Homeಮುಖಪುಟಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ಲಾಕ್‌ಡೌನ್ ಅವದಿಯಲ್ಲಿ ವಿಶ್ವವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವಾಗ, ಮುಖೇಶ್ ಅಂಬಾನಿಯವರ ಸಂಪತ್ತು ಮಾತ್ರ ಗಣನೀಯವಾಗಿ ಏರಿಕೆಯಾಗಿದ್ದು, ಈ ಪಟ್ಟಿಯಲ್ಲಿ ತಮ್ಮ ಮುಂದಿನ 'ಐದು ಜನ ಶತಕೋಟ್ಯಾಧಿಪತಿಗಳ ಒಟ್ಟು ಸಂಪತ್ತಿ'ಗಿಂತ ಅಂಬಾನಿಯವರ ಸಂಪತ್ತು ಹೆಚ್ಚಾಗಿದೆ.

- Advertisement -
- Advertisement -

IIFL ವೆಲ್ತ್ ಹುರುನ್ ಇಂಡಿಯಾ ರಿಚ್ ಲಿಸ್ಟ್ 2020ರ ವರದಿಯ ಪ್ರಕಾರ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷರಾದ ಮುಖೇಶ್ ಅಂಬಾನಿ, ಕಳೆದ 6 ತಿಂಗಳ ಲಾಕ್‌ಡೌನ್ ಅವಧಿಯಲ್ಲಿ ಗಂಟೆಗೆ 90 ಕೋಟಿಯಂತೆ ಆದಾಯ ಗಳಿಸಿದ್ದು, ಪ್ರಸ್ತುತ ಒಟ್ಟು 6 ಲಕ್ಷದ 58 ಸಾವಿರದ 400 ಕೋಟಿ ಸಂಪತ್ತನ್ನು ಹೊಂದಿದ್ದಾರೆ.

ಲಾಕ್‌ಡೌನ್ ಅವದಿಯಲ್ಲಿ ವಿಶ್ವವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವಾಗ, ಮುಖೇಶ್ ಅಂಬಾನಿಯವರ ಸಂಪತ್ತು ಮಾತ್ರ ಗಣನೀಯವಾಗಿ ಏರಿಕೆಯಾಗಿದ್ದು, ಈ ಪಟ್ಟಿಯಲ್ಲಿ ತಮ್ಮ ಮುಂದಿನ ಐದು ಜನ ಶತಕೋಟ್ಯಾಧಿಪತಿಗಳ ಒಟ್ಟು ಸಂಪತ್ತಿಗಿಂತ ಅಂಬಾನಿಯವರ ಸಂಪತ್ತು ಹೆಚ್ಚಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ಮುಖೇಶ್ ಅಂಬಾನಿ ಕಳೆದ 9 ನೇ ವರ್ಷದಿಂದಲೂ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಮೊದಲ ಸ್ಥಾನವನ್ನು ಉಳಿಸಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಅಂಬಾನಿ ವಿಶ್ವದ ಐದನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಇದನ್ನೂ ಓದಿ: ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ: ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?

ಪ್ರಸಕ್ತ ಹಣಕಾಸು ವರ್ಷದ ಮೊದಲ ಮೂರು ತಿಂಗಳಲ್ಲಿ ಆರ್‌ಐಎಲ್ ಭಾರತದಲ್ಲಿ ಲಾಕ್‌ಡೌನ್ ಹೊರತಾಗಿಯೂ 13,248 ಕೋಟಿ ರೂ. ಆದಾಯ ಗಳಿಸಿದ್ದಾರೆ.

“ಕೊರೊನಾ ಸಾಂಕ್ರಾಮಿಕದ ಆರಂಭದಲ್ಲಿ, ಅಂಬಾನಿಯ ಸಂಪತ್ತು 28% ನಷ್ಟು ಇಳಿದು 3,50,000 ಕೋಟಿ ರೂ.ಗಳಿಗೆ ತಲುಪಿತ್ತು. ನಂತರ ಫೇಸ್‌ಬುಕ್, ಗೂಗಲ್ ಮತ್ತು ಇತರ ಜಿಯೋ ಮತ್ತು ರಿಲಯನ್ಸ್ ರಿಟೇಲ್‌ನಿಂದ ಧನಸಹಾಯ ಮತ್ತು ಕಾರ್ಯತಂತ್ರದ ಹೂಡಿಕೆಯ ಬೆಂಬಲದೊಂದಿಗೆ ‘ವಿ-ಆಕಾರದ ಚೇತರಿಕೆ’ ಕಂಡುಬಂದು, 4 ತಿಂಗಳಲ್ಲಿ 85% ಸಂಪತ್ತು ಹೆಚ್ಚಾಗಿದೆ” ಎಂದು ವರದಿ ತಿಳಿಸಿದೆ.

88.3 ಬಿಲಿಯನ್ ಡಾಲರ್ ನಿವ್ವಳ ಆಸ್ತಿಯನ್ನು ಹೊಂದಿರುವ ಅಂಬಾನಿ ಕುಟುಂಬವು ಏಷ್ಯಾದ ಅತ್ಯಂತ ಶ್ರೀಮಂತ ಕುಟುಂಬವಾಗಿದೆ.

ಲಾಕ್‌ಡೌನ್‌ ಸಂದರ್ಭದಲ್ಲಿ ದೇಶದ ಜಿಡಿಪಿ ಕುಸಿದು, ಇತ್ತೀಚಿನ ವರ್ತಮಾನದ ಪ್ರಕಾರ ಅದು ಶೇ. -23ರಷ್ಟು ಕುಸಿದಿತ್ತು. ನಿರುದ್ಯೋಗ ದಾಖಲೆ ಪ್ರಮಾಣದಲ್ಲಿ ಏರಿತ್ತು. ಕೃಷಿಯೊಂದನ್ನು ಹೊರತುಪಡಿಸಿದರೆ ಉತ್ಪಾದನೆ, ಸೇವಾ ವಲಯ, ನಿರ್ಮಾಣ ವಲಯ ಸೇರಿದಂತೆ ಮಿಕ್ಕೆಲ್ಲಾ ಕ್ಷೇತ್ರಗಳು ತೀವ್ರ ಸಂಕಷ್ಟ ಅನುಭವಿಸಿದ್ದವು. ಹೀಗಿದ್ದಾಗ ಅಂಬಾನಿ ಆಸ್ತಿ ಮತ್ತು ಸಂಪಾದನೆ ಮಾತ್ರ ಏರಿದ್ದು ಹೇಗೆ ಎಂಬುದು ಮಹತ್ವದ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಯೆಸ್‌ ಬ್ಯಾಂಕ್‌ ಬಿಕ್ಕಟ್ಟು: ರಿಲಾಯನ್ಸ್‌ ಮುಖ್ಯಸ್ಥ ಅನಿಲ್‌ ಅಂಬಾನಿಗೆ ಸಮನ್ಸ್‌..!!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತ್ತೆ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

0
ಜೂನ್ 10 ರಿಂದ ಗೋಧಿಗೆ ಬೋನಸ್ ಮತ್ತು ಭತ್ತ ಬಿತ್ತನೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಒತ್ತಾಯಿಸಿರುವ ಪಂಜಾಬ್‌ನ ರೈತರು ಮೇ 17 ರ ಮಂಗಳವಾರದಂದು ಚಂಡೀಗಢ...