Homeಮುಖಪುಟಪ್ರತಿಭಟನಾಕಾರರನ್ನು ಬಂಧಿಸುವಂತೆ ಸಿಎಂ ಫಡ್ನವೀಸ್‌ಗೆ ಅಭಿಜೀತ್ ಸವಾಲು

ಪ್ರತಿಭಟನಾಕಾರರನ್ನು ಬಂಧಿಸುವಂತೆ ಸಿಎಂ ಫಡ್ನವೀಸ್‌ಗೆ ಅಭಿಜೀತ್ ಸವಾಲು

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಶಿವಾಜಿ ಪಾರ್ಕ್‌ನಲ್ಲಿ ಜಮಾಯಿಸಿರುವ ಪ್ರತಿಭಟನಾಕಾರರನ್ನು ಬಂಧಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಸಿ‌ಜೆ‌ಪಿ (ಕಾಕ್ರಾಚ್ ಜನತಾ ಪಾರ್ಟಿ) ನಾಯಕ ಅಭಿಜೀತ್ ದಿಪ್ಕೆ ಸವಾಲು ಹಾಕಿದ್ದಾರೆ. ಮುಂಬೈನಲ್ಲಿ ಉದ್ದೇಶಿತ ಪ್ರತಿಭಟನೆಯ ಸುತ್ತ ಬಿಗಿ ಪೊಲೀಸ್ ನಿರ್ಬಂಧಗಳು ಮತ್ತು ಭದ್ರತೆಯನ್ನು ಹೆಚ್ಚಿಸಿರುವ ನಡುವೆಯೇ ಅವರ ಈ ಹೇಳಿಕೆ ಹೊರಬಿದ್ದಿದೆ.

ಸಿ‌ಇ‌ಸಿ ನೇಮಕಾತಿಯಲ್ಲಿ ಪಾರದರ್ಶಕತೆ; 2025ರ ಮತದಾರರ ಪಟ್ಟಿಗೆ ಸಿ‌ಜೆ‌ಪಿ ಆಗ್ರಹ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ನೇಮಕಾತಿಯಲ್ಲಿ ಪಾರದರ್ಶಕತೆ ಇರಬೇಕು. 2025ರ ಮತದಾರರ ಪಟ್ಟಿಯನ್ನು ಮುಂದುವರೆಸಬೇಕು ಎಂದು ಸಿ‌ಜೆ‌ಪಿ (ಕಾಕ್ರಾಚ್ ಜನತಾ ಪಾರ್ಟಿ) ಆಗ್ರಹಿಸಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ನಿರ್ಧಾರಗಳ ಬಗ್ಗೆ ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅಭ್ಯಂತರ ವ್ಯಕ್ತಪಡಿಸಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಸಿ‌ಜೆ‌ಪಿ ಈ ಪ್ರತಿಭಟನೆ ಕೈಗೊಂಡಿದೆ. ಆದರೆ, ಎಲ್ಲಾ ನಿರ್ಧಾರಗಳನ್ನು ಸರ್ವಸಮ್ಮತಿಯಿಂದ ತೆಗೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಪ್ರತಿಭಟನೆ ಆರಂಭದಲ್ಲಿ ಸಿ‌ಜೆ‌ಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರನ್ನು ಗುರುವಾರ ಮರೀನ್ ಡ್ರೈವ್‌ನಿಂದ ಮುಂಬೈ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ಆದರೆ ಅವರನ್ನು ವಶಕ್ಕೆ ಪಡೆಯಲಾಗಿತ್ತು ಎಂಬುದನ್ನು ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ. ಪೊಲೀಸರ ಪ್ರಕಾರ, ದಿಪ್ಕೆ ಅವರು ಸಾಯಂಕಾಲ ಸುಮಾರು 5 ಗಂಟೆಗೆ ಮರೀನ್ ಡ್ರೈವ್‌ನಲ್ಲಿದ್ದು, ಜನರನ್ನು ಭೇಟಿಯಾಗುತ್ತಾ ಅಲ್ಲಿ ನಿಯೋಜನೆಗೊಂಡಿದ್ದ ಸಿಬ್ಬಂದಿಯನ್ನು ಪ್ರಶ್ನಿಸುತ್ತಿದ್ದರು.

ಆದರೆ ದಿಪ್ಕೆ ಅವರ ತಂಡ ನೀಡಿದ ವಿವರಣೆಯ ಪ್ರಕಾರ, ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಒಂದು ಕಪ್ ಚಹಾ ಕುಡಿಯಲು ಬನ್ನಿ ಎಂದು ಕರೆದು ಅವರನ್ನು ಠಾಣೆಗೆ ಕರೆದೊಯ್ದರು, ನಂತರ ಅಲ್ಲಿಂದ ಹೋಗಲು ಅನುಮತಿ ನೀಡಿದರು. ಆ ಅಧಿಕಾರಿ ದಿಪ್ಕೆ ಅವರ ಬಳಿ “ನಿಮ್ಮ ಚಹಾ ಇನ್ನೂ ಬಾಕಿ ಇದೆ” ಎಂದು ಹೇಳಿದ್ದರೆನ್ನಲಾಗಿದೆ. ಠಾಣೆಯಲ್ಲಿ ತಮಗೆ ಯಾವುದೇ ಚಹಾ ನೀಡಲಿಲ್ಲ ಮತ್ತು ಈ ಘಟನೆಯು ತಮ್ಮ ಸಮಯ ವ್ಯರ್ಥ ಮಾಡುವ ಉದ್ದೇಶದಿಂದ ಕೂಡಿತ್ತು ಎಂದು ದಿಪ್ಕೆ ನಂತರ ಆರೋಪಿಸಿದ್ದಾರೆ. ಅವರ ತಂಡವು ಈ ಘಟನೆಯ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದೆ.

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿ‌ಜೆ‌ಪಿ ನಾಯಕ ಅಜಿಂಕ್ಯ ಶಿಂಧೆ ಆಗ್ರಹ

ದಾದರ್‌ನಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿ‌ಜೆ‌ಪಿ ನಾಯಕ ಅಜಿಂಕ್ಯ ಶಿಂಧೆ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಆಗ್ರಹಿಸಿದ್ದಾರೆ. ಮುಂಬೈನಲ್ಲಿ ಪಕ್ಷದ ಚಳವಳಿಯ ವೇಳೆ ಮಾತನಾಡಿದ ಶಿಂಧೆ, ಚುನಾವಣಾ ಆಯೋಗದಿಂದ ಹೊಣೆಗಾರಿಕೆಯನ್ನು ಕೋರಿದ್ದು, ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಅಭಿಜೀತ್ ದಿಪ್ಕೆ ವಾಗ್ದಾಳಿ

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿ‌ಜೆ‌ಪಿ ನಾಯಕ ಅಭಿಜೀತ್ ದಿಪ್ಕೆ, ನೀಟ್ (ನೀಟ್) ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಜಂತರ್ ಮಂತರ್‌ನಲ್ಲಿ ಧರಣಿ ನಡೆಸಿದ ಎರಡು ತಿಂಗಳಿನಲ್ಲೇ ಮತ್ತೊಂದು ಚಳವಳಿಯ ಅಗತ್ಯ ಬಿದ್ದಿದೆ ಎಂದು ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಪ್ರತಿಭಟನಾಕಾರರನ್ನು ಬಂಧಿಸುವಂತೆ ಅವರು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್‌ಗೆ ಸವಾಲು ಹಾಕಿದರು. ಈ ಹೋರಾಟಕ್ಕೆ ಶಿವಸೇನೆ (ಯುಬಿಟಿ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್‌ಎಸ್‌) ಬೆಂಬಲ ಸೂಚಿಸಿವೆ.

ಶಿವಾಜಿ ಪಾರ್ಕ್‌ನಲ್ಲಿ ಜಮಾಯಿಸಿದ ‘ಲಕ್ಷಾಂತರ’ ಜನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಲಕ್ಷಾಂತರ ಜನರು ಜಮಾಯಿಸಿದ್ದಾರೆ ಎಂದು ಕಾಕ್ರಾಚ್ ಜನತಾ ಪಾರ್ಟಿ ಎಕ್ಸ್ (ಟ್ವಿಟರ್) ನಲ್ಲಿ ಪ್ರತಿಪಾದಿಸಿದೆ. ಗ್ಯಾನೇಶ್‌ ಕುಮಾರ್ ಅವರು ಸಾರ್ವಜನಿಕರ ನಂಬಿಕೆಯನ್ನು ಹುಸಿಗೊಳಿಸಿದ್ದಾರೆ ಎಂದು ಆರೋಪಿಸಿರುವ ಪಕ್ಷ, ಅವರ ನಡವಳಿಕೆಯಿಂದಾಗಿ ಜನರು ಅವರನ್ನು “ವೋಟ್ ಚೋರ್” (ಮತಗಳ ಕಳ್ಳ) ಎಂದು ನೋಡಲು ಪ್ರಾರಂಭಿಸಿದ್ದಾರೆ ಎಂದು ಹೇಳಿದೆ.

ನಟಿ ಶಬಾನಾ ಅಜ್ಮಿ ಬೆಂಬಲ

ಶುಕ್ರವಾರ ಮುಂಬೈನಲ್ಲಿ ನಡೆದ ಸಿ‌ಜೆ‌ಪಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಹಿರಿಯ ನಟಿ ಶಬಾನಾ ಅಜ್ಮಿ, ಮತದಾನವು ಮೂಲಭೂತ ಹಕ್ಕು ಮತ್ತು ನಾಗರಿಕರು ಬದಲಾವಣೆ ತರಲು ಇರುವ ಮಾರ್ಗವಾಗಿದೆ ಎಂದು ಹೇಳಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುತ್ತಿರುವುದನ್ನು ಪ್ರಶ್ನಿಸಿದ ಅವರು, ಅನ್ಯಾಯದ ವಿರುದ್ಧ ಪ್ರತಿಭಟಿಸುವುದು ಸಾಂವಿಧಾನಿಕ ಹಕ್ಕು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ನಿರ್ಧಾರಗಳ ಕುರಿತು 48 ಪ್ರಶ್ನೆಗಳನ್ನು ಕೇಳಲು ಅನುಮತಿ ಕೋರಿ ಇಂಡಿಯಾ ಒಕ್ಕೂಟ ಅರ್ಜಿ : ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ 'ಇಂಡಿಯಾ' ಒಕ್ಕೂಟದ ನಾಯಕರು, ಚುನಾವಣಾ ಆಯೋಗಕ್ಕೆ 48 ಪ್ರಶ್ನೆಗಳನ್ನು ಕೇಳಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್...

ಖುಲಾಸೆಗೊಂಡರೂ 7 ವರ್ಷ ಜೈಲಿನಲ್ಲಿದ್ದ ವ್ಯಕ್ತಿಗೆ ₹30 ಲಕ್ಷ ಪರಿಹಾರ ಘೋಷಿಸಿದ ಸುಪ್ರೀಂ ಕೋರ್ಟ್; ಅಕ್ರಮ ಬಂಧನಕ್ಕೆ ಪರಿಹಾರ ನೀಡಲು ಕಾನೂನು ರಚಿಸುವಂತೆ ಶಿಫಾರಸು

ಖುಲಾಸೆ ಆದೇಶದ ಮಾಹಿತಿಯನ್ನು ಜೈಲು ಅಧಿಕಾರಿಗಳಿಗೆ ತಲುಪಿಸುವಲ್ಲಿ ಉಂಟಾದ ಸಂವಹನದ ಕೊರತೆಯಿಂದಾಗಿ, ನಿರ್ದೋಷಿ ಎಂದು ಸಾಬೀತಾದ ನಂತರವೂ ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲೇ ಕಳೆದ ವ್ಯಕ್ತಿಗೆ ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್...

SIR ನಿರ್ಧಾರಗಳಿಗೆ ಮೂವರು ಆಯುಕ್ತರ ಸರ್ವಾನುಮತದ ಒಪ್ಪಿಗೆ ಇತ್ತು ಎಂಬುದಕ್ಕೆ ಚುನಾವಣಾ ಆಯೋಗ ದಾಖಲೆ ಸಲ್ಲಿಸಿಲ್ಲ : ಸುಪ್ರೀಂ ಕೋರ್ಟ್‌ಗೆ ಅರ್ಜಿದಾರರ ಹೇಳಿಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಕಾರ್ಯನಿರ್ವಹಣೆಯನ್ನು ಪ್ರಶ್ನಿಸಿರುವ ಅರ್ಜಿದಾರರು ಸುಪ್ರೀಂ ಕೋರ್ಟ್ ಮುಂದೆ ತಮ್ಮ ವಾದವನ್ನು ಮಂಡಿಸಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ ಭಾರತೀಯ ಚುನಾವಣಾ...

‘ನೋವು, ಆಘಾತ, ಅಪನಂಬಿಕೆಯಲ್ಲಿದ್ದೇನೆ’: ಇಬ್ಬರು ಅತ್ಯಾಚಾರ ಅಪರಾಧಿಗಳ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಆದೇಶದ ಕುರಿತು ಬಿಲ್ಕಿಸ್ ಬಾನು ಪ್ರತಿಕ್ರಿಯೆ

ಗುಜರಾತ್ ಗಲಭೆಯ ಸಂದರ್ಭದಲ್ಲಿ ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ತಮ್ಮ ಕುಟುಂಬ ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳ ಪೈಕಿ ಇಬ್ಬರ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿರುವುದು ತನಗೆ...

ಕಿಶ್ತ್ವಾರ್ ಪೊಲೀಸರ ಹತ್ಯೆ : ‘ಮಸೀದಿ ಘೋಷಣೆ’ ಕುರಿತ ಬಿಜೆಪಿ ಶಾಸಕಿಯ ಹೇಳಿಕೆಗೆ ಆಕ್ರೋಶ; ತನಿಖೆಗೆ ಕಾಂಗ್ರೆಸ್ ಆಗ್ರಹ

ಕಿಶ್ತ್ವಾರ್‌ನಲ್ಲಿ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳ (ಎಸ್‌ಪಿಒ) ಹತ್ಯೆಯ ಕುರಿತು ಹಲವು ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ, ಈ ಘಟನೆಯನ್ನು ಮಸೀದಿ ಘೋಷಣೆಗಳೊಂದಿಗೆ ತಳುಕು ಹಾಕುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಯತ್ನಕ್ಕೆ ಸ್ಥಳೀಯ...

SIR ವಿವಾದ: ಚುನಾವಣಾ ಆಯೋಗಕ್ಕೆ 48 ಪ್ರಶ್ನೆಗಳನ್ನು ಕೇಳಲು ಸುಪ್ರೀಂ ಕೋರ್ಟ್ ಅನುಮತಿ ಕೋರಿದ ರಾಹುಲ್ ಗಾಂಧಿ!

ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಏಕಪಕ್ಷೀಯ ನಿರ್ಧಾರಗಳು ಮತ್ತು ಬೃಹತ್ ಪ್ರಮಾಣದ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಿರುವ ಆರೋಪಗಳಿಗೆ ಸಂಬಂಧಿಸಿದಂತೆ, ಭಾರತೀಯ ಚುನಾವಣಾ...

ಶಾಲಾ ಮಕ್ಕಳ ಮುಂದೆ ರಾಜಕೀಯ ದ್ವೇಷ ಭಾಷಣ | ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ : ಸಚಿವ ಮಧು ಬಂಗಾರಪ್ಪ

ಶಾಲಾ ಮಕ್ಕಳ ಮುಂದೆ ರಾಜಕೀಯ ದ್ವೇಷ ಭಾಷಣ ಮಾಡಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು...

ಬಿಲ್ಕಿಸ್ ಬಾನು ಪ್ರಕರಣ: ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿದ ಸುಪ್ರೀಂ ಕೋರ್ಟ್

2002ರ ಗುಜರಾತ್ ಕೋಮುಗಲಭೆಯ ಸಂದರ್ಭದಲ್ಲಿ ನಡೆದಿದ್ದ ಭೀಕರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬಸ್ಥರ ಹತ್ಯೆ ಪ್ರಕರಣದ ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿ ಅವರಿಗೆ ಜಾಮೀನು ಮಂಜೂರು...

‘ನೀವು ಆ ಕುರ್ಚಿಯಲ್ಲಿ ಕೂರಲು ಅರ್ಹರಲ್ಲ, ನಿಮಗೆ ಸಮಗ್ರತೆ ಇಲ್ಲ’: ಸುಪ್ರೀಂ ಕೋರ್ಟ್‌ನಲ್ಲಿ ಸಿಜೆಐ ಸೂರ್ಯ ಕಾಂತ್ ವಿರುದ್ಧ ವಕೀಲರ ಆಕ್ರೋಶ; ಲೈವ್ ಪ್ರಸಾರ ಮ್ಯೂಟ್!

ನವದೆಹಲಿ: ಭಾರತೀಯ ನ್ಯಾಯಾಂಗದ ಇತ್ತೀಚಿನ ಇತಿಹಾಸದಲ್ಲೇ ಅತ್ಯಂತ ಅಪರೂಪದ ಮತ್ತು ತೀವ್ರ ಘರ್ಷಣೆಯೊಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ. ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ನೇತೃತ್ವದ ಪೀಠದ ಮುಂದೆ ವಾದ ಮಂಡಿಸಲು...

ಜಾರ್ಖಂಡ್‌ | ಕಲ್ಲಿದ್ದಲು ಗಣಿ ವಿಸ್ತರಣೆಗೆ ಕೇಂದ್ರ ಅನುಮತಿ : 6 ಲಕ್ಷ ಮರಗಳ ಮಾರಣಹೋಮ, ಆನೆಗಳ ಆವಾಸಸ್ಥಾನ ನಾಶಕ್ಕೆ ಕಾರಣವಾಗಲಿರುವ ಯೋಜನೆ!

ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿನ ಓಪನ್‌ಕಾಸ್ಟ್ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯ ವಿಸ್ತರಣೆಗಾಗಿ 928.03 ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸಿಕೊಳ್ಳುವ (ವರ್ಗಾಯಿಸುವ) ಯೋಜನೆಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಡಿಯಲ್ಲಿರುವ ಅರಣ್ಯ...