ಮುಂಬೈನಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಸರ್ಕಾರಿ ಸಾರಿಗೆ ಬಸ್ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣವೇನು ಎಂದು ಖಚಿತಪಡಿಸಿಕೊಳ್ಳಲು ವಾಹನದಲ್ಲಿ ಯಾವುದೇ ಯಾಂತ್ರಿಕ ದೋಷವಿದೆಯೇ ಎಂದು ಪರಿಶೀಲಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ರಾತ್ರಿ 9.30ರ ಸುಮಾರಿಗೆ ಕುರ್ಲಾ (ಪಶ್ಚಿಮ)ದ ಎಸ್‌ಜಿ ಬಾರ್ವೆ ಮಾರ್ಗದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗಳು ಮತ್ತು ಕೆಲವು ವಾಹನಗಳ ಮೇಲೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ 42 ಮಂದಿ ಗಾಯಗೊಂದಿದ್ದು, ಅದರನ್ನು ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಘಟನೆ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಯಿಸಿದ್ದು, ಪ್ರಾಣಹಾನಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಗೊಂಡ ವ್ಯಕ್ತಿಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಅವರು ಪ್ರಾರ್ಥಿಸಿದ್ದಾರೆ. ಫಡ್ನವಿಸ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಘೋಷಿಸಿದ್ದಾರೆ.
ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಬೃಹನ್ ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ (ಬೆಸ್ಟ್) ಸಂಸ್ಥೆಯು ಭರಿಸಲಿದೆ ಎಂದು ಅವರು ಹೇಳಿದ್ದಾರೆ.
“ಈ ದುರದೃಷ್ಟಕರ ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳೊಂದಿಗೆ ನಾವು ನಿಂತಿದ್ದೇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಸಿಎಂ ಹೇಳಿದ್ದಾರೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ತ್ವರಿತ ನೆರವು ಸಿಗುವಂತೆ ಮಾಡಲು ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಬೆಸ್ಟ್ ಬಸ್, ಪಾದಚಾರಿಗಳು ಮತ್ತು ವಾಹನಗಳ ಮೂಲಕ ಡಿಕ್ಕಿ ಹೊಡೆದ ನಂತರ, ಸೋಮವಾರ ಮೂರು ಸಾವುಗಳು ವರದಿಯಾಗಿತ್ತು. ಘಟನೆಯಲ್ಲಿ ಸಾವಿನ ಸಂಖ್ಯೆ ಏಳಕ್ಕೆ ಏರಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಅಪಘಾತದ ನಂತರ ಒಟ್ಟು 49 ಜನರನ್ನು ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅವರಲ್ಲಿ 35 ಮಂದಿಯನ್ನು ಕುರ್ಲಾದಲ್ಲಿರುವ ಭಾಭಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಅದಾಗ್ಯೂ, ಇಬ್ಬರು ಆಸ್ಪತ್ರೆಗೆ ದಾಖಲಾದ ನಂತರ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಂತರ, ಆರು ಗಾಯಾಳುಗಳನ್ನು ಭಾಭಾ ಆಸ್ಪತ್ರೆಯಿಂದ ಸಿಯಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಈ ವೇಳೆ ಮತ್ತೆ ಒಬ್ಬರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.
ಒಟ್ಟು 49 ಗಾಯಾಳುಗಳ ಪೈಕಿ ಮೂವರನ್ನು ಸಮೀಪದ ಖಾಸಗಿ ಕೊಹಿನೂರ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. ಇತರ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಗಾಯಗೊಂಡ ಇತರ ಆರು ಜನರನ್ನು ಖಾಸಗಿ ಹಬೀಬ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅವರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು ಮತ್ತು ಇತರರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ. ಅವರನ್ನು ಸೆವೆನ್ ಹಿಲ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ. ಅಲ್ಲದೆ, 35 ವರ್ಷದ ವ್ಯಕ್ತಿಯನ್ನು ಕುರ್ಲಾದ ಖಾಸಗಿ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಘಟನೆಯ ನಂತರ ಪೊಲೀಸರು ಬಸ್ ಚಾಲಕ ಸಂಜಯ್ ಮೋರೆಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದು, ಅವರ ವಿರುದ್ಧ ಕೊಲೆಗೆ ಸಮಾನವಲ್ಲದ ಅಪರಾಧದ ನರಹತ್ಯೆಯ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಅವರು ಮದ್ಯದ ಅಮಲಿನಲ್ಲಿದ್ದರೇ ಎಂಬುದನ್ನು ಪರೀಕ್ಷಿಸಲು ಅವರ ರಕ್ತದ ಮಾದರಿಗಳನ್ನು ಸಹ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತದ ಐದು ಗಂಟೆಗಳ ನಂತರ ಘಟನೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಬೆಸ್ಟ್ ಸಂಸ್ಥೆ “ಪ್ರಾಥಮಿಕ ಮಾಹಿತಿಯ ಪ್ರಕಾರ, ಚಾಲಕ ಬಸ್ ನಿಯಂತ್ರಣ ಕಳೆದುಕೊಂಡರು” ಎಂದು ಹೇಳಿದೆ. ಘಟನೆಯಲ್ಲಿ ಹಲವಾರು ವಾಹನಗಳಿಗೂ ಡಿಕ್ಕಿಯಾಗಿದ್ದು, ಚಾಲಕನು ಬಸ್ ನಿಯಂತ್ರಣವನ್ನು ಕಳೆದುಕೊಂಡ ನಂತರ ಬಸ್ “ವೇಗವನ್ನು ಹೆಚ್ಚಿಸಿತು” ಎಂದು ಸಾರಿಗೆ ಸಂಸ್ಥೆ ಹೇಳಿದೆ.
ಬಸ್‌ನ ಮುಂಭಾಗದ ಭಾಗ ಮತ್ತು ವಿಂಡ್‌ಸ್ಕ್ರೀನ್‌ಗೆ ವ್ಯಾಪಕ ಹಾನಿಯಾಗಿದೆ ಮತ್ತು ಅಪಘಾತದಲ್ಲಿ ಕೆಲವು ಕಿಟಕಿ ಗಾಜುಗಳು ಸಹ ಒಡೆದು ಹೋಗಿವೆ ಎಂದು ಬೆಸ್ಟ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಂಗಳವಾರ ಮಧ್ಯರಾತ್ರಿ 12.30ರ ಸುಮಾರಿಗೆ ಕ್ರೇನ್ ಹಾಗೂ ಅರ್ತ್ ಮೂವರ್ ಯಂತ್ರದ ಸಹಾಯದಿಂದ ಬಸ್ ಅನ್ನು ಸ್ಥಳದಿಂದ ಹೊರತೆಗೆದು 1.15ರ ವೇಳೆಗೆ ಕುರ್ಲಾ ಡಿಪೋಗೆ ತರಲಾಗಿದೆ.
ಇದನ್ನೂ ಓದಿ: ಮಸೀದಿಗಳ ವಿರುದ್ಧ ನಡೆಸಲಾಗುತ್ತಿರುವ ದಾಳಿಯಲ್ಲಿ ಮಧ್ಯಪ್ರವೇಶ ಮಾಡಬೇಕಾಗಿದ್ದು ಸುಪ್ರೀಂಕೋಟ್ ಜವಾಬ್ದಾರಿ – ಸಿಪಿಐ(ಎಂ)
ಮಸೀದಿಗಳ ವಿರುದ್ಧ ನಡೆಸಲಾಗುತ್ತಿರುವ ದಾಳಿಯಲ್ಲಿ ಮಧ್ಯಪ್ರವೇಶ ಮಾಡಬೇಕಾಗಿದ್ದು ಸುಪ್ರೀಂಕೋಟ್ ಜವಾಬ್ದಾರಿ – ಸಿಪಿಐ(ಎಂ)


