Homeಮುಖಪುಟಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

- Advertisement -
- Advertisement -

ಆಪಾದಿತ ಮುಡಾ ಹಗರಣ ಪ್ರಕರಣದಲ್ಲಿ ತನ್ನ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ.

ಇಂದು ಅರ್ಜಿ ವಿಚಾರಣೆ ನಡೆಯಿತು. ವಾದ ಮಂಡಿಸಿದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿಯವರು “ಲೋಕಾಯುಕ್ತರಿಗೆ ದೂರು ನೀಡಿದ ಬಳಿಕ ನಿರ್ದಿಷ್ಟ ಕಾಲದವರಗೆ ದೂರುದಾರರು ಕಾಯ್ದಿಲ್ಲ. ತಕ್ಷಣ ಅವರು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್‌ 17ಎ ಅಡಿ ರಾಜ್ಯಪಾಲರಿಂದ ಪೂರ್ವಾನುಮತಿ ಕೋರಿದ್ದಾರೆ” ಎಂದು ಹೇಳಿದರು.

ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ವಾದ ಮಂಡಿಸಿದ ವಕೀಲೆ ಲಕ್ಷ್ಮಿ ಐಯ್ಯಂಗಾರ್ ಅವರು,  ಅರ್ಜಿದಾರರ ಸೂಚನೆಯಂತೆ ಇಡೀ ಪ್ರಕ್ರಿಯೆ ನಡೆದಿದೆ ಎಂದು ಸಿಎಂ ಅಧಿಕಾರವಧಿಯ ಇಸವಿಗಳನ್ನು ಉಲ್ಲೇಖಿಸಿ ವಿವರಿಸಿದರು.

ಏನೇ ಇದ್ದರೂ ಸೆಪ್ಟೆಂಬರ್ 12ರಂದೇ ವಾದ ಮಂಡಿಸಿ ಕೊನೆಗೊಳಿಸಬೇಕು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ತಿಳಿಸಿದ್ದಾರೆ. ಅಂದೇ ನ್ಯಾಯಮೂರ್ತಿ ತೀರ್ಪು ನೀಡುವ ಸಾಧ್ಯತೆಯಿದೆ. ಸೆಪ್ಟೆಂಬರ್ 12ರಂದು ಮಧ್ಯಾಹ್ನ 12 ಗಂಟೆಗೆ ವಿಚಾರಣೆ ನಡೆಯಲಿದೆ.

ವರದಿಗಳ ಪ್ರಕಾರ, ಪ್ರತಿವಾದಿಗಳ ವಾದ ಪೂರ್ಣಗೊಂಡಿದ್ದು, ಅರ್ಜಿದಾರರ ಪರವಾಗಿ ಹಿರಿಯ ವಕೀಲ ಡಾ. ಅಭಿಷೇಕ್‌ ಮನು ಸಿಂಘ್ವಿ ಮತ್ತು ಪ್ರೊ. ರವಿವರ್ಮ ಕುಮಾರ್‌ ಅವರು ಸೆಪ್ಟೆಂಬರ್‌ 12ರಂದು ವಾದಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...