Homeಮುಖಪುಟಒಬಿಸಿ ಕೆನೆಪದರ ಸಮಸ್ಯೆಯಿಂದ ಯುಪಿಎಸ್‌ಸಿ ಅಭ್ಯರ್ಥಿಗಳಿಗೆ ಅನ್ಯಾಯ : ಸಂಸದ ಮಾಣಿಕ್ಕಂ ಟ್ಯಾಗೋರ್

ಒಬಿಸಿ ಕೆನೆಪದರ ಸಮಸ್ಯೆಯಿಂದ ಯುಪಿಎಸ್‌ಸಿ ಅಭ್ಯರ್ಥಿಗಳಿಗೆ ಅನ್ಯಾಯ : ಸಂಸದ ಮಾಣಿಕ್ಕಂ ಟ್ಯಾಗೋರ್

- Advertisement -
- Advertisement -

ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಸಮಿತಿಯ (ಒಬಿಸಿ) ಸಭೆಯಲ್ಲಿ ಕಾಂಗ್ರೆಸ್ ನಾಯಕ ಮಾಣಿಕ್ಕಂ ಟ್ಯಾಗೋರ್ ಸೇರಿದಂತೆ ಕೆಲವು ವಿರೋಧ ಪಕ್ಷದ ಸದಸ್ಯರು, ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದರೂ ನಾಗರಿಕ ಸೇವೆಗಳಿಗೆ ಸೇರುವಾಗ ಕೆನೆಪದರ ಮಿತಿ ಪರಿಶೀಲಿಸುವಲ್ಲಿ ಒಬಿಸಿ ಅಭ್ಯರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಧ್ವನಿ ಎತ್ತಿದ್ದಾರೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಧಿಕಾರಿಗಳು ‘ಒಬಿಸಿಗಳ ಕಲ್ಯಾಣಕ್ಕಾಗಿ ವಿವಿಧ ಕ್ರಮಗಳು ಮತ್ತು ಯೋಜನೆಗಳ ಅನುಷ್ಠಾನ’ ವಿಷಯದ ಕುರಿತು ವಿವರಿಸುತ್ತಿದ್ದಾಗ ಸಂಸದರು ಈ ಕುರಿತು ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ.

ಸಂಸದರಾದ ಮಾಣಿಕ್ಕಂ ಟ್ಯಾಗೋರ್, ಡಿಎಂಕೆಯ ಟಿಆರ್ ಬಾಲು ಮತ್ತು ಸಮಾಜವಾದಿ ಪಕ್ಷದ ರಾಮಶಂಕರ್ ರಾಜ್‌ಭರ್ ಅವರು, 2023 ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸೇವೆಗೆ ಸೇರುವಾಗ ಕೆನೆ ಪದರವನ್ನು ತಡೆಯಾಗಿ ಬಳಕೆಯಾಗುತ್ತಿರುವ ಬಗ್ಗೆ ಪ್ರಶ್ನಿಸಿದ್ದಾರೆ.

ಈ ವರ್ಷದ ಸೆಪ್ಟೆಂಬರ್‌ನಲ್ಲಿ, ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ಒಬಿಸಿ ವರ್ಗದ ಅನೇಕ ಅರ್ಹ ಅಭ್ಯರ್ಥಿಗಳ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಮಾಣಿಕ್ಕಂ ಟ್ಯಾಗೋರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು.

ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಒಬಿಸಿ ನಾನ್-ಕ್ರೀಮಿ ಲೇಯರ್ (ಎನ್‌ಸಿಎಲ್) ಸ್ಥಿತಿಯ ಪರಿಶೀಲನೆಗೆ ಸಂಬಂಧಿಸಿದ ಪ್ರಕ್ರಿಯೆಯಲ್ಲಿ ಗಮನಾರ್ಹ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ. ಇದು ಅವರ ಗೊತ್ತುಪಡಿಸಿದ ಸೇವೆಗಳಿಗೆ ಸೇರುವುದನ್ನು ತಡೆಯುತ್ತಿದೆ ಎಂದು ಟ್ಯಾಗೋರ್ ಪತ್ರದಲ್ಲಿ ತಿಳಿಸಿದ್ದರು.

ತಮ್ಮ ಪತ್ರದಲ್ಲಿ, ಅಭ್ಯರ್ಥಿಗಳ ಪೋಷಕರ ವರ್ಗ III/IV ಎಂಬುವುದನ್ನು ದೃಢೀಕರಿಸಲು ರಾಜ್ಯ ಸರ್ಕಾರಗಳು ನೀಡಿದ ಸಮಾನತೆಯ ಪ್ರಮಾಣಪತ್ರಗಳನ್ನು ತಿರಸ್ಕರಿಸುವುದರ ಸುತ್ತ ಉದ್ಬವಿಸಿರುವ ಒಟ್ಟು ಸಮಸ್ಯೆಯ ಕುರಿತು ಟ್ಯಾಗೋರ್ ಗಮನ ಸೆಳೆದಿದ್ದರು.

ಕಳೆದ ಕೆಲ ತಿಂಗಳ ಹಿಂದೆ 2022ರ ಬ್ಯಾಚ್‌ನ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ಒಬಿಸಿ ಎನ್‌ಸಿಎಲ್‌ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಒಬಿಸಿ ಕೋಟಾ ನಿಯಂತ್ರಣ ನಿಯಮದ ಸಮಸ್ಯೆ ಉಂಟಾಗಿತ್ತು.

“ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ 1993ರ ಕಚೇರಿ ಜ್ಞಾಪಕ ಪತ್ರವು ಒಬಿಸಿ-ಎನ್‌ಸಿಎಲ್ ವರ್ಗೀಕರಣಕ್ಕೆ ಮಾರ್ಗಸೂಚಿಗಳನ್ನು ನೀಡಿದೆ. ಅದರಲ್ಲಿ ರಾಜ್ಯ ನೀಡಿದ ಪ್ರಮಾಣಪತ್ರಗಳನ್ನು ತಿರಸ್ಕರಿಸುವುದನ್ನು ಕಡ್ಡಾಯಗೊಳಿಸುವ ಯಾವುದೇ ಸ್ಪಷ್ಟ ಷರತ್ತುಗಳು ಇಲ್ಲ. ಆದರೂ, ಪ್ರಾಯೋಗಿಕವಾಗಿ ಈ ಪ್ರಮಾಣಪತ್ರಗಳನ್ನು ಅಧಿಕಾರಿಗಳು ತಿರಸ್ಕರಿಸುತ್ತಿದ್ದಾರೆ. ಇದರಿಂದ ಅನೇಕ ಒಬಿಸಿ ಅಭ್ಯರ್ಥಿಗಳು ಅನ್ಯಾಯವಾಗಿ ಅನರ್ಹರಾಗುತ್ತಿದ್ದಾರೆ” ಎಂದು ಮಾಣಿಕ್ಕಂ ಟ್ಯಾಗೋರ್ ತನ್ನ ಪತ್ರದಲ್ಲಿ ವಿವರಿಸಿದ್ದಾರೆ.

ಸಂಬಳ ಮತ್ತು ಕೃಷಿ ಆದಾಯವನ್ನು ಕೆನೆಪದರ ಮಿತಿಗೆ ಪರಿಗಣಿಸಿರುವುದು ಅಸಮಂಜಸ. ಇದು ಸಾರ್ವಜನಿಕ ವಲಯದ ಉದ್ಯಮಗಳು, ಸಾರ್ವಜನಿಕ ವಲಯದ ಬ್ಯಾಂಕುಗಳು ಮತ್ತು ಇತರ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಪೋಷಕರು ಉದ್ಯೋಗದಲ್ಲಿರುವ ಅಭ್ಯರ್ಥಿಗಳ ಮೇಲೆ ಅಸಾಮಾನವಾಗಿ ಪರಿಣಾಮ ಬೀರುತ್ತಿದೆ ಎಂದು ಟ್ಯಾಗೋರ್ ಹೇಳಿದ್ದಾರೆ.

ಪೋಷಕರು ಸಾರ್ವಜನಿಕ ವಲಯದಲ್ಲಿ ಮಾಡುವ ಅಭ್ಯರ್ಥಿಗಳಿಗೆ ಒಬಿಸಿ-ಎನ್‌ಸಿಎಲ್ ಸ್ಥಾನಮಾನಕ್ಕೆ ಆದಾಯ ಮಾನದಂಡಗಳ ಏಕರೂಪದ ವ್ಯಾಖ್ಯಾನವನ್ನು ಜಾರಿಗೊಳಿಸಲು, ಪಾಲಕರು III/IV ವರ್ಗದವರು ಎಂದು ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ನೀಡುವ ಸಮಾನತೆಯ ಪ್ರಮಾಣಪತ್ರಗಳ ಸ್ವೀಕಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಅಂತರ್ಗತ ನೀತಿಯನ್ನು ರೂಪಿಸಬೇಕು. ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಸಮಾನವಾಗಿ ಪರಿಗಣಿಸಬೇಕು. ಸೇವಾ ಹಂಚಿಕೆ ಮತ್ತು ಒಬಿಸಿ ಪರಿಶೀಲನಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಸುಧಾರಿಸಬೇಕು ಎಂದು ಟ್ಯಾಗೋರ್ ಒತ್ತಾಯಿಸಿದ್ದಾರೆ.

ಬುಧವಾರದ ಈ ಕುರಿತು ಎಕ್ಸ್ ಪೋಸ್ಟ್‌ ಹಾಕಿದ್ದ ಟ್ಯೋಗೋರ್ “ಮೋದಿಯವರು 2017 ರಿಂದ ಒಬಿಸಿ ಕೆನೆಪದರ ಆದಾಯದ ಮಿತಿಯನ್ನು ಏಕೆ ಹೆಚ್ಚಿಸಿಲ್ಲ? ಹಣದುಬ್ಬರ ಮತ್ತು ಬದಲಾಗುತ್ತಿರುವ ಆರ್ಥಿಕ ವಾಸ್ತವಗಳನ್ನು ಸರಿದೂಗಿಸಿಕೊಳ್ಳಲು ಬದಲಾವಣೆಗಳನ್ನು ತರದೆ ಏಳು ವರ್ಷಗಳು ಕಳೆಯಿತು. ಒಬಿಸಿಗಳಿಗೆ ದ್ರೋಹ ಮಾಡುತ್ತಿರುವವರು ಯಾರು? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | ಪ್ರಯಾಗರಾಜ್‌: ಬ್ಯಾರಿಕೇಡ್‌ ಮುರಿದ ಪ್ರತಿಭಟನಾನಿರತ ಯುಪಿಪಿಎಸ್‌ಸಿ ಆಕಾಂಕ್ಷಿಗಳು; ‘ಅಪರಾಧಿಗಳು ನುಸುಳಿದ್ದಾರೆ’ ಎಂದು ಆರೋಪಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...