Homeಕರ್ನಾಟಕಮುಡಾ ಪ್ರಕರಣ | ಸಿಎಂ ವಿರುದ್ಧದ ಖಾಸಗಿ ದೂರು : ವಿಚಾರಣೆ ಅಂಗೀಕಾರದ ಕುರಿತು ಆದೇಶ...

ಮುಡಾ ಪ್ರಕರಣ | ಸಿಎಂ ವಿರುದ್ಧದ ಖಾಸಗಿ ದೂರು : ವಿಚಾರಣೆ ಅಂಗೀಕಾರದ ಕುರಿತು ಆದೇಶ ಕಾಯ್ದಿರಿಸಿದ ಕೋರ್ಟ್

- Advertisement -
- Advertisement -

ಆಪಾದಿತ ಮುಡಾ ನಿವೇಶನ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಐವರ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸುವುದರ ಬಗೆಗಿನ ಆದೇಶವನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಯ್ದಿರಿಸಿದೆ.

ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರು ನಡೆಸಿದ್ದಾರೆ.

ಅರ್ಜಿದಾರ ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲೆ ಲಕ್ಷ್ಮಿ ಐಯ್ಯಂಗಾರ್‌ ಅವರು “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ 3.16 ಗುಂಟೆ ಜಮೀನು ಮಾರಾಟ ಮಾಡುವ ಅಧಿಕಾರವೇ ಜೆ ದೇವರಾಜುಗೆ ಇಲ್ಲ” ಎಂದಿದ್ದಾರೆ.

“ದೇವರಾಜುವಿನಿಂದ ಮಲ್ಲಿಕಾರ್ಜುನ ಸ್ವಾಮಿಗೆ 2004ರಲ್ಲಿ ಕ್ರಯಪತ್ರವಾಗಿಲ್ಲ. ಆದರೆ, ಮಲ್ಲಿಕಾರ್ಜುನ ಸ್ವಾಮಿ ಅವರು ಪಾರ್ವತಿ ಅವರಿಗೆ ದಾನ ಮಾಡುತ್ತಾರೆ. ಬಡಾವಣೆಗಾಗಿ ಮಾರ್ಪಾಡು ಮಾಡಿರುವ ಭೂಮಿಯು ಕೃಷಿ ಭೂಮಿ ಹೇಗೆ ಆಗುತ್ತದೆ? ಇದೆಲ್ಲಾ ಆದ ಬಳಿಕ ಸಿಎಂ ಪತ್ನಿ ಪಾರ್ವತಿ ಅವರು ಬದಲಿ ನಿವೇಶನಕ್ಕೆ ಮನವಿ ಸಲ್ಲಿಸಿದ್ದರು. ಇಲ್ಲಿ ದೇವರಾಜು, ಮಲ್ಲಿಕಾರ್ಜುನ ಸ್ವಾಮಿ, ಪಾವರ್ತಿ ಯಾರಿಗೂ ಹಕ್ಕು (ಟೈಟಲ್‌) ಇರುವುದಿಲ್ಲ. ಹಕ್ಕು ಇಲ್ಲದಿರುವ ಭೂಮಿಗೆ ಪರಿಹಾರ ಕೋರಿದ್ದಾರೆ. ಇಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಂಪೂರ್ಣವಾಗಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ನಿಯಮದಂತೆ 50:50 ಯೋಜನೆಯಡಿ ಬದಲಿ ನಿವೇಶನ ಮಂಜೂರು ಮಾಡಲು ಮುಡಾ ಅಯುಕ್ತರು ನಿರ್ಧಾರ ಮಾಡಿದ್ದರು. ಒಂದೊಮ್ಮೆ ಪಾರ್ವತಿ ಅವರಿಗೆ ಹಕ್ಕು ಇದ್ದರೂ, ಅವರು 4,800 ಚದರ ಅಡಿ ಮಾತ್ರ ಪಡೆಯಲು ಅವಕಾಶ ಇದೆ. ಅದು ಕೂಡ ಸ್ವಾಧೀನ ಆಗಿರುವ ಅದೇ ಲೇಔಟ್‌ನಲ್ಲಿ ಪಡೆಯಬಹುದು. ಇಲ್ಲಿ ಪಾವರ್ತಿ ಅವರಿಗೆ ಬದಲಿ ನಿವೇಶನ ಮಂಜೂರು ಮಾಡಲು 2005ರ 50:50 ನಿಯಮ ಬಳಕೆ ಮಾಡಲಾಗಿದೆ. ಅಲ್ಲದೇ, ವಿಶೇಷ ಬಡಾವಣೆಯಲ್ಲಿ ಬದಲಿ ನಿವೇಶನ ಮಂಜೂರು ನೀಡಲು ಆಯುಕ್ತರು ನಿರ್ಧಾರ ಮಾಡಿದ್ದಾರೆ. ಸಿಎಂ ಹೇಳಿರುವ ಪ್ರಕಾರ ಅದು ಕೃಷಿ ಭೂಮಿಯಾಗಿರುವುದರಿಂದ ಪಾರ್ವತಿ ಅವರು ಹಕ್ಕು ಹೊಂದಿದ್ದರೆ ಎರಡು ನಿವೇಶನ ಮಾತ್ರ ನೀಡಬಹುದಿತ್ತು. ಆದರೆ, 38 ಸಾವಿರ ಚದರ ಅಡಿ ಪಡೆಯಲು ಹೇಗೆ ಸಾಧ್ಯ? ಪಾರ್ವತಿ ಅವರಿಗೆ ಮಾಲೀಕತ್ವದ ಹಕ್ಕು ಇಲ್ಲದಿರುವುದರಿಂದ ಇದು ಶುದ್ಧ ಹಗರಣವಾಗಿದೆ. ದಾಖಲೆಗಳನ್ನು ಸೃಷ್ಟಿಸಿ ನಿವೇಶನ ಪಡೆಯಲಾಗಿದೆ” ಎಂದು ವಾದಿಸಿದ್ದಾರೆ.

ವಾದ ಆಲಿಸಿದ ನ್ಯಾಯಾಲಯವು, ಆದೇಶ ಕಾಯ್ದಿರಿಸಿ ವಿಚಾರಣೆಯನ್ನು ಆಗಸ್ಟ್‌ 13ಕ್ಕೆ ಮುಂದೂಡಿದೆ.

ಕೃಪೆ ; ಬಾರ್ & ಬೆಂಚ್

ಇದನ್ನೂ ಓದಿ : ಕೊಪ್ಪಳ | ಅಂಗನವಾಡಿ ಮಕ್ಕಳ ಮೊಟ್ಟೆ ಕಸಿದುಕೊಂಡ ವಿಡಿಯೋ ವೈರಲ್ : ಇಬ್ಬರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...