ಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ವೈಯಕ್ತಿಕ ದಾಳಿ ಮಾಡುತ್ತಿದ್ದಾರೆ: ಡಿಸಿ ರೋಹಿಣಿ ಸಿಂಧೂರಿ | Naanu Gauri

ಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದು, ನಾನು ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ಬಂದಾಗಿನಿಂದಲೂ ನನ್ನನ್ನು ಟಾರ್ಗೆಟ್‌ ಮಾಡಲಾಗುತ್ತಿದೆ. ನನ್ನ ಮೇಲೆ ಅನಗತ್ಯವಾಗಿ ವೈಯಕ್ತಿಕ ದಾಳಿ ಮಾಡಲಾಗುತ್ತಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಸೋಮವಾರ ಆರೋಪಿಸಿದ್ದಾರೆ.

ಪ್ರತಾಪ್‌ಸಿಂಹ ಅವರು ಜಿಲ್ಲಾಧಿಕಾರಿ ಸಿಂಧೂರಿ ಅವರು ಕರ್ತವ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ಲೆಕ್ಕಪತ್ರ, ಅಂಕಿಅಂಶಗಳನ್ನು ಬಿಡುಗಡೆ ಮಾಡಿರುವ ಅವರು, ರಾಜ್ಯ ಸರ್ಕಾರದಿಂದ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ಬಂದಿರುವ 41 ಕೋಟಿ ರೂ. ಅನುದಾನದಲ್ಲಿ ಯಾವುದಕ್ಕಾಗಿ ಎಷ್ಟೆಲ್ಲಾ ಖರ್ಚು ವೆಚ್ಚವಾಗಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಪ್ರತಾಪ್ ಸಿಂಹ ಒಬ್ಬ ಬ್ಲೂ ಫಿಲ್ಮ್ ಹೀರೋ: ಕೆಪಿಸಿಸಿ ವಕ್ತಾರ ಎಂ.ಲಕ್ಷಣ್

ರಾಜ್ಯದಲ್ಲಿಯೇ ಅತಿಹೆಚ್ಚು ಜನರಿಗೆ ಲಸಿಕೆ ಹಾಕಲಾಗಿರುವ ಜಿಲ್ಲೆ ಮೈಸೂರು. ಇತರ ಜಿಲ್ಲೆಗೆ ಹೋಲಿಸಿದರೆ ಮರಣ ಪ್ರಮಾಣ ಮೈಸೂರಿನಲ್ಲಿ ಕಡಿಮೆ ಇದೆ. ಟೆಸ್ಟಿಂಗ್‌ನಲ್ಲಿ ರಾಜ್ಯ ನೀಡಿದ ಗುರಿಯಲ್ಲಿ ಶೇ. 150ರ ಷ್ಟು ಪೂರೈಸಲಾಗಿದೆ. 2020 ರಲ್ಲೇ ಗಣಕೀಕೃತ ಬೆಡ್‌ ವ್ಯವಸ್ಥೆಯನ್ನು ಮೈಸೂರು ಜಿಲ್ಲೆ ಪ್ರಾರಂಭಿಸಿದ್ದರಿಂದ ಎರಡನೇ ಅಲೆ ಬಂದಾಗ ಸಾಕಷ್ಟು ನೆರವಾಯಿತು. ರಾಜ್ಯಕ್ಕೆ ಮಾದರಿಯಾಗುವಂತೆ ‘ಕೋವಿಡ್‌ ಮಿತ್ರ’ ತೆರೆಯಲಾಗಿದೆ. ಇದರಿಂದ 30 ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ವೈದ್ಯಕೀಯ ಸಲಹೆ ಸಹಕಾರ ದೊರೆತಿದೆ ಎಂದು ವಿವರಿಸಿದ್ದಾರೆ.

ವಿಪತ್ತು ಪರಿಹಾರ ನಿಧಿಯಡಿ ಮಾಡಲಾಗಿರುವ ಎಲ್ಲಾ ಖರ್ಚುಗಳನ್ನು ಸಿಎಜಿ ಸರಿಯಾದ ಸಮಯದಲ್ಲಿ ಲೆಕ್ಕ ಪರಿಶೋಧನೆಗೆ ಒಳಪಡಿಸುತ್ತದೆ. ಎಲ್ಲವೂ ಸರಕಾರದ ಮಾರ್ಗಸೂಚಿಯಂತೆ ನಡೆದಿದೆ. ಆದರೆ, ನನ್ನ ವಿರುದ್ದ ಪುರಾವೆಗಳಿಲ್ಲ ಆರೋಪಗಳನ್ನು ಮಾಡಲಾಗುತ್ತಿದೆ. ಇದಕೆಲ್ಲಾ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಕೊರೊನಾ ನಿಯಂತ್ರಣಕ್ಕಾಗಿ ನನ್ನ ಸಂಪೂರ್ಣ ಶಕ್ತಿಯನ್ನು ವ್ಯಯಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ: ಸುಮಲತಾ ಅಂಬರೀಶ್ ವಿರುದ್ಧ ಪ್ರತಾಪ್ ಸಿಂಹ ಹೇಳಿಕೆ ವೈರಲ್

ಕೊರೊನಾ ಸಾಂಕ್ರಮಿಕವನ್ನು ನಮ್ಮನ್ನು ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ ಅತಿ ಹೆಚ್ಚು ಶ್ರಮವಹಿಸಿ ಕೆಲಸ ಮಾಡಬೇಕು. ಆದರೆ, ಇಂತಹ ಸಂದರ್ಭದಲ್ಲಿಯೂ ನನ್ನ ಮೇಲೆ ಸುಳ್ಳುಗಳನ್ನು ಹೊರಿಸಲಾಗುತ್ತಿದೆ. ನನ್ನ ವಿರುದ್ದ ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇಂತಹ ಆರೋಪಗಳಿಂದಾಗಿ ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸಿ, ಆತ್ಮವಿಶ್ವಾಸ ಕುಂದುವಂತೆ ಮಾಡಬಹುದು. ಜನರಿಗೆ ಜಿಲ್ಲಾಡಳಿತ ಭರವಸೆ ನೀಡುವ ಕೆಲಸ ಮಾಡಲಿದೆ. ಕೊರೊನಾ ನಿಯಂತ್ರಿಸಲು ಜಿಲ್ಲಾಡಳಿತವು 24 ಗಂಟೆ ಅವಿರತ ಶ್ರಮ ವಹಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರತಾಪ್ ಸಿಂಹ ಪೇಟೆ ರೌಡಿ ತರ ಮಾತನಾಡುತ್ತಾರೆ; ಪ್ರತಿಕ್ರಿಯೆಗೆ ಅರ್ಹರಲ್ಲ: ಸಂಸದೆ ಸುಮಲತ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here