Homeಮುಖಪುಟಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ

ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ

ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

- Advertisement -

ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ನೇಮಕಗೊಂಡಿದ್ದಾರೆ. ಇದರ ಜೊತೆಗೆ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಪಕ್ಷದ ಹೊಸ ಪದಾಧಿಕಾರಗಳ ನೇಮಕಾತಿ ಮಾಡಲಾಗಿದೆ. ಬಿಜೆಪಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್‌ರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಿದ್ದು. ಪಕ್ಷದ ಹಿರಿಯ ನಾಯಕ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಮ್ ಮಾಧವ್, ಪಿ ಮುರಳಿಧರ್ ರಾವ್, ಅನಿಲ್ ಜೈನ್, ಸರೋಜ್ ಪಾಂಡೆ ಜಾಗಕ್ಕೆ ಹೊಸಬರ ನೇಮಕವಾಗಿದೆ.

ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಪಕ್ಷದ ರಾಷ್ಟ್ರೀಯ ವಕ್ತಾರ ಹುದ್ದೆ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಅನಿಲ್ ಬಲೂಲಿ ಅವರನ್ನು ಮಾಧ್ಯಮ ಉಸ್ತುವಾರಿ ಸ್ಥಾನದಿಂದ ಮುಖ್ಯ ವಕ್ತಾರನ್ನಾಗಿ ನೇಮಿಸಲಾಗಿದೆ.

ಕರ್ನಾಟಕದ ನಾಯಕರು ಸೇರಿದಂತೆ ನೆರೆಯ ಮಹಾರಾಷ್ಟ್ರ ಪ್ರಮುಖ ನಾಯಕರಾದ ವಿನೋದ್ ತವಾಡೆ, ಪಂಕಜಾ ಮುಂಡೆ, ಉತ್ತರ ಪ್ರದೇಶದ ವಿನೋದ್ ಸೋಂಕರ್ ರಾಷ್ಟ್ರೀಯ ಕಾರ್ಯದರ್ಶಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕೇಂದ್ರದ ಮಾಜಿ ಸಚಿವ ಗೋಪಿನಾಥ್ ಮುಂಡೆ ಮಗಳು ಪಂಕಜಾ ಮುಂಡೆಯನ್ನು ರಾಷ್ಟ್ರೀಯ ಕಾರ್ಯದರ್ಶಿಯಾಗಿ, ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೆಯನ್ನು ಪಕ್ಷದ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಸೋಲಿಸಬೇಕಾಗಿರುವುದು ಮುಖವಾಡವನ್ನಷ್ಟೇ ಅಲ್ಲ, ಮುಖವನ್ನು ಕೂಡಾ

+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

Wordpress Social Share Plugin powered by Ultimatelysocial
Shares