Homeಕರ್ನಾಟಕಮೂಡಿಗೆರೆ: ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್‌ಐ ಅರ್ಜುನ್ ಬಂಧನ

ಮೂಡಿಗೆರೆ: ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್‌ಐ ಅರ್ಜುನ್ ಬಂಧನ

- Advertisement -
- Advertisement -

ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನಿಗೆ ಮೂತ್ರ ಕುಡಿಸಿ ಅಮಾನವೀಯವಾಗಿ ನಡೆಸಿಕೊಂಡಿದ್ದ ಪ್ರಕರಣದಲ್ಲಿ ಗೋಣಿಬೀಡು PSI ಅರ್ಜುನ್ ಅವರನ್ನು ಬುಧವಾರ ರಾತ್ರಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ತನ್ನ ಗ್ರಾಮದ ಮಹಿಳೆ ಕಾಣೆಯಾಗಿದ್ದ ಪ್ರಕರಣದಲ್ಲಿ ನನ್ನನ್ನು ವಿನಾಕಾರಣ ಠಾಣೆಗೆ ಕರೆದೊಯ್ದು ಬೆಳಗ್ಗಿನಿಂದ ರಾತ್ರಿವರೆಗೂ ಕ್ರೂರವಾಗಿ ದೌರ್ಜನ್ಯ ನಡೆಸಿ, ಮೂತ್ರ ಕುಡಿಸಿ, ಜಾತಿ ನಿಂದನೆ ಮಾಡಲಾಗಿದೆ. ಅಮಾನವೀಯವಾಗಿ ನಡೆದುಕೊಂಡ ಪಿಎಸ್‌ಐ ಅರ್ಜುನ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪೋಲೀಸ್ ಮಹಾ ನಿರ್ದೇಶಕರು, ಪಶ್ಚಿಮ ವಲಯ ಐಜಿಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಸಂತ್ರಸ್ತ ಯುವಕ ಪುನೀತ್ ಮೇ 10 ರಂದೇ ದೂರು ನೀಡಿದ್ದರು.

ಮೇ 22 ರಂದು ಹಲವು ಪತ್ರಿಕೆಗಳಲ್ಲಿ ಮತ್ತು ಇಂಗ್ಲಿಷ್‌ ಮಾಧ್ಯಮಗಳಲ್ಲಿ ಈ ಘಟನೆ ವರದಿಯಾಗಿತ್ತು. ನಂತರ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿ ತೀವ್ರ ಖಂಡನೆ, ಆಕ್ರೋಶ ವ್ಯಕ್ತವಾಗಿತ್ತು. ಈ ಎಲ್ಲಾ ಒತ್ತಡಗಳಿಂದ ಕೊನೆಗೂ ಗೋಣಿಬೀಡು PSI ಅರ್ಜುನ್ ವಿರುದ್ಧ ಐಪಿಸಿ ಸೆಕ್ಷನ್ 342/323/504/506/330/348 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಕೇಸು ದಾಖಲಾಗಿತ್ತು.

ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ: ಹೇಯ ಕೃತ್ಯ ಎಸಗಿದ ಪಿಎಸ್‌ಐ ಅಮಾನತ್ತಿಗೆ ಆಗ್ರಹ

ಬಳಿಕ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿತ್ತು. ವಿವಿಧ ಪ್ರಕರಣಗಳಲ್ಲಿ ಶಂಕಿತರನ್ನು ವಿಚಾರಣೆ ನೆಪದಲ್ಲಿ ಕರೆಸಿ ವಿಕೃತವಾಗಿ ನಡೆದುಕೊಂಡಿರುವ ಅರ್ಜುನ್ ವಿಕೃತ ಘಟನೆಗಳ ವಿವರ ಪ್ರಾಥಮಿಕ ವಿಚಾರಣೆ ವೇಳೆ ಬೆಳಕಿಗೆ ಬಂದಿತ್ತು. ಅರ್ಜುನ್ ನನ್ನು ಸೇವೆಯಿಂದ ಅಮಾನತು ಮಾಡಿ ಸರ್ಕಾರ ಆದೇಶಿಸಿತ್ತು.

ಬಂಧನ ಸುಳಿವು ಸಿಕ್ಕ ನಂತರ ಪಿಎಸ್‌ಐ ಅರ್ಜುನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಸ್ಥಳೀಯ ನ್ಯಾಯಾಲಯ ಮತ್ತು ಹೈಕೋರ್ಟ್ ಏಕ ಸದಸ್ಯ ಪೀಠ ಕೂಡ ಜಾಮೀನು ನೀಡಲು ನಿರಾಕರಿಸಿತ್ತು. ಬಳಿಕ ಅರ್ಜುನ್ ತಲೆ ಮರೆಸಿಕೊಂಡಿದ್ದರು. ಈಗ ಸಿಐಡಿ ಪೊಲೀಸರು ಆರೋಪಿ ಅರ್ಜುನ್‌ನನ್ನು ಬಂಧಿಸಿದ್ದಾರೆ.

ಮೇ 10 ರಂದು ಈ ಅಮಾನವೀಯ ಘಟನೆ ನಡೆದಿತ್ತು. ಅಂದೇ ಸಂತ್ರಸ್ತ ಯುವಕ ದೂರು ಸಲ್ಲಿಸಿದ್ದರು. ಆದರೆ, ಎಫ್‌ಐಆರ್‌ ದಾಖಲಾಗಿರಲಿಲ್ಲ. ಬಳಿಕ ದಲಿತ ಸಂಘರ್ಷ ಸಮಿತಿ, ಜಿಲ್ಲಾ ಕಾಂಗ್ರೆಸ್ ಸೇರಿದಂತೆ ಸಾಮಾಜಿಕ ಕಾರ್ಯಕರ್ತರು, ಹಲವು ಪತ್ರಿಕೆಗಳಲ್ಲಿ ಇಂಗ್ಲಿಷ್ ಮಾಧ್ಯಮಗಳು ವರದಿ ಮಾಡಿ ಒತ್ತಡ ತಂದ ಬಳಿಕ ಮೇ 22 ರಂದು ದೂರು ದಾಖಲಾಗಿತ್ತು.


ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿದ ಗೋಣಿಬೀಡು PSI ಅರ್ಜುನ್ ವಿರುದ್ಧ FIR: ಅಮಾನತ್ತಿಗೆ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿಯವರ ಹಲವಾರು ಹೇಳಿಕೆಗಳಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಸೀತಾರಾಂ ಯೆಚೂರಿ

0
'ದೇಶದ ವಿವಿಧ ಭಾಗಗಳಲ್ಲಿ ತಮ್ಮ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಹೇಳಿಕೆಗಳನ್ನು ನೀಡಿದ್ದಾರೆ' ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ...