Homeಕರ್ನಾಟಕಮುಡಾ ಪ್ರಕರಣ | ವಿಚಾರಣೆ ಮುಂದೂಡಿದ ಹೈಕೋರ್ಟ್ : ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್

ಮುಡಾ ಪ್ರಕರಣ | ವಿಚಾರಣೆ ಮುಂದೂಡಿದ ಹೈಕೋರ್ಟ್ : ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್

- Advertisement -
- Advertisement -

ಮುಡಾ ಪ್ರಕರಣದಲ್ಲಿ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರತ್ಯೇಕ ಪ್ರಕರಣಗಳಲ್ಲಿ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಇಂದು (ಡಿ.5) ಆದೇಶಿಸಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲರು ಅನುಮತಿಸಿರುವುದನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ, ಭೂ ಮಾಲೀಕ ಜೆ ದೇವರಾಜು ಸಲ್ಲಿಸಿರುವ ಮೇಲ್ಮನವಿ ಹಾಗೂ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌. ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ. ವಿ ಅರವಿಂದ್‌ ಅವರ ವಿಭಾಗೀಯ ಪೀಠ ಇಂದು ನಡೆಸಿದೆ. ರಾಜ್ಯಪಾಲರು ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ಈ ಪ್ರಕರಣಗಳಲ್ಲಿ ನೋಟಿಸ್‌ ಜಾರಿ ಮಾಡಿದೆ.

ಆಪಾದಿತ ಮುಡಾ ನಿವೇಶನ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿರುವುದನ್ನು ಹೈಕೋರ್ಟ್ ಏಕಸದಸ್ಯ ಪೀಠ ಎತ್ತಿ ಹಿಡಿದಿತ್ತು. ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸಿತು.

ಸಿಎಂ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಅಧಿಕಾರ ವ್ಯಾಪ್ತಿಯನ್ನು ರಾಜ್ಯ ಸರ್ಕಾರವು ತನ್ನ ಮೇಲ್ಮನವಿಯಲ್ಲಿ ಪ್ರಮುಖವಾಗಿ ಪ್ರಶ್ನಿಸಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕಪಿಲ್‌ ಸಿಬಲ್‌ “ಈ ಪ್ರಕರಣದಲ್ಲಿ ತನಿಖೆಗೆ ಅನುಮತಿಸುವ ಸಕ್ಷಮ ಪ್ರಾಧಿಕಾರದ ವಿಚಾರವು ಮಹತ್ವದ ಸಾಂವಿಧಾನಿಕ ವಿಚಾರವಾಗಿದೆ. ಇದು ಯಾವುದೇ ಪಕ್ಷದ ಮುಖ್ಯಮಂತ್ರಿ, ಮಂತ್ರಿಗೆ ಸಂಬಂಧಿಸಿದ್ದಲ್ಲ. ಈ ರೀತಿ ಮುಖ್ಯಮಂತ್ರಿ, ಸಚಿವರ ವಿರುದ್ಧ ತನಿಖೆಗೆ ಅನುಮತಿಸುತ್ತಾ ಹೋದರೆ ಅರಾಜಕತೆ ಸೃಷ್ಟಿಯಾಗಲಿದೆ. ಇದು ನಮ್ಮ ದೇಶದ ರಾಜ್ಯಾಡಳಿತಕ್ಕೆ ಸಂಬಂಧಿಸಿದ್ದಾಗಿದೆ. ಇಲ್ಲಿ ಬಹುಮುಖ್ಯವಾದ ಸಾಂವಿಧಾನಿಕ ವಿಚಾರಗಳು ಅಡಕವಾಗಿವೆ. ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಸೆಕ್ಷನ್‌ 17ಎ ಅಡಿ ಮುಖ್ಯಮಂತ್ರಿಯ ವಿರುದ್ಧ ತನಿಖೆಗೆ ಅನುಮತಿಸಲು ರಾಜ್ಯಪಾಲರಿಗೆ ವ್ಯಾಪ್ತಿಯೇ ಇಲ್ಲ” ಎಂದು ವಿವರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಡಾ. ಅಭಿಷೇಕ್‌ ಮನು ಸಿಂಘ್ವಿ ಅವರು “ರಾಜ್ಯಪಾಲರ ಅನುಮತಿಯನ್ನು ಎತ್ತಿ ಹಿಡಿಯುವ ಮೂಲಕ ಏಕಸದಸ್ಯ ಪೀಠ ಪ್ರಮಾದ ಎಸಗಿದೆ” ಎಂದು ವಿವರಿಸಲು ಮುಂದಾದರು. ಆದರೆ ಇದಕ್ಕೆ ಪೀಠವು ಅನುಮತಿಸಲಿಲ್ಲ ಎಂದು ತಿಳಿದು ಬಂದಿದೆ.

ನ್ಯಾಯಾಲಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರಾದ ಡಾ. ಅಭಿಷೇಕ ಮನುಸಿಂಘ್ವಿ ಮತ್ತು ಪ್ರೊ. ರವಿವರ್ಮ ಕುಮಾರ್‌, ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲ ಕಪಿಲ್‌ ಸಿಬಲ್‌ ಮತ್ತು ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ, ಜೆ ದೇವರಾಜು ಅವರನ್ನು ಪ್ರತಿನಿಧಿಸಿದ್ದ ದುಷ್ಯಂತ್‌ ದವೆ, ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಪ್ರತಿನಿಧಿಸಿದ್ದ ವಕೀಲರಾದ ಕೆ ಜಿ ರಾಘವನ್‌ ಮತ್ತು ಮಣೀಂದರ್‌ ಸಿಂಗ್‌ ಅವರ ವಾದ-ಪ್ರತಿವಾದಗಳನ್ನು ಆಲಿಸಿತು.

ಸಿಎಂ ಸಿದ್ದರಾಮಯ್ಯ ಮತ್ತು ಜೆ ದೇವರಾಜು ಅವರು ಸಲ್ಲಿಸಿರುವ ಪ್ರತ್ಯೇಕ ಮೇಲ್ಮನವಿಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲ (ರಾಜ್ಯಪಾಲರ ವಿಶೇಷ ಕಾರ್ಯದರ್ಶಿ), ದೂರುದಾರರಾದ ಟಿ ಜೆ ಅಬ್ರಹಾಂ, ಸ್ನೇಹಮಯಿ ಕೃಷ್ಣ ಮತ್ತು ಎಸ್‌.ಪಿ ಪ್ರದೀಪ್‌ ಕುಮಾರ್‌ ಅವರಿಗೆ ನೋಟಿಸ್‌ ಜಾರಿ ಮಾಡಿತು.

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯಲ್ಲಿ ನೋಟಿಸ್‌ ಆಗಿರುವುದನ್ನು ಪ್ರಶ್ನಿಸಿ ಜೆ ದೇವರಾಜು ಸಲ್ಲಿಸಿರುವ ಮತ್ತೊಂದು ಮೇಲ್ಮನವಿಯಲ್ಲಿ, ಸ್ನೇಹಮಯಿ ಕೃಷ್ಣ, ಕೇಂದ್ರ ಗೃಹ ಇಲಾಖೆ, ಸಿಬಿಐ, ಲೋಕಾಯುಕ್ತ, ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ ಪಾರ್ವತಿ, ಸಹೋದರ ಬಿ.ಎಂ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ನ್ಯಾಯಾಲಯ ನೋಟಿಸ್‌ ಜಾರಿ ಮಾಡಿದೆ. ವಿಚಾರಣೆಯನ್ನು 2025ರ ಜನವರಿ 25ಕ್ಕೆ ಮುಂದೂಡಿದೆ.

ಇದನ್ನೂ ಓದಿ : ಮುಡಾ ಪ್ರಕರಣ | ಕಿಡಿ ಹಚ್ಚಿಸಿದ ಇಡಿ ಪತ್ರ : ಮತ್ತೆ ಶುರುವಾದ ವಾಕ್ಸಮರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...