Homeಮುಖಪುಟಹಿಂದೂ-ಮುಸ್ಲಿಂ ಕ್ರಿಶ್ಚಿಯನ್ ಯಾರೇ ಆಗಿರಲಿ, ಯಾವ ತಂದೆ ತಾಯಿಗೂ ನಮಗೆ ಬಂದ ಕಷ್ಟ ಬಾರದಿರಲಿ -...

ಹಿಂದೂ-ಮುಸ್ಲಿಂ ಕ್ರಿಶ್ಚಿಯನ್ ಯಾರೇ ಆಗಿರಲಿ, ಯಾವ ತಂದೆ ತಾಯಿಗೂ ನಮಗೆ ಬಂದ ಕಷ್ಟ ಬಾರದಿರಲಿ – ಫಾಝಿಲ್ ತಂದೆಯ ಮಾತುಗಳು

- Advertisement -
- Advertisement -

ಅವನು ಡ್ರೈವರ್ ಅಲ್ಲ, ನಾನು ಮಾತ್ರ ಡ್ರೈವರ್. ಮತ್ತೆ ನಿನ್ನೆ ಅವರ ಹುಟ್ಟಿದ ಹಬ್ಬ ಇರಲಿಲ್ಲ. ಅವನ ಹುಟ್ಟಿದ್ದು ನವೆಂಬರ್ 03ರಂದು. ನೀವು ಚಾನೆಲ್‌ನವರು ನಿಮಗೆ ಬೇಕಾದ ಒಂದೊಂದೇ ನ್ಯೂಸ್ ತೆಗೆದುಕೊಳ್ಳುತ್ತೀರಿ. ನಿಮ್ಮ ತಪ್ಪು ನಿಮಗೆ ಗೊತ್ತಾಗುತ್ತಿಲ್ಲ. ನಿಮಗೆ ಟಿ.ಆರ್‌.ಪಿ ಅಷ್ಟೇ ಮುಖ್ಯ ಎಂದು ಸುರತ್ಕಲ್‌ನಲ್ಲಿ ಕೊಲೆಯಾದ ಫಾಝಿಲ್ ತಂದೆ ನೋವು ತೋಡಿಕೊಂಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ವಾಚ್ ತರಲು ಹೋದಾಗ, ಬಟ್ಟೆ ತರಲು ಹೋದಾಗ ಕೊಲೆಯಾಯಿತು ಅನ್ನುತ್ತೀರಿ. ಅದು ಸುಳ್ಳು. ಜೊತೆಗೆ ಅವನು ಯಾವ ಸಂಘ ಸಂಸ್ಥೆಗಳಿಗೂ ಸೇರಿರಲಿಲ್ಲ, ನಮಗೆ ಜಾತಿ ಬೇಧ ಇಲ್ಲ. ನಮಗೆ ಗಂಡು ಹೆಣ್ಣು ಎಂಬ ಎರಡೇ ಜಾತಿ ಇರುವುದು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಂಪಿ, ಎಂಎಲ್‌ಎ ಬಿಡಿ, ಇದುವರೆಗೂ ಜಿಲ್ಲಾಧಿಕಾರಿ ಸಹ ನಮ್ಮನ್ನು ಭೇಟಿಯಾಗಿಲ್ಲ. ಸಿಎಂ ಅಂತೂ ಕೇಳಲೇಬೇಡಿ, ಅವರು ಹಿಂದೂ ಮುಸ್ಲಿಂರನ್ನು ಬೇರೆ ಬೇರೆ ಮಾಡಿದ್ದಾರೆ. ನಮಗೆ ಪರಿಹಾರ ಬೇಡ, ನ್ಯಾಯ ಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಹೆಲ್ಮೆಟ್ ಹಾಕದಿದ್ದರೆ ಕೇಸ್ ಹಾಕುತ್ತೀರಿ, ಆದರೆ ಸುರತ್ಕಲ್ ಎಂಬ ದೊಡ್ಡ ಸಿಟಿಯಲ್ಲಿ ಸಿಸಿಟಿವಿ ಕ್ಯಾಮರಗಳನ್ನು ಪರಿಶೀಲಿಸಲು ಆಗುವುದಿಲ್ಲವೇ? ಹಿಂದೂಗಳ ಕೊಲೆಯಾದರೆ ಮಾತ್ರ ಅವುಗಳನ್ನು ಪರಿಶೀಲಿಸಲಾಗುತ್ತದೆ, ಆದರೆ ನಮಗೆ ಏಕಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಯುಪಿ ಮಾಡೆಲ್ ತರ್ತೀವಿ ಅನ್ನುವ ಬೊಮ್ಮಾಯಿಯವರೆ, ಯುಪಿ ಮಾಡೆಲ್ ಎಂದರೇನು ಗೊತ್ತೆ?

ಒಬ್ಬ ಎಂಎಲ್‌ಗೆ 5 ವರ್ಷ ಅಧಿಕಾರ. ಆದರೆ ನಾಲ್ಕು ವರ್ಷ ಏನೂ ಮಾಡುವುದಿಲ್ಲ, ಕೊನೆಗೆ ಪಾಪದವನನ್ನು ಸಾಯಿಸಿ ಅದರ ಮೇಲೆ ವೋಟ್ ಪಡೆದು ಗೆಲ್ಲುತ್ತಾರೆ. ಒಳ್ಳೆಯ ಕೆಲಸ ಮಾಡಿ ಗೆಲ್ಲುವುದು ಅವರಿಗೆ ಗೊತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಂಎಲ್‌ಎ, ಮಿನಿಷ್ಟರ್ ಮಕ್ಕಳು ಸಾಯುವುದಿಲ್ಲ, ಅಮಾಯಕರ ಮಕ್ಕಳು ಮಾತ್ರ ಸಾಯುತ್ತಾರೆ. ಯಾವ ತಂದೆ ತಾಯಿಗೂ, ಅವರು ಹಿಂದೂ-ಮುಸ್ಲಿಂ ಕ್ರಿಶ್ಚಿಯನ್ ಯಾರೇ ಆಗಲಿ ಈ ತರದ ಕಷ್ಟ ಬರಬಾರದು. ನಮಗೆ ನ್ಯಾಯ ಬೇಕು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮೊದಲ ಪ್ಯಾರಾದಲ್ಲಿ ‘ಕೊಲೆಯಾದ ಫಾಝಿಲ್ ನೋವು ತೋಡಿಕೊಂಡಿದ್ದಾರೆ’ ಎಂದಿದೆ! ಸರಿಪಡಿಸಿ.

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...