ಇಂದು ಸಂತ್ತಿನಲ್ಲಿ ಪ್ರಧಾನಿ ಮೋದಿಯವರನ್ನು ಸುತ್ತುವರೆದ ಆಪ್ ಸಂಸದರು ಕೇಂದ್ರದ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದರು. ಜೊತೆಗೆ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಸಂಸತ್ತಿನ ಕೇಂದ್ರೀಯ ಸಭಾಂಗಣದೊಳಗೆ ಪ್ರಧಾನಿ ಮೋದಿಯವರ ವಿರುದ್ಧ ಘೋಷಣೆಗಳನ್ನು ಕೂಗಿದ ಆಮ್ ಆದ್ಮಿ ಪಕ್ಷದ ಸಂಸದರು, ಇದರ ವೀಡಿಯೋವನ್ನು ಟ್ವೀಟ್ ಮಾಡಿದ್ದಾರೆ.
“ರೈತ ವಿರೋಧಿ ಕರಾಳ ಕಾನೂನನ್ನು ವಾಪಸ್ ಪಡೆಯಿರಿ, ಎಂಎಸ್‌ಪಿಯ ಭರವಸೆ ನೀಡಿ” ಎನ್ನುವ ಘೋಷಣೆಗಳನ್ನು ಕೂಗಿದರು.
ಇದನ್ನೂ ಓದಿ: ಜಗತ್ ಪ್ರಸಿದ್ಧ ಪ್ರತಿರೋಧದ ಹಾಡು! – ರೈತರ ಹೋರಾಟದಲ್ಲೂ ಪ್ರತಿಧ್ವನಿಸಿದ ‘ಬೆಲ್ಲಾ ಚಾವ್’
ये कैसा प्रधानसेवक? pic.twitter.com/ELbq1epUA4
— AAP (@AamAadmiParty) December 25, 2020
ಇದನ್ನೂ ಓದಿ: ಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್
ಇತ್ತೀಚೆಗೆ ದೆಹಲಿಯ ವಿಧಾನಸಭೆಯ ಅಧಿವೇಶನದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಕಾನೂನುಗಳ ಪ್ರತಿಗಳನ್ನು ಹರಿದು ವಿರೋಧ ವ್ಯಕ್ತಪಡಿಸಿದ್ದರು.
ಈ ಕಾನೂನುಗಳನ್ನು ಹಿಂಪಡೆಯುವಂತೆ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪಂಜಾಬ್, ಹರಿಯಾಣ ಮತ್ತು ಇತರೆ ಹಲವು ರಾಜ್ಯಗಳ ಸಾವಿರಾರು ರೈತರು ನವೆಂಬರ್ 26 ರಿಂದ ದೆಹಲಿಯ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಇಂದಿಗೆ 30ನೇ ದಿನಕ್ಕೆ ಕಾಲಿಟ್ಟಿದೆ.
ಇದನ್ನೂ ಓದಿ: ಪ್ರೇಮ ಪತ್ರ ಬರೆಯುವುದು ನಿಲ್ಲಿಸಿ: ಕೇಂದ್ರಕ್ಕೆ ಹೋರಾಟ ನಿರತ ರೈತರು
ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.
ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.
ಇದನ್ನೂ ಓದಿ: ಕೃಷಿ ಕಾನೂನಿನ ಪ್ರಚಾರಕ್ಕೆ ತನ್ನ ಫೋಟೋ ಬಳಸಿದ ಬಿಜೆಪಿಗೆ ಲೀಗಲ್ ನೋಟಿಸ್ ನೀಡಿದ ರೈತ!


