Homeಮುಖಪುಟಎಲ್ಗರ್ ಪರಿಷತ್ ಪ್ರಕರಣ: ವರವರ ರಾವ್ ಹೈದರಾಬಾದ್‌ ಪ್ರಯಾಣಕ್ಕೆ ಕೋರ್ಟ್ ಅನುಮತಿ

ಎಲ್ಗರ್ ಪರಿಷತ್ ಪ್ರಕರಣ: ವರವರ ರಾವ್ ಹೈದರಾಬಾದ್‌ ಪ್ರಯಾಣಕ್ಕೆ ಕೋರ್ಟ್ ಅನುಮತಿ

- Advertisement -
- Advertisement -

2018ರ ಎಲ್ಗರ್ ಪರಿಷತ್- ಮಾವೋವಾದಿ ನಂಟು ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ತೆಲುಗು ಕವಿ ವರವರ ರಾವ್ ಅವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈದರಾಬಾದ್‌ಗೆ ತೆರಳಲು ಮುಂಬೈನ ಎನ್‌ಐಎ ವಿಶೇಷ ನ್ಯಾಯಾಲಯವು ಅನುಮತಿ ನೀಡಿದೆ.

ನ್ಯಾಯಾಧೀಶ ರಾಜೇಶ್ ಕಟಾರಿಯಾ ಅವರ ಪೀಠವು ಎಡಗಣ್ಣಿನ ಶಸ್ತ್ರಚಿಕಿತ್ಸೆಗಾಗಿ ಡಿ.5 ರಿಂದ 11ರ ನಡುವೆ ತೆಲಂಗಾಣ ರಾಜಧಾನಿಗೆ ಪ್ರಯಾಣಿಸಲು ವರವರ ರಾವ್ ಅವರಿಗೆ ಅನುಮತಿ ನೀಡಿದೆ.

ವರವರ ರಾವ್ ಡಿಸೆಂಬರ್ 4ರಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಅವರ ಪ್ರಯಾಣದ ವಿವರಗಳನ್ನು ಮತ್ತು ಅವರು ಹೈದರಾಬಾದ್‌ನಲ್ಲಿ ನಿಲ್ಲುವ ಸ್ಥಳದ ವಿಳಾಸ ಮತ್ತು ಮೊಬೈಲ್‌ ಸಂಖ್ಯೆಯನ್ನು ಒದಗಿಸಬೇಕು. ನ್ಯಾಯಾಲಯವು ನೀಡಿರುವ ಈ ಸ್ವಾತಂತ್ರ್ಯವನ್ನು ದುರ್ಬಳಕೆ ಮಾಡಬಾರದು ಎಂದು ನ್ಯಾಯಾಲಯ ಹೇಳಿದೆ.

ವರವರ ರಾವ್ ಅವರನ್ನು 2018ರಲ್ಲಿ ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿಸಲಾಯಿತು ಮತ್ತು ಬಾಂಬೆ ಹೈಕೋರ್ಟ್ ವರವರ ರಾವ್ ಅವರಿಗೆ ಮಾ.2021ರಲ್ಲಿ ವೈದ್ಯಕೀಯ ಕಾರಣಗಳಿಗಾಗಿ ತಾತ್ಕಾಲಿಕ ಜಾಮೀನು ನೀಡಿತ್ತು.

ವರವರ ರಾವ್ ಅವರಿಗೆ ಆ.2022ರಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂಕೋರ್ಟ್ ಜಾಮೀನು ನೀಡಿತ್ತು. ಜಾಮೀನು ಆದೇಶದಲ್ಲಿ ರಾವ್ ಅವರು ನ್ಯಾಯಾಲಯದ ಅನುಮತಿಯಿಲ್ಲದೆ ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯದ ವ್ಯಾಪ್ತಿಗಿಂತ ಹೊರ ಹೋಗಬಾರದು ಎಂದು ಆದೇಶಿಸಿತ್ತು.

ಕಳೆದ ತಿಂಗಳು ಬಲಗಣ್ಣಿನ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ರಾವ್ ಅವರಿಗೆ ಹೈದರಾಬಾದ್‌ಗೆ ಒಂದು ವಾರ ಪ್ರಯಾಣಿಸಲು ಹೈಕೋರ್ಟ್ ಅನುಮತಿ ನೀಡಿತ್ತು.

ನ್ಯಾಯಮೂರ್ತಿ ಎ ಎಸ್ ಗಡ್ಕರಿ ನೇತೃತ್ವದ ವಿಭಾಗೀಯ ಪೀಠವು ಅವರು ಹಿಂದಿರುಗಿದ ನಂತರ ಮತ್ತೊಂದು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಮತ್ತೊಮ್ಮೆ ಪ್ರಯಾಣಿಸಲು ಅನುಮತಿ ಕೋರಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಹೇಳಿತ್ತು.

ಡಿ.31, 2017ರಂದು ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾವ್ ಮತ್ತು ಇತರ ಹಲವು ಎಡ-ಒಲವಿನ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಪುಣೆ ಪೊಲೀಸರು ಸಮಾವೇಶಕ್ಕೆ ಮಾವೋವಾದಿಗಳ ಬೆಂಬಲವಿತ್ತು ಎಂದು ಆರೋಪಿಸಿದ್ದರು ಮತ್ತು ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಭಾಷಣಗಳು ಮರುದಿನ ಪುಣೆ ಜಿಲ್ಲೆಯ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿದೆ ಎಂದು ಆರೋಪಿಸಲಾಗಿತ್ತು. ನಂತರ ಈ ಪ್ರಕರಣದ ತನಿಖೆಯನ್ನು ಎನ್‌ಐಎ ವಹಿಸಿಕೊಂಡಿತ್ತು.

ಪುಣೆ ಪೊಲೀಸರಿಂದ ಎನ್‌ಐಎಗೆ ವರ್ಗಾಯಿಸಲಾದ ಎಲ್ಗರ್ ಪರಿಷತ್ ಮತ್ತು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ರಾವ್ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎಯಡಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನು ಓದಿ: ವಿವಾದಾತ್ಮಕ ಪೋಸ್ಟ್‌: ರಾಜೀವ್ ಚಂದ್ರಶೇಖರ್ ವಿರುದ್ಧ ಬಲವಂತದ ಕ್ರಮ ಬೇಡ; ಹೈಕೋರ್ಟ್

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರ ಪ್ರದೇಶ: ದಲಿತ ಬಾಲಕಿಯ ಸಜೀವ ದಹನ

0
ಬಯಲು ಶೌಚಾಲಯಕ್ಕೆ ತೆರಳಿದ್ದ 13 ವರ್ಷದ ದಲಿತ ಬಾಲಕಿಯನ್ನು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಬಿಜೆಪಿ ಆಡಳಿತದ ಉತ್ತರಪ್ರದೇಶದ ಹರಯಾ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಬಲರಾಂಪುರ್ ಗ್ರಾಮದಲ್ಲಿ ಬಹಿರ್ದೆಸೆಗೆ ತೆರಳಿದ್ದ 13...