Homeಕರ್ನಾಟಕಮುಡಾ ಪ್ರಕರಣ | ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸಿಎಂಗೆ ಲೋಕಾಯುಕ್ತ ನೋಟಿಸ್

ಮುಡಾ ಪ್ರಕರಣ | ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸಿಎಂಗೆ ಲೋಕಾಯುಕ್ತ ನೋಟಿಸ್

- Advertisement -
- Advertisement -

ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನವೆಂಬರ್ 6 ರಂದು ವಿಚಾರಣೆಗೆ ಕರೆದಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ ಎಂದು TNIE ವರದಿ ಮಾಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ತಮ್ಮ ಪತ್ನಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವನ್ನು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಡಲಾಗಿದೆ. ಮುಡಾ ಪ್ರಕರಣ

ಲೋಕಾಯುಕ್ತ ಪೊಲೀಸರು ಅಕ್ಟೋಬರ್ 25 ರಂದು ಪ್ರಕರಣದ ಆರೋಪಿಯಾಗಿರುವ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಅವರನ್ನು ವಿಚಾರಣೆ ನಡೆಸಿದ್ದರು. ”ಬುಧವಾರ ಬೆಳಗ್ಗೆ ಹಾಜರಾಗುವಂತೆ ನಾವು ಹೇಳಿದ್ದೇವೆ” ಎಂದು ಲೋಕಾಯುಕ್ತದ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಲೋಕಾಯುಕ್ತ ಪೊಲೀಸರ ಸಮನ್ಸ್‌ಗೆ ಹಾವೇರಿ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾನು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.

ಮೈಸೂರಿನ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ, ಅವರ ಪತ್ನಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಕೂಡ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಿದ್ದರು.

ತಮಗೆ ಹಿನ್ನಡೆಯಾಗಿದ್ದ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅಕ್ಟೋಬರ್ 24ರಂದು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠವು ಸೆಪ್ಟೆಂಬರ್ 24 ರಂದು ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರ ಅನುಮೋದನೆಯನ್ನು ಒಪ್ಪಿಕೊಂಡಿತ್ತು ಮತ್ತು ಸಿಎಂ ಅವರ ಅರ್ಜಿಯನ್ನು ವಜಾ ಮಾಡಿತ್ತು.

ಹೈಕೋರ್ಟ್ ಆದೇಶದ ನಂತರ, ಮರುದಿನವೇ ಮೈಸೂ0ರಿನ ವಿಶೇಷ ನ್ಯಾಯಾಲಯವು ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ ತನಿಖೆಗೆ ಆದೇಶಿಸಿ, ಡಿಸೆಂಬರ್ 24 ರೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿತ್ತು. ಈ ನಡುವೆ ಪಾರ್ವತಿ ಅವರಿಗೆ ನೀಡಿದ್ದ 14 ನಿವೇಶನಗಳನ್ನು ರದ್ದು ಮಾಡುವಂತೆ ಮುಡಾಗೆ ಸಿಎಂ ಪತ್ರ ಬರೆದಿದ್ದು, ಅದನ್ನು ಮುಡಾ ಒಪ್ಪಿಕೊಂಡಿದೆ.

ಸೆಪ್ಟೆಂಬರ್ 30 ರಂದು, ಲೋಕಾಯುಕ್ತ ಎಫ್‌ಐಆರ್‌ನ ಆಧಾರದಲ್ಲಿ ಸಿಎಂ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ)ವು ಇಸಿಐಆರ್ ದಾಖಲಿಸಿದೆ. ಇದರ ನಂತರ ಮೂಡಾ ಕಚೇರಿಯ ಮೇಲೆ ಕೂಡಾ ಇಡಿ ದಾಳಿ ನಡೆಸಿತ್ತು. ಮುಡಾ ಪ್ರಕರಣ

ಇದನ್ನೂ ಓದಿ: ‘ಪೇಮೆಂಟ್ ಸೀಟ್ ಅಧ್ಯಕ್ಷ’ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

‘ಪೇಮೆಂಟ್ ಸೀಟ್ ಅಧ್ಯಕ್ಷ’ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...