Homeಕರ್ನಾಟಕಮುಡಾ ಪ್ರಕರಣ | ಇಡಿಯಿಂದ ₹300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು

ಮುಡಾ ಪ್ರಕರಣ | ಇಡಿಯಿಂದ ₹300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು

- Advertisement -
- Advertisement -

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದ ಹಣ ಹಂಚಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಅಧಿಕಾರಿಗಳಿಗೆ ಸೇರಿದ 300 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂಬ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನಡೆಸುತ್ತಿದೆ. ಇದಕ್ಕೆ ಹೊಂದಿಕೊಂಡಿರುವ ಹಣ ಹಂಚಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ, 50:50 ಅನುಪಾತದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಅಧಿಕಾರಿಗಳಿಗೆ ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎನ್ನಲಾದ 142 ನಿವೇಶನಗಳನ್ನು ಮೊದಲ ಬಾರಿಗೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

“ಮುಡಾ ಸ್ವಾಧೀನಪಡಿಸಿಕೊಂಡಿದ್ದ ಜಮೀನುಗಳ ಮಾಲೀಕರು ಮತ್ತು ಸ್ವಾಧೀನಪಡಿಸಿಕೊಳ್ಳದೇ ಬಳಸಿಕೊಂಡ ಜಮೀನುಗಳ ಮಾಲೀಕರಿಗೆ ಪರಿಹಾರ ರೂಪದಲ್ಲಿ ಸಾವಿರಾರು ನಿವೇಶನಗಳನ್ನು ನೀಡಲಾಗಿದೆ. ಮೂಲ ಮಾಲೀಕರಿಂದ ಅಂತಹ ಜಮೀನುಗಳನ್ನು ರಿಯಲ್‌ ಎಸ್ಟೇಟ್‌ ಉದ್ಯಮಿಗಳು ತಮ್ಮ ಹೆಸರಿಗೆ ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಪರಿಹಾರ ರೂಪದ ನಿವೇಶನಗಳನ್ನು ರಿಯಲ್‌ ಎಸ್ಟೇಟ್‌ ಉದ್ಯಮಿಗಳು ಪಡೆದುಕೊಂಡಿದ್ದಾರೆ” ಎಂದು ಇಡಿ ಪ್ರಕಟಣೆ ತಿಳಿಸಿದೆ.

“ಪರಿಹಾರ ರೂಪದ ನಿವೇಶನಗಳನ್ನು ರಿಯಲ್ ಎಸ್ಟೇಟ್‌ ಉದ್ಯಮಿಗಳು ಹೆಚ್ಚಿನ ದರಕ್ಕೆ ಮಾರಾಟ ಮಾಡಿ ಲಾಭ ಮಾಡಿಕೊಂಡಿದ್ದಾರೆ. ಆ ಹಣವನ್ನು ಸಹಕಾರ ಸಂಘಗಳು, ಬಡಾವಣೆಗಳು ಮತ್ತು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಮುಡಾ ಆಯುಕ್ತರಾಗಿದ್ದ ಜಿ.ಟಿ.ದಿನೇಶ್‌ ಕುಮಾರ್ ಅವರೂ ಈ ರೀತಿ ಅಕ್ರಮ ಆಸ್ತಿ ಗಳಿಸಿರುವುದು ಪತ್ತೆಯಾಗಿದೆ” ಎಂದು ಇಡಿ ಪ್ರಕಟಣೆ ವಿವರಿಸಿದೆ.

ಮೈಸೂರಿನ ಇಬ್ಬರು, ಬೆಂಗಳೂರಿನ ಒಬ್ಬರು ರಿಯಲ್‌ ಎಸ್ಟೇಟ್‌ ಉದ್ಯಮಿಗಳು, ಮುಡಾ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಿರಾಸ್ತಿಗಳನ್ನೇ ಹೆಚ್ಚಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಕೆಲ ಖಾಸಗಿ ವ್ಯಕ್ತಿಗಳ ಆಸ್ತಿಗಳೂ ಇದರಲ್ಲಿವೆ. ಮುಡಾ ನೀಡಿದ್ದ ಪರಿಹಾರ ನಿವೇಶನಗಳು, ಅವುಗಳನ್ನು ಮಾರಾಟ ಮಾಡಿ ಬಂದ ಹಣದಿಂದ ಖರೀದಿಸಿದ ಜಮೀನು ಮತ್ತು ವಾಣಿಜ್ಯ ಕಟ್ಟಡಗಳು ಇದರಲ್ಲಿ ಸೇರಿವೆ ಎಂದು ಇಡಿ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

“ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಈಗಾಗಲೇ ಪತ್ತೆ ಮಾಡಿರುವ ಅಕ್ರಮ ಚರಾಸ್ತಿಗಳು ಮತ್ತು ಇನ್ನಷ್ಟು ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ” ಎಂದು ಇಡಿ ಮೂಲಗಳು ಹೇಳಿರುವುದಾಗಿ ವರದಿಗಳು ತಿಳಿಸಿವೆ.

ಪೋಕ್ಸೋ ಪ್ರಕರಣ ರದ್ದತಿಗೆ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...