Homeಮುಖಪುಟಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

- Advertisement -
- Advertisement -

ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ ಬಂದಾ ಜೈಲಿನಲ್ಲಿ ಮಾಜಿ ಶಾಸಕ ಮುಖ್ತಾರ್ ಅನ್ಸಾರಿಯ ಹತ್ಯೆಗೆ ಸಂಚು ರೂಪಿಸಿದೆ ಎಂದು ಆರೋಪಿಸಿ ಅನ್ಸಾರಿ ಕಟುಂಬ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಅನ್ಸಾರಿ ಅವರ ಕಿರಿಯ ಮಗ ಉಮರ್ ಅನ್ಸಾರಿ ಅವರು ಸುಪ್ರೀಂಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಬಂದಾ ಜೈಲಿನಿಂದ ಸ್ಥಳಾಂತರಿಸಿ ತಮ್ಮ ತಂದೆಗೆ ರಕ್ಷಣೆ ನೀಡುವಂತೆ ಕೋರಿದ್ದಾರೆ. ಉತ್ತರಪ್ರದೇಶದ ಬಂದಾ ಜೈಲಿನಲ್ಲಿ ಮುಖ್ತಾರ್ ತನ್ನ ಜೀವಕ್ಕೆ  ಗಂಭೀರ ಬೆದರಿಕೆಯನ್ನು ಎದುರಿಸುತ್ತಾರೆ ಎಂದು ಉಮರ್ ಸುಪ್ರೀಂಗೆ ಸಲ್ಲಿಸಿದ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಉತ್ತರ ಪ್ರದೇಶದ ಪೂರ್ವ ಮೌ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಮಾಜಿ ಶಾಸಕ ಮುಖ್ತಾರ್,  ಅವರ ಕುಟುಂಬಸ್ಥರು, ಬೆಂಬಲಿಗರ ಮೇಲೆ 2017ರಲ್ಲಿ ಯೋಗಿ ಅಧಿಕಾರಕ್ಕೆ ಬಂದ ನಂತರ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರವು ಮುಖ್ತಾರ್‌ನನ್ನು ದರೋಡೆಕೋರ ಮತ್ತು ಗ್ಯಾಂಗ್ IS191ನ ಮುಖ್ಯಸ್ಥ ಎಂದು ಹೇಳಿಕೊಂಡಿದ್ದು ಮುಖ್ತಾರ್‌ ಮತ್ತು ಅವನ ಮಕ್ಕಳು, ಹಾಲಿ ಶಾಸಕ ಅಬ್ಬಾಸ್ ಅನ್ಸಾರಿ, ಸಹೋದರ ಮತ್ತು ಮಾಜಿ ಸಂಸದ ಅಫ್ಜಲ್ ಅನ್ಸಾರಿ ಸೇರಿದಂತೆ ಹಲವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿದೆ.

ಕಟ್ಟುನಿಟ್ಟಾದ ದರೋಡೆಕೋರರ ಕಾಯಿದೆಯಡಿಯಲ್ಲಿ ಅನ್ಸಾರಿ ಕುಟುಂಬಕ್ಕೆ ಸೇರಿದ ಕೋಟಿಗಟ್ಟಲೆ ಮೌಲ್ಯದ ಆಸ್ತಿಯನ್ನು ಸರ್ಕಾರವು ವಶಪಡಿಸಿಕೊಂಡಿದೆ ಮತ್ತು ನೆಲಸಮಗೊಳಿಸಿದೆ.

ಅರ್ಜಿದಾರರಾದ ಉಮರ್ ಅನ್ಸಾರಿ ಅವರು ತಮ್ಮ ತಂದೆಯ ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.  ಪ್ರಯಾಗ್‌ರಾಜ್‌ನಲ್ಲಿ ಮಾಜಿ ಲೋಕಸಭಾ ಸಂಸದ ಮತ್ತು ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗುವಾಗ ಪೊಲೀಸರ ತಂಡದ ಎದುರು ಪತ್ರಕರ್ತನ ಸೋಗಿನಲ್ಲಿ ಬಂದು ಹತ್ಯೆಗೈದ ಬಗ್ಗೆ ಉಲ್ಲೇಖಿಸಲಾಗಿದೆ. ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಬಂಧಿತ ಅತೀಕ್ ರಕ್ಷಣೆ ಕೋರಿ ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.

ಮುಖ್ತಾರ್ ಅವರ ಪುತ್ರ ಉಮರ್ ಅವರು ತಮ್ಮ ಅರ್ಜಿಯಲ್ಲಿ, ಆದಿತ್ಯನಾಥ್ ಸರ್ಕಾರವು ಮುಖ್ತಾರ್‌ನ್ನು  ಜೈಲಿನಲ್ಲಿ ಹತ್ಯೆಗೆ ದೊಡ್ಡ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಬೆದರಿಕೆಯ ಆರೋಪವು ವಿಶ್ವಾಸಾರ್ಹ ಮಾಹಿತಿಯನ್ನು ಆಧರಿಸಿದೆ. ತಂದೆಯ ಜೀವವು ಗಂಭೀರ ಅಪಾಯದಲ್ಲಿದೆ. ಬಂದಾ ಜೈಲಿನಲ್ಲಿ ಅವರನ್ನು ಹತ್ಯೆಗೆ ಸಂಚು ರೂಪಿಸಲಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

2005ರಲ್ಲಿ ಬಿಜೆಪಿ ಶಾಸಕ ಕೃಷ್ಣಾನಂದ್ ರೈ ಅವರ ಹತ್ಯೆಯ ಆರೋಪದಲ್ಲಿ ಮುಕ್ತಾರ್ ಅವರನ್ನು ಈ ವರ್ಷದ ಆರಂಭದಲ್ಲಿ 10 ವರ್ಷಗಳ ಶಿಕ್ಷೆಗೆ ಗುರಿಪಡಿಸಲಾಯಿತು. ರೈ ಹತ್ಯೆ ಆರೋಪಿಗಳ ಪೈಕಿ ಈಗಾಗಲೇ ನಾಲ್ವರನ್ನು ಕೊಲೆ ಮಾಡಲಾಗಿದೆ. 2006ರಲ್ಲಿ ಫಿರ್ದೌಸ್‌ನನ್ನು ಎಸ್‌ಟಿಎಫ್ ಗುಂಡಿಕ್ಕಿ ಕೊಂದರೆ, ಪ್ರೇಮ್ ಪ್ರಕಾಶ್ ಸಿಂಗ್ ಅಲಿಯಾಸ್ ಮುನ್ನಾ ಬಜರಂಗಿಯನ್ನು 2018ರಲ್ಲಿ ಬಾಗ್‌ಪತ್ ಜೈಲಿನಲ್ಲಿ ಇನ್ನೊಬ್ಬ ಅಪರಾಧಿ ದರೋಡೆಕೋರ ಸುನಿಲ್ ರಾಠಿ ಕೊಲೆ ಮಾಡಿದ್ದಾನೆ. ಆತನ ಹತ್ಯೆಗೆ ಒಂದು ವಾರಕ್ಕೂ ಮುನ್ನ ಬಜರಂಗಿಯ ಪತ್ನಿ ಸೀಮಾ ಸಿಂಗ್ ಲಕ್ನೋದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೆಲವು ರಾಜಕೀಯ ಮುಖಂಡರು ಮತ್ತು ಅಧಿಕಾರಿಗಳು ಸೇರಿ ಪತಿಯ ಕೊಲೆಗೆ ಜೈಲಿನ ಹೊರಗೆ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಝಾನ್ಸಿ ಜೈಲಿನಲ್ಲಿದ್ದ ಸಮಯದಲ್ಲಿ ಆಕೆಯ ಪತಿಗೆ ವಿಷ ಕೊಡುವ ಪ್ರಯತ್ನ ನಡೆದಿತ್ತು ಎಂದು ಸಿಂಗ್ ಹೇಳಿಕೊಂಡಿದ್ದರು.

ಮುಖ್ತಾರ್ ಅವರ ಇನ್ನೊಬ್ಬ ಸಹಾಯಕ ರಾಕೇಶ್ ಪಾಂಡೆಯನ್ನು 2020ರ ಆಗಸ್ಟ್‌ನಲ್ಲಿ ಎನ್‌ಕೌಂಟರ್‌ನಲ್ಲಿ ಕೊಲೆ ಮಾಡಲಾಗಿದೆ. ಮುಖ್ತಾರ್‌ನ ನಿಕಟನಾಗಿದ್ದ ಸಂಜೀವ್ ಮಹೇಶ್ವರಿ ಅಲಿಯಾಸ್ ಜೀವಾ ಅವರನ್ನು ಜೂ.2023ರಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾಗ ಲಕ್ನೋದ ನ್ಯಾಯಾಲಯದ ಕೊಠಡಿಯೊಳಗೆ ಗುಂಡಿಕ್ಕಿ ಕೊಲ್ಲಲಾಯಿತು. ಬಿಜೆಪಿ ನಾಯಕ ಬ್ರಹ್ಮದತ್ ದ್ವಿವೇದಿ ಹತ್ಯೆ ಪ್ರಕರಣದಲ್ಲೂ ಜೀವಾ ಆರೋಪಿಯಾಗಿದ್ದ.

ತನ್ನ ಅರ್ಜಿಯಲ್ಲಿ ಉಮರ್ ಅನ್ಸಾರಿ, ವಿಶ್ವಾಸಾರ್ಹ ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ ತಂದೆಯನ್ನು ಹತ್ಯೆ ಮಾಡುವ ಉದ್ದೇಶದಿಂದ ಕೊಲೆಗಾರ ವ್ಯಕ್ತಿಗಳನ್ನು ಪೊಲೀಸರು ಬಂಧಿಸುತ್ತಾರೆ. ನಂತರ ಅವರನ್ನು ಪ್ರಸ್ತುತ ತಂದೆ ಇರುವ ಬಂದಾ ಜೈಲಿಗೆ ಕರೆದೊಯ್ಯಲಾಗುತ್ತದೆ. ಈ ಬಾಡಿಗೆ ಕೊಲೆಗಾರರಿಗೆ ಜೈಲಿನೊಳಗೆ ಶಸ್ತ್ರಾಸ್ತ್ರಗಳನ್ನು ನೀಡಿ ಕೃತ್ಯ ನಡೆಸಲಾಗುತ್ತದೆ. ಆದರೆ ಸಂಪೂರ್ಣ ಘಟನೆಯನ್ನು ಗ್ಯಾಂಗ್-ವಾರ್ ಎಂದು ದಾರಿ ತಪ್ಪಿಸಲಾಗುತ್ತದೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿದೆ.

ಮುಖ್ತಾರ್ ಅವರು 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅವರು ಆರು ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾರೆ. ಇದರಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಅವರ ಸಹೋದರ ಅವದೇಶ್ ರೈ ಹತ್ಯೆಗೆ ಸಂಬಂಧಿಸಿದಂತೆ ವಾರಣಾಸಿ ನ್ಯಾಯಾಲಯವು ಜೂನ್‌ನಲ್ಲಿ ಅವರಿಗೆ ನೀಡಿದ್ದ ಜೀವಾವಧಿ ಶಿಕ್ಷೆ ಕೂಡ ಸೇರಿದೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...