Homeಕರ್ನಾಟಕಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ

- Advertisement -
- Advertisement -

ಆಪಾದಿತ ಮುಡಾ ಹಗರಣ ಪ್ರಕರಣದಲ್ಲಿ ತನ್ನ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ (ಸೆ.2) ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

ಆಗಸ್ಟ್ 29ರಂದು ಸಿದ್ದರಾಮಯ್ಯ ಅವರ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಇಂದಿಗೆ (ಆ.31) ವಿಚಾರಣೆ ಮುಂದೂಡಿತ್ತು. ಇಂದು ಮತ್ತೆ ಅರ್ಜಿ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಸುದೀರ್ಘ ಸಮಯ ವಾದ ಆಲಿಸಿತು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಮುಡಾ ಪ್ರಕರಣದಲ್ಲಿ 6ನೇ ಪ್ರತಿವಾದಿ ಪಿಎಸ್‌ ಪ್ರದೀಪ್‌ ಕುಮಾರ್‌ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಮೈಸೂರಿನ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಮಣೀಂದರ್‌ ಸಿಂಗ್‌ ವಾದ ಮಂಡಿಸಿದರು. ಟಿ ಜೆ ಅಬ್ರಾಹಂ ಪರವಾಗಿ ವಕೀಲ ರಂಗನಾಥ್ ರೆಡ್ಡಿ ವಾದಿಸಿದರು.

ಪ್ರದೀಪ್‌ ಕುಮಾರ್‌ ಪರವಾಗಿ ವಕೀಲ ಪ್ರಭುಲಿಂಗ ನಾವದಗಿ ವಾದ ಆರಂಭಿಸುತ್ತಿದ್ದಂತೆ “ಈ ಪ್ರಕರಣದಲ್ಲಿ ಯಾರೂ ಕೂಡಾ ಸಿದ್ದರಾಮಯ್ಯ ಅವರ ಪಾತ್ರವೇನೆಂದು ಹೇಳಿಲ್ಲ. ನೀವಾದರೂ ಈ ಬಗ್ಗೆ ಮಾತನಾಡುತ್ತೀರಾ?” ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಪ್ರಶ್ನಿಸಿದ್ದಾರೆ.

ಇನ್ನು ಈ ಪ್ರಕರಣವನ್ನು ಸ್ವತಂತ್ರ್ಯ ತನಿಖಾ ಸಂಸ್ಥೆಗಳ ಅಧಿಕಾರಿಗಳ ತಂಡವು ತನಿಖೆ ನಡೆಸಬೇಕು. ಅಕೌಂಟೆಂಟ್‌ಗಳು ಕೂಡಾ ಈ ತಂಡದಲ್ಲಿರಬೇಕು ಎಂದು ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಮಣೀಂದರ್ ಸಿಂಗ್ ಮನವಿ ಮಾಡಿದ್ದಾರೆ.

ಮೂರು ದೂರಿನಲ್ಲಿಯೂ ಒಂದೇ ಅಂಶಗಳಿದ್ದವು. ಆದ್ದರಿಂದ ಒಂದೇ ಶೋಕಾಸ್ ನೋಟಿಸ್ ನೀಡಲಾಗಿದೆ. ಎಲ್ಲಾ ದೂರುಗಳಿಗೂ ಶೋಕಾಸ್ ನೋಟಿಸ್ ನೀಡಬೇಕೇ ಬೇಡವೇ ಎಂಬುವುದು ರಾಜ್ಯಪಾಲರಿಗೆ ಬಿಟ್ಟ ವಿಚಾರ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸ್ಪಷ್ಟಪಡಿಸಿದ್ದಾರೆ.

“ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ಬಂದಾಗ ರಾಜ್ಯಪಾಲರು ಏಕಾಏಕಿ ನಿರ್ಧಾರ ಕೈಗೊಂಡಿಲ್ಲ. ಎಲ್ಲ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಹೆಚ್ಚುವರಿ ದಾಖಲೆ ತರಿಸಿಕೊಂಡು ಪರಿಶೀಲಿಸಿ ತನಿಖೆಗೆ ಅನುಮತಿ ನೀಡಿದ್ದಾರೆ” ಎಂದು ಮೆಹ್ತಾ ಹೇಳಿದರು.

“ಸಚಿವರುಗಳನ್ನು ಆಯ್ಕೆ ಮಾಡುವವರು ಸಿಎಂ ಆಗಿದ್ದಾರೆ. ಅವರ ಪರವಾಗಿಯೇ ಸಚಿವರುಗಳು ನಿರ್ಧಾರ ಕೈಗೊಳ್ಳುತ್ತಾರೆ. ಆದ್ದರಿಂದ ಕ್ಯಾಬಿನೆಟ್ ನಿರ್ಧಾರವನ್ನು ಪಾಲಿಸಿಲ್ಲ. ಸ್ವಂತ ವಿವೇಚನೆ ಬಳಸಿ ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ” ಎಂದು ತಿಳಿಸಿದರು.

ವಾದ ಆಲಿಸಿದ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಸೆ.2ಕ್ಕೆ ಮುಂದೂಡಿದೆ ಮತ್ತು ಮಧ್ಯಂತರ ಆದೇಶವನ್ನು ಮುಂದುವರೆಸಿ, ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್‌ಗೆ ಆದೇಶಿಸಿದೆ.

ಇದನ್ನೂ ಓದಿ : ಮುಡಾ ಪ್ರಕರಣ | ಕಾಂಗ್ರೆಸ್‌ ನಾಯಕರಿಂದ ‘ರಾಜಭವನ ಚಲೋ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...