Homeಕರ್ನಾಟಕಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿರುವ ಮುಡಾ ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ‘ಬಿ ರಿಪೋರ್ಟ್’ / ಮುಕ್ತಾಯ ವರದಿಯನ್ನು ವಿಚಾರಣಾ ನ್ಯಾಯಾಲಯ ಸ್ವೀಕರಿಸುವುದನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಗುರುವಾರ (ಮಾರ್ಚ್ 26) ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರ ಏಕಸದಸ್ಯ ಪೀಠವು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ ಪಾರ್ವತಿ, ಅವರ ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ, ಭೂಮಾಲೀಕ ದೇವರಾಜು, ಇಡಿ ಮತ್ತು ಲೋಕಾಯುಕ್ತ ಪೊಲೀಸರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ ಎಂದು ಕಾನೂನು ಸುದ್ದಿ ಸಂಸ್ಥೆ livelaw.in ವರದಿ ಹೇಳಿದೆ.

ಜನವರಿ 28ರಂದು ವಿಚಾರಣಾ ನ್ಯಾಯಾಲಯ ಆಪಾದಿತ ಹಗರಣದಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ್ದ ಬಿ ರಿಪೋರ್ಟ್ ಸ್ವೀಕರಿಸಿತ್ತು. ಇದರ ವಿರುದ್ದ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯಲ್ಲಿ ಬಿ ರಿಪೋರ್ಟ್ ತಿರಸ್ಕರಿಸಬೇಕೆಂದು ಕೋರಿದ್ದಾರೆ. ಪ್ರಕರಣದ ತನಿಖೆಯನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವರ್ಗಾಯಿಸಬೇಕೆಂದು ಮನವಿ ಮಾಡಿದ್ದಾರೆ.

ಪ್ರಕರಣದ ಹೊಸ ತನಿಖೆಗೆ ನಿರ್ದೇಶನ ನೀಡಬೇಕು. ಸಿಆರ್‌ಪಿಸಿ ಸೆಕ್ಷನ್ 173 (ಈಗ ಬಿಎನ್‌ಎಸ್‌ಎಸ್‌ ಸೆಕ್ಷನ್ 193) ಅಡಿಯಲ್ಲಿ ಹೊಸ ವರದಿ ಸಲ್ಲಿಸಲು ಸದರಿ ತನಿಖಾ ಸಂಸ್ಥೆಗೆ ನಿರ್ದೇಶನ ನೀಡಬೇಕು. ತನಿಖೆಯನ್ನು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಮೇಲ್ವಿಚಾರಣೆ ಮಾಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಅಥವಾ ಪ್ರಾಸಿಕ್ಯೂಷನ್‌ಗೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 218ರ ಅಡಿಯಲ್ಲಿ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಎತ್ತಿಹಿಡಿದು, ‘ಸಿದ್ದರಾಮಯ್ಯ ಮತ್ತು ಕರ್ನಾಟಕ ರಾಜ್ಯ ಹಾಗೂ ಇತರರು’ ಪ್ರಕರಣದಲ್ಲಿ (ಡಬ್ಲ್ಯೂಪಿ ಸಂಖ್ಯೆ 22356/2024) ಸಮನ್ವಯ ಪೀಠವು ಸೆಪ್ಟೆಂಬರ್ 2024ರ ತನ್ನ ಆದೇಶದಲ್ಲಿ ನೀಡಿದ ಅವಲೋಕನಗಳ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ಈ ಪರಿಹಾರಗಳನ್ನು ಕೋರಿದ್ದಾರೆ ಎಂದು livelaw.in ವರದಿ ಹೇಳಿದೆ.

ಸ್ನೇಹಮಯಿ ಕೃಷ್ಣ ತನ್ನ ಅರ್ಜಿಯಲ್ಲಿ ದಿನಾಂಕ 30.11.2024ರ ಜಾರಿ ನಿರ್ದೇಶನಾಲಯದ (ಇಡಿ) ಪತ್ರ ವ್ಯವಹಾರ ಮತ್ತು ಜನವರಿ 2026ರ ಇಡಿ ಪತ್ರಿಕಾ ಪ್ರಕಟಣೆಯನ್ನು ಸಹ ಉಲ್ಲೇಖಿಸಿದ್ದಾರೆ.

ಪ್ರಕರಣ ಒಂದೇ ಆದರೂ, ಇತರ ಮುಡಾ ಅಧಿಕಾರಿಗಳ ವಿರುದ್ಧ ಹೆಚ್ಚಿನ ತನಿಖೆಗೆ ಆದೇಶ ನೀಡಿ, ಸಿಎಂ ಮತ್ತು ಅವರ ಕುಟುಂಬದ ಸದಸ್ಯರ ಪರ ‘ಬಿ’ ರಿಪೊರ್ಟ್ ಅನ್ನು ವಿಚಾರಣಾ ನ್ಯಾಯಾಲಯ ಅಂಗೀಕರಿಸಿದ್ದರ ಬಗ್ಗೆ ಸ್ನೇಹಮಯಿ ಕೃಷ್ಣ ಸಂಶಯ ವ್ಯಕ್ತಪಡಿಸಿದ್ದಾರೆ.

ಸಿಎಂ, ಅವರ ಕುಟುಂಬದ ಸದಸ್ಯರು ಮತ್ತು ಭ್ರಷ್ಟ ಅಧಿಕಾರಿಗಳು ಸೇರಿ ಈ ಮುಡಾ ಭೂ ಹಗರಣವನ್ನು ಒಂದು ‘ಏಕರೂಪದ, ಸಂಯೋಜಿತ ಸಂಚಿನ ಯೋಜನೆ’ಯಡಿ ನಡೆಸಿದ್ದಾರೆ ಎಂಬ ವಾಸ್ತವವನ್ನು ವಿಚಾರಣಾ ನ್ಯಾಯಾಲಯವು ಪರಿಗಣಿಸುವಲ್ಲಿ ವಿಫಲವಾಗಿದೆ ಎಂದು ಕೃಷ್ಣ ಆರೋಪಿಸಿದ್ದಾರೆ.

ಸಾರ್ವಜನಿಕ ಹುದ್ದೆಯಲ್ಲಿರುವ ಒಬ್ಬ ಹಾಲಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧದ ದುರುಪಯೋಗದ ಆರೋಪಗಳಿರುವ ಪ್ರಕರಣದಲ್ಲಿ ‘ಬಿ’ ರಿಪೋರ್ಟ್ ಅಂಗೀಕರಿಸುವುದು ತನಿಖಾ ಪ್ರಕ್ರಿಯೆಯ ನ್ಯಾಯಸಮ್ಮತತೆ ಮತ್ತು ನಿಷ್ಪಕ್ಷಪಾತದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಕುಗ್ಗಿಸುತ್ತದೆ ಎಂದು ಹೇಳಿದ್ದಾರೆ.

ಪ್ರಕರಣದಲ್ಲಿ ಇಡಿ ಸಲ್ಲಿಸಿದ ಪತ್ರ ವ್ಯವಹಾರ ಮತ್ತು ದಾಖಲೆಗಳನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿದೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದಾರೆ. ಅಲ್ಲದೆ, ಪ್ರಕರಣದ ಆರಂಭಿಕ ಹಂತದಲ್ಲಿಯೇ ‘ಸಂದೇಹಾತೀತ ಸಾಕ್ಷ್ಯಾಧಾರದ ಮಾನದಂಡ’ವನ್ನು (standard of proof beyond reasonable doubt) ಅಳವಡಿಸಿಕೊಂಡು ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಸ್ನೇಹಮಯಿ ಕೃಷ್ಣ ದೂರಿದ್ದಾರೆ.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...