೀಯ ಜ್ಞಾನ ವ್ಯವಸ್ಥೆ’ ಅಥವಾ ಭಾರತೀಯ ಜ್ಞಾನ ಪರಂಪರೆಯ ಬಗ್ಗೆ ವಿದ್ಯಾರ್ಥಿಗಳಿಗೆ ಭೋದಿಸುವಂತೆ ರಾಜ್ಯದ ಕಾಲೇಜುಗಳಿಗೆ ಮಧ್ಯಪ್ರದೇಶ ಸರ್ಕಾರ ಸೂಚಿಸಿದೆ.

ರಾಜ್ಯದ ಉನ್ನತ ಶಿಕ್ಷಣ ಇಲಾಖೆಯು ವಿವಿಧ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಿಗೆ ಪತ್ರ ಬರೆದಿದ್ದು, ಆರ್‌ಎಸ್‌ಎಸ್‌ನ ಶಿಕ್ಷಣ ವಿಭಾಗವಾದ ವಿದ್ಯಾಭಾರತಿಯ ಸಂಕಲನ ಸೇರಿದಂತೆ ಮಾಜಿ ಮತ್ತು ಹಾಲಿ ಆರ್‌ಎಸ್‌ಎಸ್‌ ಪದಾಧಿಕಾರಿಗಳು ರಚಿಸಿದ 88 ಪುಸ್ತಕಗಳ ಪಟ್ಟಿಯಿಂದ ಪುಸ್ತಕಗಳನ್ನು ಖರೀದಿಸುವಂತೆ ಆದೇಶಿಸಿದೆ ಎಂದು ದಿ ವೈರ್ ವರದಿ ಮಾಡಿದೆ.

ಪುಸ್ತಕಗಳ ಪಟ್ಟಿಯಲ್ಲಿ ಆರ್‌ಎಸ್‌ಎಸ್‌ನ ಮಾಜಿ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಶ್ ಸೋನಿ, ವಿದ್ಯಾಭಾರತಿಯ ಮಾಜಿ ಪ್ರಧಾನ ಕಾರ್ಯದರ್ಶಿ ದೀನಾನಾಥ್ ಬಾತ್ರಾ ಮತ್ತು ಅಖಿಲ ಭಾರತೀಯ ವಿದ್ಯಾ ಪರಿಷತ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಡಾ.ಅತುಲ್ ಕೊಠಾರಿ ಅವರದ್ದು ಸೇರಿವೆ ಎಂದು ವರದಿ ತಿಳಿಸಿದೆ.

ಭಾರತೀಯ ಜ್ಞಾನ ಪರಂಪರಾ ಪ್ರಕೋಷ್ಠವನ್ನು ರಚಿಸುವಂತೆ ಕಾಲೇಜುಗಳಿಗೆ ಸೂಚಿಸಲಾಗಿದ್ದು, ಪಟ್ಟಿಯಲ್ಲಿರುವ 88 ಪುಸ್ತಕಗಳನ್ನು ಇದು ಖರೀದಿಸಲಿದೆ. ಈ ಪೈಕಿ ಮೂರು ಪುಸ್ತಕಗಳನ್ನು ಸೋನಿ ಬರೆದಿದ್ದು,14 ಪುಸ್ತಕಗಳನ್ನು ಆರೆಸ್ಸೆಸ್ ಪ್ರಮುಖ ಸಿದ್ಧಾಂತಿಗಳಲ್ಲಿ ಒಬ್ಬರು ಎನ್ನಲಾಗಿರುವ ಬಾತ್ರಾ ರಚಿಸಿದ್ದಾರೆ.

ಬಾತ್ರಾ ಈ ಹಿಂದೆ 12ನೇ ತರಗತಿಯ ಹಿಂದಿ ಪಠ್ಯಪುಸ್ತಕ ‘ಆರೋಹ್’ ನಿಂದ ಕ್ರಾಂತಿಕಾರಿ ಪಂಜಾಬಿ ಕವಿ ಅವತಾರ ಪಾಷ್ ಅವರ ‘ಸಬ್‌ಸೆ ಖತರ್ನಾಕ್’ ಕವಿತೆಯನ್ನು ಕೈಬಿಡಲು ಪ್ರಸ್ತಾಪಿಸಿದ್ದರು.

ರಾಜ್ಯ ಸರ್ಕಾರ ಕಾಲೇಜುಗಳಿಗೆ ಕಳುಹಿಸಿರುವ ಪಟ್ಟಿಯಲ್ಲಿ ಸ್ವಾಮಿ ವಿವೇಕಾನಂದರ ಕೃತಿಗಳೂ ಸೇರಿವೆ. ಹೆಚ್ಚಿನ ಪುಸ್ತಕಗಳು ವೈದಿಕ ಗಣಿತಕ್ಕೆ ಸಂಬಂಧಿಸಿವೆ ಎಂದು ವರದಿಯು ತಿಳಿಸಿದೆ.

ಸರ್ಕಾರದ ನಡೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಇದು ವಿಭಜಕ ಸಿದ್ಧಾಂತಗಳು ಮತ್ತು ದ್ವೇಷದೊಂದಿಗೆ ವಿದ್ಯಾರ್ಥಿಗಳ ಮನಸ್ಸುಗಳಲ್ಲಿ ವಿಷವನ್ನು ತುಂಬುವ ಪ್ರಯತ್ನವಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ : ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ತನಿಖೆಗೆ ವಹಿಸಿದ ಕಲ್ಕತ್ತಾ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...