Homeಮುಖಪುಟಭಾರತದ ಹಸಿರು ಕ್ರಾಂತಿಯ ಪಿತಾಮಹ MS ಸ್ವಾಮಿನಾಥನ್ ಇನ್ನಿಲ್ಲ

ಭಾರತದ ಹಸಿರು ಕ್ರಾಂತಿಯ ಪಿತಾಮಹ MS ಸ್ವಾಮಿನಾಥನ್ ಇನ್ನಿಲ್ಲ

- Advertisement -
- Advertisement -

ಕೃಷಿ ವಿಜ್ಞಾನಿ ಮತ್ತು ಭಾರತದ ಹಸಿರು ಕ್ರಾಂತಿಯ ಪಿತಾಮಹ MS ಸ್ವಾಮಿನಾಥನ್ (98) ಅವರು ಇಂದು (ಗುರುವಾರ ) ಬೆಳಿಗ್ಗೆ ಚೆನ್ನೈನಲ್ಲಿ ನಿಧನರಾದರು. ಡಾ ಸ್ವಾಮಿನಾಥನ್ ಅವರು ಅಧಿಕ ಇಳುವರಿಯ ಭತ್ತದ ತಳಿ ಅಭಿವೃದ್ಧಿಯಿಂದ ದೇಶದ ಆಹಾರ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸಸಿದ್ದಾರೆ. ಅದು ಅವರಿಗೆ ಜಾಗತಿಕ ಮನ್ನಣೆಯನ್ನು ತಂದುಕೊಟ್ಟಿತು.

ಮೊಂಕೊಂಬು ಸಾಂಬಶಿವನ್ (ಎಂ.ಎಸ್) ಸ್ವಾಮಿನಾಥನ್‌ ಅವರು 1925ರ ಆ 7ರಂದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಜನಿಸಿದರು. ಹವಾಮಾನ ತಜ್ಞ ಕೃಷಿ ವಿಜ್ಞಾನಿ, ಸಸ್ಯ ತಳಿವಿಜ್ಞಾನಿಯೂ ಆಗಿದ್ದ ಅವರು ಭಾರತದ ಕೃಷಿ ಉತ್ಪನ್ನಗಳ ಅಭಿವೃದ್ಧಿ ಮೂಲಕ ದೇಶದ ಆರ್ಥಿಕತೆ ಉತ್ತಮಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸಸ್ಯ ತಳಿಶಾಸ್ತ್ರಜ್ಞರಾಗಿ ಡಾ ಸ್ವಾಮಿನಾಥನ್ ಅವರ ಪ್ರಯಾಣವು ಹಸಿರು ಕ್ರಾಂತಿಗೆ ದಾರಿ ಮಾಡಿಕೊಟ್ಟಿತು, ಇದು ಭಾರತೀಯ ಕೃಷಿಯಲ್ಲಿ ಪರಿವರ್ತನೆಯ ಯುಗವಾಗಿದೆ. ಸುಸ್ಥಿರ ಕೃಷಿ ಪದ್ಧತಿಗಾಗಿ ಅವರ ಸಮರ್ಥನೆಯು ಅವರನ್ನು ಸುಸ್ಥಿರ ಆಹಾರ ಭದ್ರತೆಯ ಕ್ಷೇತ್ರದಲ್ಲಿ ವಿಶ್ವ ನಾಯಕನನ್ನಾಗಿ ಮಾಡಿತು.

ವಿಶ್ವ ಸಂಸ್ಥೆಯ ಪರಿಸರ ಕಾರ್ಯಕ್ರಮವು ಸ್ವಾಮಿನಾಥನ್ ಅವರನ್ನು ‘ಆರ್ಥಿಕ ಪರಿಸರ ವಿಜ್ಞಾನದ ಪಿತಾಮಹ’ ಎಂದು ಬಣ್ಣಿಸಿದೆ. 1960 ಹಾಗೂ 70ರ ದಶಕದಲ್ಲಿ ರಾಸಾಯನಿಕ ಹಾಗೂ ಜೈವಿಕ ತಂತ್ರಜ್ಞಾನದ ಮೂಲಕ ಅಕ್ಕಿ ಮತ್ತು ಗೋದಿಯ ಉತ್ಪಾದನೆ ಹೆಚ್ಚಿಸಲು ರೂಪಿಸಲಾದ ಹಸಿರು ಕ್ರಾಂತಿ ಯೋಜನೆಯಲ್ಲಿ ಕೇಂದ್ರ ಕೃಷಿ ಸಚಿವರಾಗಿದ್ದ ಸಿ ಸುಬ್ರಮಣಿಯಂ, ಜಗಜೀವನ ರಾಮ್ ಅವರೊಂದಿಗೆ ಸ್ವಾಮಿನಾಥನ್ ಕೆಲಸ ಮಾಡಿದ್ದರು.

1972 ಮತ್ತು 1979ರ ನಡುವೆ, ಡಾ ಸ್ವಾಮಿನಾಥನ್ ಅವರು ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಮಹಾನಿರ್ದೇಶಕರಾಗಿ ಮತ್ತು ಭಾರತ ಸರ್ಕಾರದ ಕಾರ್ಯದರ್ಶಿಯಾಗಿ, ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆಗೆ ಸೇವೆ ಸಲ್ಲಿಸಿದರು.

ಅಧಿಕ ಇಳುವರಿಯ ಭತ್ತ ಹಾಗೂ ಗೋಧಿ ತಳಿಯ ಅಭಿವೃದ್ಧಿಗಾಗಿ 1987ರಲ್ಲಿ ಅವರಿಗೆ ಜಾಗತಿಕ ಆಹಾರ ಬಹುಮಾನ ಲಭಿಸಿತ್ತು. ಅದರಿಂದ ಬಂದ ಹಣದಲ್ಲಿ ಅವರು ಚೆನ್ನೈನಲ್ಲಿ ಎಂ.ಎಸ್‌.ಸ್ವಾಮಿನಾಥನ್‌ ಸಂಶೋಧನಾ  ಪ್ರತಿಷ್ಠಾನವನ್ನು ಆರಂಭಿಸಿದರು. 1971ರಲ್ಲಿ ರೇಮನ್ ಮ್ಯಾಗ್ಸೆಸೆ ಹಾಗೂ 1986ರಲ್ಲಿ ಆಲ್ಬರ್ಟ್ ಐನ್‌ಸ್ಟೀನ್ ವಿಶ್ವ ವಿಜ್ಞಾನ ಪ್ರಶಸ್ತಿಗಳೂ ಅವರಿಗೆ ಸಂದಿವೆ.

ಇವುಗಳೊಂದಿಗೆ ಪದ್ಮಶ್ರೀ, ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿಗಳು ಸ್ವಾಮಿನಾಥನ್ ಅವರಿಗೆ ಸಂದಿವೆ. ಎಚ್.ಕೆ ಫಿರೋದಿಯಾ ಪ್ರಶಸ್ತಿ, ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಪ್ರಶಸ್ತಿ ಹಾಗೂ ಇಂದಿರಾ ಗಾಂಧಿ ಪ್ರಶಸ್ತಿಗಳೂ ಸ್ವಾಮಿನಾಥನ್ ಅವರಿಗೆ ಲಭಿಸಿವೆ.

ದೇಶದ ಕೃಷಿ ಕ್ಷೇತ್ರದಲ್ಲಿ ಅಲ್ಲದೆ, ಜಾಗತಿಕ ಮಟ್ಟದಲ್ಲಿ ಸ್ವಾಮಿನಾಥನ್ ಅವರ ಕಾರ್ಯ ಹೆಚ್ಚು ಜನಪ್ರಿಯ. ಜಾಗತಿಕ ಮಟ್ಟದ ಹಲವು ಕೃಷಿ ಹಾಗೂ ಪರಿಸರ ಜಾಗೃತಿ ಕುರಿತ ಕಾರ್ಯ ಕ್ರಮಗಳಲ್ಲಿ ಅವರು ಸಕ್ರೀಯರಾಗಿದ್ದರು. ಟೈಮ್ ನಿಯತಕಾಲಿಕೆ ಪ್ರಕಟಿಸಿದ 20ನೇ ಶತಮಾನದ 20 ಅತ್ಯಂತ ಪ್ರಭಾವಿಗಳ ಪಟ್ಟಿಯಲ್ಲಿ ಸ್ವಾಮಿನಾಥನ್ ಅವರ ಹೆಸರು ಸೇರಿತ್ತು.

ಸ್ವಾಮಿನಾಥನ್ ಅವರು ಮೂವರು ಪುತ್ರಿಯರಾದ ಸೌಮ್ಯಾ ಸ್ವಾಮಿನಾಥನ್, ಮಧುರಾ ಸ್ವಾಮಿನಾಥನ್ ಮತ್ತು ನಿತ್ಯಾ ಸ್ವಾಮಿನಾಥನ್‌ ಅವರನ್ನು ಅಗಲಿದ್ದಾರೆ. ಸ್ವಾಮಿನಾಥನ್ ಅವರ ಪತ್ನಿ ಮೀನಾ 2022ರಲ್ಲಿ ನಿಧನರಾಗಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ಅಮಾನವೀಯ ಘಟನೆ: ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...