Homeಮುಖಪುಟಮುಂಬೈ: ಬಹು ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ; 7 ಜನರು ಮೃತ; 15 ಜನರಿಗೆ...

ಮುಂಬೈ: ಬಹು ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ; 7 ಜನರು ಮೃತ; 15 ಜನರಿಗೆ ಗಾಯ

- Advertisement -
- Advertisement -

ಮುಂಬೈಯ 20 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಘಟನೆಯಲ್ಲಿ ಸುಮಾರು 15 ಜನರು ಗಾಯಗೊಂಡಿದ್ದಾರೆ ಎಂದು ಅದು ಹೇಳಿದೆ.

ಮುಂಬೈನ ತಾರ್ಡಿಯೊ ಪ್ರದೇಶದ ಗೋವಾಲಿಯಾ ಟ್ಯಾಂಕ್‌ನಲ್ಲಿರುವ ಗಾಂಧಿ ಆಸ್ಪತ್ರೆ ಎದುರಿನ ಕಮಲಾ ಕಟ್ಟಡದ 18 ನೇ ಮಹಡಿಯಲ್ಲಿ ಬೆಳಿಗ್ಗೆ 7 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕಟ್ಟಡದಿಂದ ಭುಗಿಲೆದ್ದ ಬೆಂಕಿಯಿಂದಾಗಿ ಪ್ರದೇಶದಲ್ಲಿ ಭಾರಿ ಹೊಗೆ ಕಾಣಿಸಿಕೊಂಡಿದೆ.

ಇದನ್ನೂ ಓದಿ:ಕ್ಲಬ್‌ಹೌಸ್‌ನಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ದ್ವೇಷ ಭಾಷಣ: ಮುಂಬೈನಲ್ಲಿ ಮೂರು ಜನರ ಬಂಧನ

“ಘಟನೆಯಿಂದ ರಕ್ಷಿಸಲ್ಪಟ್ಟ ಆರು ವೃದ್ಧರಿಗೆ ಆಮ್ಲಜನಕದ ಬೆಂಬಲದ ಅಗತ್ಯವಿತ್ತು, ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸಧ್ಯ, ಬೆಂಕಿಯನ್ನು ನಿಯಂತ್ರಿಸಲಾಗಿದ್ದು ಹೊಗೆ ಇನ್ನೂ ಇದೆ. ಎಲ್ಲಾ ಜನರನ್ನು ರಕ್ಷಿಸಲಾಗಿದೆ” ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಸುದ್ದಿ ಸಂಸ್ಥೆ ಎಎನ್‌ಐಗೆ ಹೇಳಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. 13 ಅಗ್ನಿಶಾಮಕ ಇಂಜಿನ್‌ಗಳು ಮತ್ತು ಏಳು ನೀರಿನ ಜೆಟ್ಟಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಬೃಹತ್‌ ಮುಂಬೈ ಕಾರ್ಪೋರೇಷನ್‌‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಾಳುಗಳನ್ನು ಹತ್ತಿರದ ಮೂರು ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಐವರು ನಾಯರ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರೆ, ಒಬ್ಬರು ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮತ್ತು ಇನ್ನೊಬ್ಬರು ಭಾಟಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಘಟನೆಯ ವೀಡಿಯೊ ಕ್ಲಿಪ್ ಅನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಮುಂಬೈ ನೌಕಾ ನೆಲೆಯಲ್ಲಿ ಸ್ಫೋಟ: ಮೂವರ ಯೋಧರು ಮೃತ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...