Homeಕರ್ನಾಟಕಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ 'ಕಾಂಗ್ರೆಸ್‌' ಸರಕಾರದ 'ಗ್ಯಾರಂಟಿ ಯೋಜನೆ' ಬಗ್ಗೆ ತೇಜಸ್ವಿ ಸೂರ್ಯ...

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ ಸೂರ್ಯ ತುಚ್ಛ ಮಾತು!

- Advertisement -
- Advertisement -

ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರಂಟಿ ಯೋಜನೆಗಳನ್ನು ‘ಮತಿ ಹೀನ ಉಚಿತ ಕೊಡುಗೆ’ ಎಂದು ಹೇಳಿಕೊಂಡು ಜನಸಾಮಾನ್ಯರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಎಎನ್ಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ, ಕರ್ನಾಟಕ ಸರಕಾರ ಅಭಿವೃದ್ಧಿ ಹಾಗೂ ಮೂಲಭೂತ ಯೋಜನೆಗಳ ಹಣವನ್ನು ಮತಿ ಹೀನ ಉಚಿತ ಕೊಡುಗೆಗೆ ಬಳಸುತ್ತಿದೆ, ಗ್ಯಾರಂಟಿ ಯೋಜನೆಗಳಿಂದ ರಾಜ್ಯವು ದಿವಾಳಿಯಾಗುತ್ತಿದೆ ಎಂದು ಹೇಳಿದ್ದಾರೆ.

ಕಳೆದ ವಿಧಾನ ಸಭಾ ಚುನಾವಣೆಯ ಅವಧಿಯಲ್ಲಿ ನೀಡಿದ್ದ ಭರವಸೆಯಂತೆ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದಾಗ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ  ತರಲಾಗಿತ್ತು. ಇದರಂತೆ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ಮನೆಯೊಡತಿಗೆ ತಿಂಗಳಿಗೆ 2000ರೂ. ಮತ್ತು ಗೃಹಜ್ಯೋತಿ ಯೋಜನೆಯಡಿ 200 ಯುನಿಟ್‌ ಉಚಿತ ವಿದ್ಯುತ್‌, ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಪ್ರತಿ ತಿಂಗಳು 10ಕೆಜಿ ಅಕ್ಕಿ, ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಧನಸಹಾಯ ಮತ್ತು ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿತ್ತು. ಗ್ಯಾರಂಟಿ ಯೋಜನೆಗಳಿಗೆ ರಾಜ್ಯದಲ್ಲಿ ಉತ್ತಮವಾದ ಸ್ಪಂದನೆ ವ್ಯಕ್ತವಾಗಿತ್ತು. ಬಡ ಜನರಿಗೆ ಗೃಹಲಕ್ಷ್ಮಿ ಯೋಜನೆಯಿಂದ ಸಿಕ್ಕಿದ ಹಣದಿಂದ ಆಹಾರ ಸಾಮಾಗ್ರಿಗಳ ಖರೀದಿ, ಔಷಧಿಗಳಿಗೆ, ಮಕ್ಕಳ ವಿಧ್ಯಾಭ್ಯಾಸಕ್ಕೆ ಸಹಕಾರಿ ಯಾಗಿತ್ತು. ಎಲ್ಲೆಡೆ ಪ್ರಯಾಣಕ್ಕೆ ಪುರುಷರನ್ನೇ ಆಶ್ರಯಿಸಬೇಕಿದ್ದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆಯಿಂದ ಆಶಾಭಾವನೆ ಮೂಡಿತ್ತು. ಗೃಹಜ್ಯೋತಿ ಯೋಜನೆಯಿಂದ ಬಡ ಜನರಿಗೆ ವಿದ್ಯುತ್‌ ಬಿಲ್‌ ಕಟ್ಟುವುದರಿಂದ ವಿನಾಯಿತಿ ನೀಡಿತ್ತು, ಯುವನಿಧಿ ಯೋಜನೆಯು ನಿರುದ್ಯೋಗಿ ಯುವಕರಿಗೆ ಆಶ್ರಯವನ್ನು ನೀಡಿತ್ತು.

ಗ್ಯಾರಂಟಿ ಯೋಜನೆಗಳು ರಾಜ್ಯದ ಜನರಿಗೆ ಹೆಚ್ಚು ಫಲಪ್ರದವಾಗಿದೆ ಎಂಬುವುದು ಇತ್ತೀಚೆಗೆ ರಾಜ್ಯದಾದ್ಯಂತ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶಗಳು ಬಹಿರಂಗಪಡಿಸಿದ್ದವು, ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಸಮಾವೇಶಗಳಲ್ಲಿ ಭಾಗವಹಿಸಿದ್ದ ಮಹಿಳೆಯರು ತಮಗೆ ಗ್ಯಾರಂಟಿ ಯೋಜನೆ ಹೇಗೆ ಸಹಕಾರಿಯಾಯಿತು ಎಂಬುವುದನ್ನು ಬಿಚ್ಟಿಟ್ಟಿದ್ದರು.

ಫಾತಿಮಾ ರೋಡ್ರಿಗ್ರಸ್ ಎಂಬವರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುತ್ತಾ, ನಾನು ಗೃಹಲಕ್ಷ್ಮೀ ಯೋಜನೆಯಿಂದ ಲಾಭ ಪಡೆದಿದ್ದೇನೆ. ಸಿಂಗಲ್ ಪೇರೆಂಟ್ ಆಗಿದ್ದು, ನನಗೆ ಲಂಗ್ಸ್ ಪ್ರಾಬ್ಲಮ್ ಇರುವುದರಿಂದ ಸರಿಯಾಗಿ ಕೆಲಸ ಮಾಡಲು ಸಹ ಸಾಧ್ಯವಾಗುತ್ತಿರಲಿಲ್ಲ. ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಬಂದ ಮೇಲೆ ನನ್ನ ಮಗನ ಶಾಲಾ ಶುಲ್ಕ ಕಟ್ಟಿದ್ದೇನೆ, ನನ್ನ ಮೆಡಿಸನ್​ಗೆ ಅವಶ್ಯಕವಾದ ಹಣವನ್ನು ಪಡೆದಿದ್ದೇನೆ. ನನ್ನ ಕಷ್ಟವನ್ನು ನೋಡಿ ಅಂಗನವಾಡಿ ಕಾರ್ಯಕರ್ತರು ನನಗೆ ಗೃಹಲಕ್ಷ್ಮೀ ಹಣ ಸಿಗುವ ಹಾಗೆ ಮಾಡಿದ್ದಾರೆ. ಸರ್ಕಾರ ಮಾಡಿದ ಈ ಯೋಜನೆ ನನಗೆ ಸಾಕಷ್ಟು ಉಪಯೋಗ ಮಾಡಿಕೊಟ್ಟಿದೆ ಎಂದಿದ್ದಾರೆ.

ಭದ್ರಾವತಿ ಶಾಲಿನಿಯವರು ಮಾತನಾಡ್ತಾ , ನಾನು ಭದ್ರಾವತಿಗೆ ಶಿವಮೊಗ್ಗಕ್ಕೆ ಹೌಸ್ ಕೀಪಿಂಗ್ ಕೆಲಸಕ್ಕೆ ಬರುತ್ತಿದ್ದೆ. ಪ್ರತಿ ತಿಂಗಳು ಒಂದುವರೆ ಸಾವಿರ ಖರ್ಚಾಗುತ್ತಿತ್ತು. ಇದೀಗ ಶಕ್ತಿ ಯೋಜನೆ ಬಂದಿದ್ದರಿಂದ ನನಗೆ ಈ ಹಣವನ್ನು ಮನೆಯ ಖರ್ಚಿಗೆ ಉಪಯೋಗಿಸಲು ಸಾಧ್ಯವಾಗಿದೆ ಎಂದಿದ್ದಾರೆ.

ಗ್ಯಾರಂಟಿ ಯೋಜನೆಯ ಬಗ್ಗೆ ಮಾತನಾಡಿದ ಪುತ್ತೂರಿನ ಅಸ್ಮಾ, ನನ್ನ ಪತಿ ನನ್ನನ್ನು ಬಿಟ್ಟು ಮೂರು ವರ್ಷಗಳು ಕಳೆದಿದೆ, ನನಗೆ ಇಬ್ಬರು ಸಣ್ಣ ಮಕ್ಕಳಿದ್ದಾರೆ, ಅವರನ್ನು ಸಾಕುವುದು ನನಗೆ ದೊಡ್ಡ ಸವಾಲಾಗಿತ್ತು, ಇದೀಗ ಸಿದ್ದರಾಮಯ್ಯ ಅವರ ಗ್ಯಾರಂಟಿ ಯೋಜನೆ ಬಂದ ಬಳಿಕ ನನಗೆ ಮಕ್ಕಳಿಗೆ ಅನ್ನ ಹಾಕಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವೃದ್ಧೆಯ ಮಗ ಅನಾರೋಗ್ಯದಿಂದ ನಿಧನರಾಗಿದ್ದರು. ಮಗನ ಮೃತದೇಹದ ಮುಂದೆ ಕಣ್ಣೀರು ಹಾಕಿದ ವೃದ್ಧೆ, “ಯವ್ವಾ, ನೀ ಬದುಕಾಕ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಬರ್ತಾವ ಬಿಡು” ಎಂದು ಮಗ  ಸಾಯುವ ಮೊದಲು ಹೇಳಿದ್ದ ಎನ್ನುವ ವಿಚಾರವನ್ನು ಆ ತಾಯಿ ತನ್ನ ಪುತ್ರನ ಸಾವಿನ ನೋವಿನ ನಡುವೆ ನೆನಪು ಮಾಡಿಕೊಂಡು ಕಣ್ಣೀರು ಹಾಕುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಸರಕಾರದ ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ಕಣ್ಣುತೆರೆಯುವಂತೆ ಮಾಡಿತ್ತು.

ಗ್ಯಾರಂಟಿ ಯೋಜನೆಯಲ್ಲಿ ಘೋಷಿಸಿದ್ದಂತೆ ರಾಜ್ಯದ ಜನರಿಗೆ 10ಕೆಜಿ ಉಚಿತ ಅಕ್ಕಿ ನೀಡಲು, ರಾಜ್ಯದ  ಕಾಂಗ್ರೆಸ್‌ ಸರಕಾರ ಹೆಚ್ಚುವರಿ ಅಕ್ಕಿ ವಿತರಣೆ ಬಗ್ಗೆ ಎಫ್‌ಸಿಐ ಡೆಪ್ಯುಟಿ ಮ್ಯಾನೇಜರ್ ಜೊತೆ ಚರ್ಚೆ ಮಾಡಿದ್ದರು. ಅವರು ಹೆಚ್ಚುವರಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಆದರೆ ಕೇಂದ್ರದ ಬಿಜೆಪಿ ಸರಕಾರ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ರಾಜಕೀಯ ಮಾಡಿತ್ತು. ಇದರಿಂದ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ಕೊಡಲು ಸಮಸ್ಯೆಯಾಗಿತ್ತು. ಇದಕ್ಕೆ ರಾಜ್ಯ ಸರಕಾರ 5 ಕೆ.ಜಿ ಅಕ್ಕಿ ಜೊತೆಗೆ 5 ಕೆಜಿ ಅಕ್ಕಿಯ ಹಣ ಜನರ ಖಾತೆಗೆ ಜಮೆ ಮಾಡುವ ನಿರ್ಧಾರವನ್ನು ತೆಗೆದುಕೊಂಡಿತ್ತು.

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಬಿಜೆಪಿಯ ನಿದ್ದೆಗೆಡಿಸಿರುವ ಜೊತೆಗೆ ಬಿಜೆಪಿಗೆ ಭಾರೀ ಹೊಡೆತವನ್ನು ನೀಡುರುವುದು ನಿಜ. ಅದಕ್ಕಾಗಿಯೇ ‘ರಾಜ್ಯದ ಖಜಾನೆ ಖಾಲಿಯಾಗುತ್ತಿದೆ, ರಾಜ್ಯ ದಿವಾಳಿಯಾಗುತ್ತಿದೆ’ ಎಂದು ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಅಪಪ್ರಚಾರವನ್ನು ನಡೆಸಿಕೊಂಡು ಬಂದಿರುವುದನ್ನು ಗಮನಿಸಬಹುದಾಗಿದೆ. ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌ ಭಾರೀ ಪ್ರಮಾಣದ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ, ಬಿಜೆಪಿಯ ಸಿಎಎ, ಒಂದು ರಾಷ್ಟ್ರ, ಒಂದು ಚುನಾವಣೆಯಂತಹ ವಿಭಜನೀಯ ಕಾನೂನುಗಳು, ನೀತಿಗಳ ಭರವಸೆಗಳ ನಡುವೆ ಕಾಂಗ್ರೆಸ್‌ನ ಜನಸ್ನೇಹಿ ಯೋಜನೆಗಳು ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ತಲೆನೋವು ಸೃಷ್ಟಿಸಿದೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...