Homeಮುಖಪುಟಪಿಕ್ನಿಕ್ ಸ್ಪಾಟ್ ಆಗಿ ಬದಲಾದ ಅಟಲ್ ಸೇತು; ಮುಂಬೈ ಪೊಲೀಸರಿಂದ ವಾಹನ ಸವಾರರಿಗೆ ಎಚ್ಚರಿಕೆ

ಪಿಕ್ನಿಕ್ ಸ್ಪಾಟ್ ಆಗಿ ಬದಲಾದ ಅಟಲ್ ಸೇತು; ಮುಂಬೈ ಪೊಲೀಸರಿಂದ ವಾಹನ ಸವಾರರಿಗೆ ಎಚ್ಚರಿಕೆ

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಿದ ಅಟಲ್ ಸೇತುವೆಯನ್ನು (ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್) ವಾಹನ ಸವಾರರು ಪಿಕ್ನಿಕ್ ಸ್ಪಾಟ್ ಆಗಿ ಪರಿವರ್ತಿಸಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಿಮಿಸಿದೆ.

ಜನರು ಫೋಟೋ ತೆಗೆಸಿಕೊಳ್ಳುವುದಕ್ಕಾಗಿಯೇ ಸೇತುವೆಯ ಮೇಲೆ ತಮ್ಮ ವಾಹನಗಳನ್ನು ನಿಲ್ಲಿಸುತ್ತಿದ್ದು, ಕೆಲವರು ನಿಯಮಗಳನ್ನು ಉಲ್ಲಂಘಿಸಿ ಹಳಿಗಳನ್ನು ಹತ್ತುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಹಲವಾರು ಫೋಟೋಗಳು ಮತ್ತು ವೀಡಿಯೊಗಳಲ್ಲಿ ಜನರು ಎಲ್ಲೆಂದರಲ್ಲಿ ಕಸ ಹಾಕಿರುವುದು ಕಾಣಬಹುದಾಗಿದೆ. ಜೊತೆಗೆ, ಸೆಲ್ಫಿಗಾಗಿ ರೇಲಿಂಗ್ಸ್‌ಗಳನ್ನು ಹತ್ತುವುದು, ವೀಕ್ಷಣಾ ಗೋಪುರ ತಲುಪಲು ದಂಪತಿಗಳು ಸೇತುವೆಯ ಏಣಿಯನ್ನು ದಾಟುತ್ತಿರುವ ವಿಡಿಯೋಗಳು ವೈರಲ್ ಆಗಿದೆ.

ಈ ಬಗ್ಗೆ ಮುಂಬೈ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆ ನೀಡಿದ್ದಾರೆ. ಅಟಲ್ ಸೇತು ಮೇಲೆ ವಾಹನ ನಿಲ್ಲಿಸುವವರ ವಿರುದ್ಧ ಕಠಿಣ ಕ್ರಮದ ಸೂಚನೆ ನೀಡಿದ್ದಾರೆ. ಅಟಲ್ ಸೇತು ವೀಕ್ಷಿಸಲು ಯೋಗ್ಯವಾಗಿದ್ದರೂ, ಫೋಟೋಗಳಿಗಾಗಿ ವಾಹನ ನಿಲ್ಲಿಸುವುದು ಕಾನೂನುಬಾಹಿರವಾಗಿದೆ. ಹಾಗೆ ಮಾಡುವ ವ್ಯಕ್ತಿಗಳು ಎಫ್ಐಆರ್‌ಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯಲ್ಲಿ ತಿಳಿಸಲಾಗಿದೆ.

‘ಅಟಲ್ ಸೇತು ಖಂಡಿತವಾಗಿಯೂ ವೀಕ್ಷಣೆಗೆ ಯೋಗ್ಯವಾಗಿದೆ. ಆದರೆ, ಅದಕ್ಕಾಗಿ ವಾಹನ ನಿಲ್ಲಿಸುವುದು ಮತ್ತು ಫೋಟೋಗಳನ್ನು ಕ್ಲಿಕ್ ಮಾಡುವುದು ಕಾನೂನುಬಾಹಿರವಾಗಿದೆ. ನೀವು ಎಂಟಿಎಚ್ಎಲ್ ನಲ್ಲಿ ವಾಹನ ನಿಲ್ಲಿಸಿದರೆ ಎಫ್ಐಆರ್ ಅನ್ನು ಎದುರಿಸಬೇಕಾಗುತ್ತದೆ’ ಎಂದು ಮುಂಬೈ ಟ್ರಾಫಿಕ್ ಪೊಲೀಸರು ಎಕ್ಸ್ ನಲ್ಲಿ ಬರೆದಿದ್ದಾರೆ.

“ಅಟಲ್ ಸೇತು, 21.8 ಕಿಮೀ ಉದ್ದದ ಪಿಕ್ನಿಕ್ ಸ್ಪಾಟ್ ಅಲ್ಲ” ಎಂಬ ಶೀರ್ಷಿಕೆಯೊಂದಿಗೆ ಜನರು ನಿಯಮಗಳನ್ನು ಉಲ್ಲಂಘಿಸುವ ಚಿತ್ರಗಳನ್ನು ಸಹ ಪೊಲೀಸರು ಹಂಚಿಕೊಂಡಿದ್ದಾರೆ. ಮುಂಬೈ ಮತ್ತು ನವಿ ಮುಂಬೈ ನಡುವೆ ವೇಗವಾಗಿ ಪ್ರಯಾಣಿಸಲು ಅನುಕೂಲಕ್ಕಾಗಿ ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾದ ಎಂಟಿಎಚ್ಎಲ್ ಅನ್ನು ನಿರ್ಮಿಸಲಾಗಿದೆ ಎಂದು ಪೊಲೀಸರು ಪ್ರಯಾಣಿಕರಿಗೆ ನೆನಪಿಸಿದ್ದಾರೆ.

₹17,840 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಎಂಟಿಎಚ್ಎಲ್, ಸಮುದ್ರದ ಮೇಲೆ 16.5 ಕಿಮೀ ವ್ಯಾಪಿಸಿದೆ ಮತ್ತು ಎರಡು ದಡಗಳ ನಡುವಿನ ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ; ಮಥುರಾ: ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...