Homeಮುಖಪುಟಮಹಾರಾಷ್ಟ್ರ ಸಿಎಂ ಉದ್ದವ್‌ ಠಾಕ್ರೆ ನನ್ನ ವಿರುದ್ಧ ಸ್ಪರ್ಧಿಸಲಿ: ಸಂಸದೆ ನವನೀತ್‌ ಸವಾಲು

ಮಹಾರಾಷ್ಟ್ರ ಸಿಎಂ ಉದ್ದವ್‌ ಠಾಕ್ರೆ ನನ್ನ ವಿರುದ್ಧ ಸ್ಪರ್ಧಿಸಲಿ: ಸಂಸದೆ ನವನೀತ್‌ ಸವಾಲು

- Advertisement -
- Advertisement -

“ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಚುನಾವಣೆಯಲ್ಲಿ ನನ್ನ ವಿರುದ್ಧ ಸ್ಪರ್ಧಿಸಲಿ” ಎಂದು ಅಮರಾವತಿ ಸಂಸದೆ ನವನೀತ್ ರಾಣಾ ಸವಾಲು ಹಾಕಿದ್ದಾರೆ. ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಲಾರ್ಡ್ ರಾಮ ಮತ್ತು ಮುಂಬೈನ ಜನರು ಶಿವಸೇನೆಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸವಾದ ‘ಮಾತೋಶ್ರೀ’ ಹೊರಗೆ ತಮ್ಮ ಬೆಂಬಲಿಗರೊಂದಿಗೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನವನೀತ್ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ಅವರಿಗೆ ಮೇ 4ರಂದು ಬುಧವಾರ ಜಾಮೀನು ದೊರೆತಿದೆ.

ಶಿವಸೇನೆಯ ಅಧ್ಯಕ್ಷರೂ ಆಗಿರುವ ಠಾಕ್ರೆ ಅವರು ನವೆಂಬರ್ 2019ರಲ್ಲಿ ಸಿಎಂ ಆದರು. ಅವರು ಮೇ 2020ರಲ್ಲಿ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನವನೀತ್ ರಾಣಾ, “ಉದ್ಧವ್ ಠಾಕ್ರೆ ಅವರು ಒಂದು ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಜನರಿಂದ ನೇರವಾಗಿ ಗೆದ್ದು ಬರಲಿ ಎಂದು ನಾನು ಸವಾಲು ಹಾಕುತ್ತೇನೆ. ನಾನು ಅವರ ವಿರುದ್ಧ ಹೋರಾಡುತ್ತೇನೆ” ಎಂದಿದ್ದಾರೆ.

“ನಾನು ಪ್ರಾಮಾಣಿಕತೆಯಿಂದ ಕಠಿಣ ಪರಿಶ್ರಮದಿಂದ ಚುನಾವಣೆಯಲ್ಲಿ ಗೆಲ್ಲುತ್ತೇನೆ, ಅವರಿಗೆ (ಸಿಎಂ) ಜನ ಶಕ್ತಿ ತಿಳಿಯಲಿದೆ” ಎಂದು ತಿಳಿಸಿದ್ದಾರೆ.

“ನಾನು 14 ದಿನ ಜೈಲಿನಲ್ಲಿದ್ದ ಅಪರಾಧವೇನು? ನೀವು ನನ್ನನ್ನು 14 ವರ್ಷಗಳ ಕಾಲ ಜೈಲಿನಲ್ಲಿ ಇಡಬಹುದು, ಆದರೆ ನಾನು ಭಗವಾನ್ ರಾಮ ಮತ್ತು ಹನುಮಂತನ ನಾಮಗಳನ್ನು ಜಪಿಸುವುದನ್ನು ನಿಲ್ಲಿಸುವುದಿಲ್ಲ” ಎಂದಿದ್ದಾರೆ ನವನೀತ್‌.

ಮುಂಬೈನಲ್ಲಿ ಪ್ರಚಾರ ಮಾಡುತ್ತೇನೆ. ಶಿವಸೇನೆಯ ಭ್ರಷ್ಟ ಆಡಳಿತವನ್ನು ಕೊನೆಗೊಳಿಸಲು ರಾಮಭಕ್ತರನ್ನು ಬೆಂಬಲಿಸುತ್ತೇನೆ ಎಂದು ನವನೀತ್‌ ಹೇಳಿದ್ದಾರೆ. ರಾಜ್ಯದಲ್ಲಿ ಶಿವಸೇನೆಯು ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಜೊತೆ ಅಧಿಕಾರವನ್ನು ಹಂಚಿಕೊಂಡಿದೆ. ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಕೂಡ ಶಿವಸೇನೆಯ ಹಿಡಿತದಲ್ಲಿದೆ.

ಸಿಎಂ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಚುನಾವಣಾ ಕಣಕ್ಕೆ ಇಳಿದ್ದರು. ಆ ಮೂಲಕ ಠಾಕ್ರೆ ಕುಟುಂಬದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ ಮೊದಲಿಗರೆಂದು ಗುರುತಿಸಿಕೊಂಡರು. ಆದಿತ್ಯ ಠಾಕ್ರೆ ಅವರು 2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ವರ್ಲಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.

ಇದನ್ನೂ ಓದಿರಿ: ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸ ‘ಮಾತೋಶ್ರೀ’ ಹೊರಗೆ ತಮ್ಮ ಬೆಂಬಲಿಗರೊಂದಿಗೆ ಹನುಮಾನ್ ಚಾಲೀಸಾ ಪಠಣ ಮಾಡಲು ಯತ್ನಿಸಿದ ನಂತರ ರಾಣಾ ದಂಪತಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

“ತಲಾ ರೂ 50,000 ಜಾಮೀನು ಬಾಂಡ್ ಅನ್ನು ಒದಗಿಸಿದ ನಂತರ ಜಾಮೀನು ನೀಡಲಾಯಿತು. ಈ ಅಪರಾಧವನ್ನು ಮತ್ತೆ ಮಾಡದಂತೆ ರಾಣಾ ದಂಪತಿಗೆ ಆದೇಶಿಸಲಾಗಿದೆ” ಎಂದು ಬಾರ್‌ ಅಂಡ್ ಬೆಂಚ್‌ ವರದಿ ಮಾಡಿದೆ.

ರಾಣಾರನ್ನು ಏಪ್ರಿಲ್ 23 ರಂದು ಬಂಧಿಸಲಾಯಿತು. ಹನುಮಾನ್ ಚಾಲೀಸಾ ಪಠಿಸುವ ಕಾರ್ಯಕ್ರಮ ಘೋಷಿಸಿದ ನಂತರ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಅಪರಾಧ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...