Homeಕರ್ನಾಟಕಮುಡಾ ಕಚೇರಿ ಮೇಲೆ ಇಡಿ ದಾಳಿ | ಸಿಎಂ ಸಿದ್ದರಾಮಯ್ಯ ವಿರುದ್ಧ ಹಣ ಅಕ್ರಮ ವರ್ಗಾವಣೆ...

ಮುಡಾ ಕಚೇರಿ ಮೇಲೆ ಇಡಿ ದಾಳಿ | ಸಿಎಂ ಸಿದ್ದರಾಮಯ್ಯ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಶೋಧ ನಡೆಸಿದೆ ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಸದಸ್ಯರು ಮತ್ತು ಇತರ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.ಮುಡಾ ಕಚೇರಿ

20 ಕ್ಕೂ ಹೆಚ್ಚು ಇಡಿ ಅಧಿಕಾರಿಗಳ ತಂಡ, ಕೇಂದ್ರ ಅರೆಸೇನಾ ಪಡೆಗಳೊಂದಿಗೆ ಮೈಸೂರಿನ ಮುಡಾ ಕಚೇರಿ ಮತ್ತು ಇತರ ಸ್ಥಳಗಳಲ್ಲಿ ದಾಳಿ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಮುಡಾ ವ್ಯಾಪ್ತಿಯಲ್ಲಿ ನಡೆದ ₹5,000 ಕೋಟಿ ಅವ್ಯವಹಾರ ಸೇರಿದಂತೆ ದೊಡ್ಡ ಪ್ರಮಾಣದ ಅವ್ಯವಹಾರ ನಡೆದಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಖ್ಯಮಂತ್ರಿ ಸೇರಿದಂತೆ ಹಿರಿಯ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ ದೂರಿನಂತೆ ಇಡಿ ಈ ತನಿಖೆ ನಡೆಸುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ. ಮುಡಾ ಕಚೇರಿ

ಈ ದಾಳಿಯು ಸಿಎಂ ಸಿದ್ದರಾಮಯ್ಯ ಅಥವಾ ಅವರ ಕುಟುಂಬಕ್ಕೆ ಸೇರಿದ ಯಾವುದೇ ನಿವೇಶನಗಳನ್ನು ಒಳಗೊಂಡಿಲ್ಲವಾದರೂ, ಮುಖ್ಯಮಂತ್ರಿ ಮತ್ತು ಇತರರನ್ನು ಈ ಹಿಂದೆ ಇಡಿ ಸಲ್ಲಿಸಿದ ಎಫ್‌ಐಆರ್‌ಗೆ ಸಮಾನವಾದ ಜಾರಿ ಪ್ರಕರಣ ಮಾಹಿತಿ ವರದಿಯಲ್ಲಿ (ಇಸಿಐಆರ್) ಹೆಸರಿಸಲಾಗಿತ್ತು. ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಇತ್ತೀಚೆಗೆ ಲೋಕಾಯುಕ್ತ ಎಫ್‌ಐಆರ್‌ ದಾಖಲಿಸಿದ ನಂತರ ಇಡಿ ಇಸಿಐಆರ್‌ ದಾಖಲಿಸಿತ್ತು.

ಸೆಪ್ಟೆಂಬರ್ 27ರಂದು ದಾಖಲಾಗಿರುವ ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಅವರಿಗೆ ನೀಡಿದ್ದ 14 ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ ಅವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರನ್ನೂ ಹೆಸರಿಸಲಾಗಿದೆ. ಮಲ್ಲಿಕಾರ್ಜುನ ಸ್ವಾಮಿ ಅವರು ಭೂಮಿ ಖರೀದಿಸಿ ನಂತರ ಅದನ್ನು ಪಾರ್ವತಿ ಅವರಿಗೆ ಉಡುಗೊರೆಯಾಗಿ ನೀಡಿದ್ದರು.

ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ತಾನು ಯಾವುದೇ ತಪ್ಪೆಸಗಿಲ್ಲ ಎಂದು ಪ್ರತಿಪಾದಿಸಿದ್ದು, ಪ್ರತಿಪಕ್ಷಗಳು ನನ್ನನ್ನು ಕಂಡು ಹೆದರಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ನನ್ನ ವಿರುದ್ಧ ಇದೇ ಮೊದಲ ರಾಜಕೀಯ ಪ್ರಕರಣವಾಗಿದೆ ಎಂದು ಅವರು ಹೇಳಿದ್ದಾರೆ. ಇಡಿ ತನ್ನ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಯ ನಿಬಂಧನೆಗಳನ್ನು ಸಹ ಸೇರಿಸಿದ್ದು, ಲೋಕಾಯುಕ್ತದಿಂದ ಸಮಾನಾಂತರ ತನಿಖೆಯೊಂದಿಗೆ ತನಿಖೆಗಳು ಮುಂದುವರಿಯುತ್ತವೆ.

ಇದನ್ನೂ ಓದಿ: ಹಣ ಅಕ್ರಮ ವರ್ಗಾವಣೆ ಪ್ರಕರಣ | 2 ವರ್ಷಗಳ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು

ಹಣ ಅಕ್ರಮ ವರ್ಗಾವಣೆ ಪ್ರಕರಣ | 2 ವರ್ಷಗಳ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...