Homeಕರ್ನಾಟಕಮರಗಳ್ಳತನ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರನ ಬಂಧನ

ಮರಗಳ್ಳತನ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರನ ಬಂಧನ

- Advertisement -
- Advertisement -

ಮರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ಬಂಧಿಸಿದ್ದು, ನಂದಗೋಡನಹಳ್ಳಿಯಲ್ಲಿ ಮರ ಕಡಿದು ಸಾಗಿಸಿದ ಆರೋಪದಡಿ ವಿಕ್ರಮ್ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ ಸರ್ಕಾರಿ ಜಮೀನಿನಲ್ಲಿದ್ದ 126 ಮರಗಳನ್ನು ಅಕ್ರಮವಾಗಿ ಕಡಿದ ಆರೋಪ ವಿಕ್ರಂ ಮೇಲಿತ್ತು. ಬೇಲೂರು ತಹಶೀಲ್ದಾರ್ ಮಮತಾ ಅವರ ವರದಿ ಮೇರೆಗೆ ಡಿ.16ರಂದು ಅರಣ್ಯ ಇಲಾಖೆಗೆ ಮರಗಳ್ಳತನ ವಿಷಯ ತಿಳಿದಿದೆ. ಶುಂಠಿ ಕೃಷಿ ಮಾಡಲು ಮರಗಳನ್ನು ಕಡಿಯಲಾಗಿದೆ ಎಂದು ಹೇಳಲಾಗಿತ್ತು.

ದೂರು ದಾಖಲಾದ ನಂತರ ವಿಕ್ರಮ್ ಸಿಂಹ ಅವರು ಆರಂಭದಲ್ಲಿ ತನಿಖಾಧಿಕಾರಿಯ ಮುಂದೆ ಹಾಜರಾಗಿದ್ದರು ಎಂದು ಅರಣ್ಯ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ನಂತರ ಅವರು ಅಧಿಕಾರಿಗಳಿಂದ ತಪ್ಪಿಸಿಕೊಂಡಿದ್ದರು. ಅವರ ಕುರಿತ ಸಾಕ್ಷ್ಯ ಸಂಗ್ರಹದ ಬಳಿಕ ಅರಣ್ಯಾಧಿಕಾರಿಗಳು ಅವರ ಬಂಧನಕ್ಕೆ ಬಲೆ ಬೀಸಿದ್ದರು ಎನ್ನಲಾಗಿದೆ.

ಆರೋಪಿ ಹಾಸನದಿಂದ ಬೆಂಗಳೂರಿಗೆ ತೆರಳಿರುವುದನ್ನು ತಿಳಿದ ಅಧಿಕಾರಿಗಳ ತಂಡ ಆರೋಪಿಯ ಪತ್ತೆಗೆ ಸಹಕರಿಸಲು ನಗರ ಪೊಲೀಸ್ ಆಯುಕ್ತರಿಂದ ಸಹಯಾವನ್ನು ಕೋರಿದ್ದರು. ಹಾಸನದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಭುಗೌಡ ಬಿರಾದಾರ್ ಮತ್ತು ಬೆಂಗಳೂರಿನ ಅಪರಾಧ ವಿಭಾಗದ ಎಸಿಪಿ ನೇತೃತ್ವದ ಜಂಟಿ ತಂಡವು ವಿಕ್ರಮ್ ಸಿಂಹನನ್ನು ಬೆಂಗಳೂರಿನಲ್ಲಿ ಬಂಧಿಸಿದೆ. ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಆರೋಪದಡಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ ಮೋಹನ್ ಕುಮಾರ್ ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಬೇಲೂರು ತಾಲೂಕಿನ ನಂದಗೋಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿದ್ದು, ಈ ಸಂಬಂಧ ಬೇಲೂರು ಆರ್‌ಎಫ್‌ಒ, ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಕಡಿದಿರುವ ಮರಗಳನ್ನು ಅರಣ್ಯ ಇಲಾಖೆ ಡಿಪೊದಲ್ಲಿ ಸಂಗ್ರಹಿಸಲಾಗಿದೆ. ಪ್ರಕರಣ ಬಯಲಾಗುತ್ತಿದ್ದಂತೆ ಪ್ರತಾಪ್ ಸಿಂಹ ಹಾಗೂ ಸಹೋದರನ ವಿರುದ್ಧ ಅಣ್ಣ ಪ್ರತಾಪ್ ಸಿಂಹ ನಾಡಕಳ್ಳ, ತಮ್ಮ ವಿಕ್ರಂ ಸಿಂಹ ಕಾಡುಗಳ್ಳ ಎಂದು ಕಾಂಗ್ರೆಸ್ ಟೀಕಿಸಿತ್ತು.

ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ:

ಈ ಬಗ್ಗೆ ಮಾತನಾಡಿದ್ದ ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ.ಖಂಡ್ರೆ, ಬೇಲೂರು ತಾಲೂಕಿನ ನಂದಗೋಡನ ಹಳ್ಳಿಯಲ್ಲಿ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಇದರಲ್ಲಿ 60 ಬೃಹತ್‌ ಹಳೆಯ ಮರಗಳೂ ಸೇರಿವೆ. ಈ ರೀತಿ ಸ್ವಾರ್ಥಕ್ಕೆ ಯಾರೇ ಮರ ಕಡಿದರೆ ಅಪರಾಧ, ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ವಿಕ್ರಂ ಸಿಂಹ ಎಂಬವರನ್ನು ವಶಕ್ಕೆ ಪಡೆದು ಪ್ರಶ್ನಿಸುವುದು ಅಗತ್ಯವೆಂದು ಮನಗಂಡು ತನಿಖಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣವನ್ನು ತಹಶೀಲ್ದಾರ್ ಅವರು ಬೆಳಕಿಗೆ ತಂದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡು ಬಂದಿದೆ. ತಕ್ಷಣ ಕ್ರಮ ವಹಿಸದೆ ಲೋಪ ಎಸಗಿದ ಆರೋಪದಡಿ ಐವರು ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಉನ್ನಾವೊ ಎಸ್ಪಿ ಕಚೇರಿ ಹೊರಗೆ ಬೆಂಕಿ ಹಚ್ಚಿಕೊಂಡಿದ್ದ ದಲಿತ ಯುವಕ ಸಾವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...