Homeಮುಖಪುಟಮುಂಬೈ: ಜೊತೆಗಾತಿಯನ್ನು ಕೊಂದು, ಮೃತದೇಹವನ್ನು ತುಂಡರಿಸಿ ಕುಕ್ಕರ್‌ನಲ್ಲಿ ಬೇಯಿಸಿದ ವ್ಯಕ್ತಿ ಅರೆಸ್ಟ್

ಮುಂಬೈ: ಜೊತೆಗಾತಿಯನ್ನು ಕೊಂದು, ಮೃತದೇಹವನ್ನು ತುಂಡರಿಸಿ ಕುಕ್ಕರ್‌ನಲ್ಲಿ ಬೇಯಿಸಿದ ವ್ಯಕ್ತಿ ಅರೆಸ್ಟ್

- Advertisement -
- Advertisement -

ವ್ಯಕ್ತಿಯೊಬ್ಬ ತನ್ನ ಜೊತೆ ಲಿವ್‌-ಇನ್-ಪಾರ್ಟನರ್‌ ಆಗಿದ್ದ ಮಹಿಳೆಯನ್ನು ಕೊಂದು ಮೃತದೇಹವನ್ನು ತುಂಡುಗಳಾಗಿ ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿರುವ ಪ್ರಕರಣ ಮುಂಬೈನ ಮೀರಾ ರಸ್ತೆಯಲ್ಲಿರುವ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಆರೋಪಿಯನ್ನು – ಮನೋಜ್ ಸಹಾನಿ(56) ಎಂದು ಗುರುತಿಸಲಾಗಿದೆ – ಸರಸ್ವತಿ ವೈದ್ಯ (32) ಎಂಬಾಕೆಯೊಂದಿಗೆ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7 ನೇ ಹಂತದ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ವಾಸಿಸುತ್ತಿದ್ದನು. ಬುಧವಾರ ಸಂಜೆ ಆರೋಪಿ ಮನೋಜ್ ಅವರನ್ನು ಬಂಧಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ನಯಾನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು, ”ಆ ಮನೆಯಲ್ಲಿ ಪತ್ತೆಯಾದ ದೇಹದ ಭಾಗಗಳ ಕೊಳೆತಿರುವುದರಿಂದ ಎರಡು-ಮೂರು ದಿನಗಳ ಹಿಂದೆ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆರೋಪಿಯು ಇಷ್ಟು ದಿನ ದೇಹದ ಭಾಗಗಳೊಂದಿಗೆ ವಾಸಿಸುತ್ತಿದ್ದನೆಂದು ತೋರುತ್ತಿದೆ” ಎಂದು ಹೇಳಿದರು.

3-4 ದಿನಗಳ ಹಿಂದೆ ಸರಸ್ವತಿಯನ್ನು ಕೊಂದಿದ್ದ ಮನೋಜ್, ಟೀ ಕಟ್ಟರ್ ಅನ್ನು ಖರೀದಿಸಿ ಆಕೆಯ ದೇಹವನ್ನು 12-13 ತುಂಡು ಮಾಡಿದ್ದನು. ಬಳಿಕ, ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿ, ಹೊರಗೆ ಎಸೆಯುವ ಉದ್ದೇಶದಿಂದ ಪ್ಲಾಸ್ಟಿಕ್ ಪೇಪರ್‌ನಲ್ಲಿ ಸುತ್ತಿ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸರಸ್ವತಿ ವೈದ್ಯ ಮತ್ತು ಮನೋಜ್ ಸಹಾನಿ 3 ವರ್ಷಗಳಿಂದ ಈ ಜೋಡಿ ಫ್ಲ್ಯಾಟ್‌ನಲ್ಲಿ ವಾಸವಿತ್ತು ಎಂದು ನಯಾನಗ‌ ಪೊಲೀಸರು ತಿಳಿಸಿರುವುದಾಗಿ ‘ಇಂಡಿಯಾ ಟುಡೆ’ ವರದಿ ಮಾಡಿದೆ.

ಬುಧವಾರ ಸಂಜೆ 7 ಗಂಟೆ ಸುಮಾರಿಗೆ ನಯಾನಗರ ಪಿಎಸ್‌ಗೆ ನಿವಾಸಿಗಳಿಂದ ಕರೆ ಬಂದಿದ್ದು, ದಂಪತಿಯ ಫ್ಲಾಟ್‌ನಿಂದ ದುರ್ವಾಸನೆ ಬರುತ್ತಿದೆ ಎಂದು ದೂರಿದರು. ಕಟ್ಟಡವನ್ನು ತಲುಪಿ ಫ್ಲಾಟ್‌ಗೆ ಪ್ರವೇಶಿಸಿದಾಗ ಪೊಲೀಸರಿಗೆ ಮಹಿಳೆಯ ದೇಹದ ಭಾಗಗಳು ಪತ್ತೆಯಾಗಿವೆ.

ಇದನ್ನೂ ಓದಿ: ಹೈದ್ರಾಬಾದ್: ಜೊತೆಗಾತಿಯ ಕೊಂದು ತುಂಡುತುಂಡಾಗಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಆರೋಪಿ ಅರೆಸ್ಟ್‌

”ತಕ್ಷಣ ಸಹಾನಿಯನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ನಾವು ಸಹಾನಿಯನ್ನು ಬಂಧಿಸಿದ್ದೇವೆ ಮತ್ತು ಕೊಲೆಯ ಹಿಂದಿನ ಉದ್ದೇಶ ಮತ್ತು ಅದನ್ನು ಹೇಗೆ ಕಾರ್ಯಗತಗೊಳಿಸಿದನು ಎಂಬುದನ್ನು ಕಂಡುಹಿಡಿಯಲು ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಉಪ ಪೊಲೀಸ್ ಆಯುಕ್ತ (ವಲಯ 1) ಜಯಂತ್ ಬಜ್ಬಲೆ ಹೇಳಿದ್ದಾರೆ.

”ಸಹಾನಿ ಅವರು ಮಹಿಳೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದಾನೆ. ಇದರಿಂದಾಗಿ ಅವುಗಳನ್ನು ವಿಲೇವಾರಿ ಮಾಡಲು ಸುಲಭವಾಗುತ್ತದೆ ಎನ್ನುವ ಉದ್ದೇಶ ಅವನದ್ದಾಗಿದೆ ಎಂದು ಅನಿಸುತ್ತದೆ” ಎಂದು ಬಜ್ಬಾಲೆ ಹೇಳಿದರು.

”ದೇಹದ ಕೆಲವು ಭಾಗಗಳು ನಾಪತ್ತೆಯಾಗಿದ್ದು, ಆರೋಪಿ ಕೊಲೆ ಮತ್ತು ಸಾಕ್ಷ್ಯ ನಾಶಕ್ಕಾಗಿ ಅವುಗಳನ್ನು ಎಲ್ಲೋ ಎಸೆದಿರುವ ಶಂಕೆ ವ್ಯಕ್ತವಾಗಿದೆ” ಎಂದು ನಯಾನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ಸಹಾನಿ ವಿರುದ್ಧ ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ.  ಫ್ಲಾಟ್‌ನಿಂದ ಮಾದರಿಗಳು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಂಡವನ್ನು ಸಹ ಕರೆಯಲಾಗಿದೆ.

ಈ ಜೋಡಿ ತಮ್ಮೊಂದಿಗೆ ಬೆರೆಯುತ್ತಿರಲಿಲ್ಲ ಎಂದು ಕಟ್ಟಡದ ನಿವಾಸಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಅವರ ಫ್ಲ್ಯಾಟ್‌ನ ಬಾಗಿಲಿಗೆ ನಾಮಫಲಕವಿಲ್ಲ ಮತ್ತು ಅದನ್ನು ಸೋನಮ್ ಬಿಲ್ಡರ್ಸ್ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...