HomeUncategorizedಮುಡಾ ಕಡತ ಸುಟ್ಟು ಭಸ್ಮ; ಸಚಿವ ಬೈರತಿ ಸುರೇಶ್ ಬಂಧಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಂಜೆ

ಮುಡಾ ಕಡತ ಸುಟ್ಟು ಭಸ್ಮ; ಸಚಿವ ಬೈರತಿ ಸುರೇಶ್ ಬಂಧಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಂಜೆ

- Advertisement -
- Advertisement -

ಪ್ರಕರಣದ ಸಾಕ್ಷ್ಯ ನಾಶಪಡಿಸಲು ಮುಡಾದಿಂದ ತೆಗೆದುಕೊಂಡು ದಾಖಲೆಗಳನ್ನು ಸುಟ್ಟು ಹಾಕಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಂಜೆ ಶನಿವಾರ ಆರೋಪಿಸಿದ್ದಾರೆ. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರನ್ನು ಕೂಡಲೇ ಬಂಧಿಸಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಮುಡಾ ಕಡತ 

1997ರ ನಂತರ ನಿವೇಶನ ಹಂಚಿಕೆಗೆ ಸಂಬಂಧಿಸಿದ ಕಡತಗಳನ್ನು ಮುಡಾ ಕಚೇರಿಯಿಂದ ಸುರೇಶ್ ತೆಗೆದುಕೊಂಡು ಹೋಗಿದ್ದಾರೆ ಎಂದು ಸಚಿವೆ ಶೋಭಾ ಕರಂದ್ಲಾಂಜೆ ಆರೋಪಿಸಿದ್ದಾರೆ. “ಸುರೇಶ್ ಮೈಸೂರಿಗೆ ಹೋಗಿ ಎಲ್ಲಾ ಫೈಲ್‌ಗಳನ್ನು ತಂದಿದ್ದರು. ಆ ಕಡತಗಳು ಎಲ್ಲಿವೆ? ಕಡತಗಳನ್ನು ಸುಟ್ಟು ಹಾಕಲಾಗಿದೆ,” ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಡಾ ಅಧ್ಯಕ್ಷ ಮರಿಗೌಡ ರಾಜೀನಾಮೆ ಅಂಗೀಕರಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ ಕರಂದ್ಲಾಜೆ, ಈಗ ಹಗರಣದ ಹೊಣೆ ಹೊರಲು ಅವರು ಹೊರಟಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ. ಮುಡಾ ಕಡತ 

ಮುಡಾ ಸಿದ್ದರಾಮಯ್ಯ ಅವರ ಪತ್ನಿಗೆ ನಿವೇಶನ ಹಂಚಿಕೆ ಮಾಡುವ ನಿರ್ಧಾರ ಕೈಗೊಂಡಾಗ ಅವರು ಸಾಂವಿಧಾನಿಕ ಹುದ್ದೆಯಲ್ಲಿದ್ದರು. ಹಾಗಾಗಿ ಸಿದ್ದರಾಮಯ್ಯ ಅವರ ರಾಜೀನಾಮೆ ನೀಡಬೇಕು ಎಂದು ಶೋಭಾ ಒತ್ತಾಯಿಸಿದದ್ದಾರೆ. ಆಗ ಶಾಸಕರಾಗಿದ್ದ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಭೆಯಲ್ಲಿ ಹಾಜರಿದ್ದರು ಎಂದು ಅವರು ಆರೋಪಿಸಿದ್ದಾರೆ.

ಸೈಟ್‌ಗಳನ್ನು ಹಿಂದಿರುಗಿಸುವುದು ಎಂದರೆ ಅಪರಾಧವನ್ನು ಒಪ್ಪಿಕೊಳ್ಳುವುದಾಗಿದೆ ಎಂದ ಅವರು, ”ಸಿದ್ದರಾಮಯ್ಯನವರು ಸಿಎಂ ಆದ ಮೊದಲ ಅವಧಿಯಲ್ಲಿ ಪ್ರಕರಣಗಳಿಂದ ರಕ್ಷಿಸಿಕೊಳ್ಳಲು ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಲು ಯತ್ನಿಸಿದ್ದರು” ಎಂದು ಆರೋಪಿಸಿದ್ದಾರೆ.

ಟರ್ಫ್ ಕ್ಲಬ್‌ನಲ್ಲಿ ಉಸ್ತುವಾರಿ ನೇಮಕಕ್ಕಾಗಿ 1.3 ಕೋಟಿ ರೂಪಾಯಿ ತೆಗೆದುಕೊಂಡ ಆರೋಪವನ್ನೂ ಅವರು ಎದುರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದು, ಎಸ್ಟಿ ನಿಗಮದ ಪ್ರಕರಣದಲ್ಲಿ, ಸರ್ಕಾರದ ಖಜಾನೆಯ ಹಣವನ್ನು ಚುನಾವಣೆಗಾಗಿ ಕಾಂಗ್ರೆಸ್‌ಗೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಆರೋಪಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆ

ಗೌರಿ ಲಂಕೇಶ್ ಹತ್ಯೆ ಆರೋಪಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...