ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಗೂಂಡಾ ಕಾಯ್ದೆಯನ್ನು ಹಾಕುವಂತೆ ಮತ್ತು ಗಡಿಪಾರು ಮಾಡುವಂತೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ. ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಸ್ನೇಹಮಯಿ ಕೃಷ್ಣ ರೌಡಿ ಶೀಟರ್ ಆಗಿದ್ದು, ಆತನ ವಿರುದ್ಧ 10 ವರ್ಷಗಳಿಂದ 17 ಕ್ರಿಮಿನಲ್ ಪ್ರಕರಣಗಳಿವೆ ಎಂದು ಆರೋಪಿಸಿದ್ದಾರೆ. ಮುಡಾ ಹಗರಣದ
ಸ್ನೇಹಮಯಿ ಕೃಷ್ಣ ಅವರು ಪ್ರಮುಖ ವ್ಯಕ್ತಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ. ಕೃಷ್ಣ ಅವರ ಬೆದರಿಕೆಯಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಅಪರಿಚಿತರು ಈತನ ಜತೆ ಒಡನಾಟ ಹೊಂದಿರುವುದಾಗಿ ಹೇಳಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಮೊತ್ತದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಕಾಂಗ್ರೆಸ್ ನಾಯಕ ಲಕ್ಷ್ಮಣ ಅವರು ಈ ಹಿಂದೆ ಸ್ನೇಹಮಯಿ ಕೃಷ್ಣ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾನಹಾನಿ ಮಾಡಿದ ಆರೋಪದ ಮೇಲೆ ದೂರು ದಾಖಲಿಸಿದ್ದು, ಪೊಲೀಸರು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಏತನ್ಮಧ್ಯೆ, ಸ್ನೇಹಮಯಿ ಕೃಷ್ಣ ಅವರು ನವೆಂಬರ್ 16ರ ಶನಿವಾರದಂದು ಮೈಸೂರು ಪೊಲೀಸ್ ಆಯುಕ್ತರಿಗೆ ಪ್ರತಿದೂರು ಸಲ್ಲಿಸಿದ್ದು, ಸುಳ್ಳು ಆರೋಪಗಳನ್ನು ಮತ್ತು ಸುಳ್ಳು ದೂರುಗಳನ್ನು ದಾಖಲಿಸಿರುವ ಕಾಂಗ್ರೆಸ್ ಮುಖಂಡ ಲಕ್ಷ್ಮಣ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ತಾನು ನೀಡಿದ ದೂರಿನ ಮೇರೆಗೆ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಪರಾಧವನ್ನು ಒಪ್ಪಿಕೊಂಡು 60 ಕೋಟಿ ರೂ.ಗೂ ಹೆಚ್ಚು ಮೌಲ್ಯದ 14 ನಿವೇಶನಗಳನ್ನು ವಾಪಸ್ ನೀಡಿದ್ದಾರೆ ಎಂದು ಅವರು ಪ್ರತಿಪಾದಿಸಿದ್ದಾರೆ. ಮುಡಾ ಹಗರಣದ
”ಸಿದ್ದರಾಮಯ್ಯ ಅವರು ನಿವೇಶನಗಳನ್ನು ಹಿಂದಿರುಗಿಸಿರುವುದು ನಾನು ರೌಡಿ ಶೀಟರ್ ಎಂಬ ಕಾರಣಕ್ಕೆ ಅಲ್ಲ. ನನ್ನ ಕಾನೂನು ಹೋರಾಟದ ಕಾರಣದಿಂದ. ನಾನು ಸಾಮಾಜಿಕ ಕಾರ್ಯಕರ್ತ ಎಂದು ನ್ಯಾಯಾಲಯ ಗಮನಿಸಿದೆ ಮತ್ತು ದ್ವೇಷದಿಂದ ಪೊಲೀಸ್ ಅಧಿಕಾರಿಗಳು ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.
ಘಟನೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ”ಸಿದ್ದರಾಮಯ್ಯ ಅವರು ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಬೆದರಿಕೆಯ ತಂತ್ರಗಳನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಸುಳ್ಳು ದೂರು ದಾಖಲಿಸಲು ತನ್ನ ಹಿಂಬಾಲಕರನ್ನು ನಿಯೋಜಿಸುವ ಮೂಲಕ ಹೋರಾಟಗಾರರ ಬಾಯಿ ಮುಚ್ಚಿಸಲು ಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿ ಉದ್ದೇಶಪೂರ್ವಕವಾಗಿ ಮಣಿಪುರವನ್ನು ಸುಡಲು ಬಯಸುತ್ತಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಬಿಜೆಪಿ ಉದ್ದೇಶಪೂರ್ವಕವಾಗಿ ಮಣಿಪುರವನ್ನು ಸುಡಲು ಬಯಸುತ್ತಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ


